ರಸ್ತೆ ಅಪಘಾತ: ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ ನಿಧನ

ಲಬುರಗಿ: ಜನವರಿ 30ರಂದು ನಗರದ ಹೊಸ ಆರ್‌ಟಿಒ ಕಚೇರಿ ಬಳಿ ಬೈಕ್ ಸ್ಕಿಡ್ ಆಗಿ ತಲೆಗೆ ಗಾಯ ಮಾಡಿಕೊಂಡಿದ್ದ ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ (49) ಚಿಕಿತ್ಸೆಗೆ ಸ್ಪಂದಿಸಿದೇ ನಿಧನರಾದರು. ಅಪಘಾತ

ಅಪಘಾತ ನಡೆದ ಬಳಿಕ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೈದರಾಬಾದ್‌ನ ಆಸ್ಪತ್ರೆಗೆ ಸೇರಿಸಲಾಗಿತ್ತು. ಶುಕ್ರವಾರ ಬೆಳಗಿನ ಜಾವ ನಿಧನರಾದರು‌.

ಇದನ್ನೂ ಓದಿ: ಪಶು-ಪಕ್ಷಿ ಲೋಕದ ವಿಸ್ಮಯಗಳು: ಸಂಚಿಕೆ-2

ಎಸ್‌ಎಫ್‌ಐ ವಿದ್ಯಾರ್ಥಿ ಚಳವಳಿಯಲ್ಲಿ ಭಾಗವಹಿಸಿದ್ದ ಶರಣಪ್ಪ ಸೈದಾಪುರ ಅವರು ನಂತರ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಅಧ್ಯಾಪಕರ ಬೇಡಿಕೆಗಳ ಈಡೇರಿಕೆಗಾಗಿ ಹೋರಾಟ ನಡೆಸಿದ್ದರು.

ಪ್ರಸ್ತುತ ಜೇವರ್ಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಎನ್ ಎಸ್ ಎಸ್ ಕಾರ್ಯಕ್ರಮ ಅಧಿಕಾರಿಯಾಗಿದ್ದರು.

ಅಗರಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ. ಹೈದರಾಬಾದ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಮಾಡಲಿದ್ದಾರೆ. ನಂತರ ಸಂಜೆ ಕಲಬುರಗಿಗೆ ಪಾರ್ಥಿವ ಶರೀರ ತರಲಾಗುವುದು ಎಂದು ಕುಟುಂಬದ ಆಪ್ತರು ತಿಳಿಸಿದ್ದಾರೆ.

ಇದನ್ನೂ ನೋಡಿ: Karnataka Legislative Assembly Day 06 Live | 16 ನೇ ವಿಧಾನ ಸಭೆಯ 9ನೇ ಅಧಿವೇಶನದ ನೇರಪ್ರಸಾರ

Donate Janashakthi Media

Leave a Reply

Your email address will not be published. Required fields are marked *