ಬೆಂಗಳೂರು :ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಉಗ್ರ ಭಾಷಣಕಾರ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ.
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ಶ್ರೀರಂಗಪಟ್ಟಣ 3 ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಭಟ್ ಪರವಾಗಿ ಹಿರಿಯ ವಕೀಲರು ಹಾಜರಾಗದೇ ಇದ್ದಿದ್ದರಿಂದ ಅವರ ಕಿರಿಯ ವಕೀಲರು ಸಮಯ ಕೇಳಿದರು. “ಆರೋಪಿ ವಿರುದ್ದ ಚಾರ್ಜ್ ಶೀಟ್ ಸಿದ್ದವಾಗಿದೆ” ಎಂದು ನ್ಯಾಯಾಧೀಶರು ಎಸ್ ಬಾಲನ್ ಅವರಿಗೆ ತಿಳಿಸಿದರು.
ಪೊಲೀಸ್ ತನಿಖೆಯಲ್ಲಿ ಆರೋಪ ಸಾಬೀತು ಹಿನ್ನೆಲೆ ದೂರುದಾರರ ಪರವಾಗಿ ನ್ಯಾಯಾಲಯಕ್ಕೆ ಹಾಜರಾದ ಹಿರಿಯ ವಕೀಲ ಎಸ್ ಬಾಲನ್, ಚಾರ್ಜ್ ಶೀಟ್ ಹಿನ್ನೆಲೆಯಲ್ಲಿ ಜಾಮೀನು ರದ್ದು ಮಾಡಬೇಕು ಎಂದು ವಾದ ಮಂಡಿಸಿದ್ದಾರೆ. ವಿಚಾರಣೆಯನ್ನು ಜನವರಿ 10 ಕ್ಕೆ ಮುಂದೂಡಿದ್ದು, ಅಂದು ಸಂಜೆ 4 ಗಂಟೆಗೆ ವಿಸ್ತೃತ ವಾದ ನಡೆಯಲಿದೆ ಎಂದು ತಿಳಿದು ಬಂದಿದೆ.