ಬೆಂಗಳೂರು : ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಲ್ಯಾಣ
ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ.
ಇದನ್ನೂ ಓದಿ : ಏ.2ರಿಂದ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ
ಮಾರ್ಚ್ 30ರಂದು ಭದ್ರಾ ಜಲಾಶಯದಲ್ಲಿ 28 ಟಿಎಂಸಿ ನೀರು ಸಂಗ್ರಹ ಲಭ್ಯವಿದೆ. ಇದರಲ್ಲಿ ಮೇ 8ರವರೆಗೆ ನೀರಾವರಿಗೆ 11ಟಿಎಂಸಿ ಮತ್ತು ಕುಡಿಯುವ ನೀರಿಗಾಗಿ 14ಟಿಎಂಸಿ ಅಗತ್ಯವಿದ್ದು, 3ಟಿಎಂಸಿ ನೀರು ಜಲಾಶಯದಲ್ಲಿ ಉಳಿಸಿಕೊಳ್ಳಬೇಕಾಗಿದೆ. ಎಪ್ರಿಲ್ 6ರಿಂದ ಕಾಲುವೆಗಳನ್ನು ಕೇವಲ ಕುಡಿಯುವ ನೀರಿನ ಪೂರೈಕೆಗೆ ಮಾತ್ರ ಬಳಸಿಕೊಳ್ಳಲಾಗುವುದು. ರೈತಾಪಿ ಜನರ ಬೆಳೆಗಳಿಗೆ ಮತ್ತು ಜನರಿಗೆ ಕುಡಿಯುವ ನೀರು ಪೂರೈಸಲು ಸರ್ಕಾರ ಎಲ್ಲಾ ಹಂತದಲ್ಲೂ ಬದ್ಧವಾಗಿದೆ ಎಂದಿದ್ದಾರೆ.
ಇದನ್ನೂ ನೋಡಿ : ಇಂಗ್ಲೀಷ್ ಕಲಿಯೋಣ | ಸರ್ವನಾಮಗಳು – Pronouns | ತೇಜಸ್ವಿನಿ Janashakthi Media