ನವದೆಹಲಿ : ಕಮಲ್ ಹಾಸನ್ ಶುಕ್ರವಾರ ಸಂಸತ್‌ಗೆ ಪ್ರವೇಶಿಸಿದ್ದಾರೆ. ರಾಜ್ಯಸಭಾ ಸದಸ್ಯರಾಗಿ ಅವರು ತಮಿಳಿನಲ್ಲೇ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಮಾತನಾಡಿದ ಅವರು, ರಾಜ್ಯಸಭಾ ಸದಸ್ಯನಾಗಿ ನಾನು ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಮತ್ತು ನನ್ನ ಹೆಸರನ್ನು ನೋಂದಾಯಿಸಲಿದ್ದೇನೆ. ಒಬ್ಬ ಭಾರತೀಯನಾಗಿ, ನಾನು ನನ್ನ ಕರ್ತವ್ಯವನ್ನು ಮಾಡುತ್ತೇನೆ ಎಂದು ಹೇಳಿದರು. ಪ್ರವೇಶ
2024 ರ ಲೋಕಸಭಾ ಚುನಾವಣೆಗೆ ಮುನ್ನ ಅವರ ಪಕ್ಷವಾದ ಮಕ್ಕಳ್ ನೀಧಿ ಮಯ್ಯಮ್ (ಎಂಎನ್‌ಎಂ) ಡಿಎಂಕೆ ನೇತೃತ್ವದ ಬಣಕ್ಕೆ ಸೇರಿದ ನಂತರ, ಹಾಸನ್ ಅವರಿಗೆ ಲೋಕಸಭಾ ಸ್ಥಾನಕ್ಕೆ ಸ್ಪರ್ಧಿಸುವ ಅಥವಾ ರಾಜ್ಯಸಭಾ ನಾಮನಿರ್ದೇಶನವನ್ನು ಸ್ವೀಕರಿಸುವ ಆಯ್ಕೆಯನ್ನು ನೀಡಲಾಯಿತು. ಸಾರ್ವತ್ರಿಕ ಚುನಾವಣೆಯ ಸಮಯದಲ್ಲಿ ಅವರ ಪಕ್ಷವು ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟಕ್ಕೆ ಸಂಪೂರ್ಣ ಬೆಂಬಲ ನೀಡಿದ್ದರೂ ಸಹ, ಅವರು ರಾಜ್ಯಸಭಾ ಸದಸ್ಯತ್ವವನ್ನು ಆರಿಸಿಕೊಂಡರು.
ಇದನ್ನೂ ಓದಿ: ಅಂಗಡಿಯಲ್ಲಿ ಅಪ್ರಾಪ್ತ ಕಾರ್ಮಿಕ ಪತ್ತೆ; ಮಾಲೀಕರ ವಿರುದ್ಧ ಎಫ್‌ಐಆರ್
ಕಮಲ್ ಹಾಸನ್ 2018 ರಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆಗೆ ಸೆಡ್ಡು ಹೊಡೆಯುವ ಸಲುವಾಗಿ ಎಂಎನ್‌ಎಂ ಅನ್ನು ಪ್ರಾರಂಭಿಸಿದ್ದರು. ಆದರೆ ಇತ್ತೀಚಿನ ವರ್ಷಗಳಲ್ಲಿ, ಅವರು ತಮ್ಮ ನಿಲುವನ್ನು ಸಡಿಲಗೊಳಿಸಿ ಮತ್ತು ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡರು, ಈ ಬದಲಾವಣೆಯು “ವೈಯಕ್ತಿಕ ರಾಜಕೀಯ ಲಾಭಕ್ಕಿಂತ ಹೆಚ್ಚಾಗಿ ರಾಷ್ಟ್ರೀಯ ಹಿತಾಸಕ್ತಿಗಾಗಿ” ಎಂದು ಹೇಳಿದರು.
ಈ ವರ್ಷದ ಆರಂಭದಲ್ಲಿ, ಚೆನ್ನೈನಲ್ಲಿ ನಡೆದ ಎಂಎನ್‌ಎಂನ ಎಂಟನೇ ಸಂಸ್ಥಾಪನಾ ದಿನಾಚರಣೆಯಲ್ಲಿ, ಕಮಲ್ ಹಾಸನ್ ತಮ್ಮ ಸಂಸತ್ತಿ ಪದಾರ್ಪಣೆ ಮಾಡುವ ಬಗ್ಗೆ ಸುಳಿವು ನೀಡಿದ್ದರು. “ಈ ವರ್ಷ, ನಮ್ಮ ಧ್ವನಿ ಸಂಸತ್ತಿನಲ್ಲಿ ಕೇಳಿಬರುತ್ತದೆ. ಮುಂದಿನ ವರ್ಷ, ನಿಮ್ಮ ಧ್ವನಿ ರಾಜ್ಯ ವಿಧಾನಸಭೆಯಲ್ಲಿ ಕೇಳಿಬರುತ್ತದೆ” ಎಂದು ಅವರು ಹೇಳಿದ್ದರು.
ಇದನ್ನೂ ನೋಡಿ: ‘ಸ್ವಚ್ಛ ವಿಧಾನಸಭೆ’ಗಾಗಿ ಎಂಜಿನಿಯರ್ ಪಾದಯಾತ್ರೆ Janashakthi Media
