ನವದೆಹಲಿ: ಹೊಸ ವರ್ಷದ ಮೊದಲ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಅಂದು ಕರ್ತವ್ಯದಲ್ಲಿದ್ದ 11 ಮಂದಿ ಪೊಲೀಸ್ ಸಿಬ್ಬಂದಿಗಳನ್ನು ದೆಹಲಿ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಅಮಾನತು ಮಾಡಿದ್ದಾರೆ.
ಇದನ್ನು ಓದಿ: ಯುಪಿ: ಪೊಲೀಸರಿಂದ ಹಲ್ಲೆಗೊಳಗಾದ ಯುವತಿ ಸಾವು-ತೀವ್ರ ಪ್ರತಿಭಟನೆ
2023ರ ಜನವರಿ 1ರ ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾತ್ರಿ ಅಂಜಲಿ ಸಿಂಗ್(20 ವರ್ಷ) ಎಂಬ ಯುವತಿ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಆರೋಪಿಗಳು 13 ಕಿ.ಮೀ.ವರೆಗೆ ಎಳೆದೊಯ್ದುರುವ ಭೀಕರ ಘಟನೆ ನಡೆದಿದೆ. ಪರಿಣಾಮ ಯುವತಿ ಮೃತಪಟ್ಟಿದ್ದಾಳೆ. ಈ ಪ್ರಕರಣದಲ್ಲಿ ಗೃಹ ಸಚಿವಾಲಯದ ಶಿಫಾರಸ್ಸಿನ ಮೇಲೆ ನಿರ್ಲಕ್ಷ್ಯ ತೋರಿದ ರೋಹಿಣಿ ಜಿಲ್ಲೆಯ 11 ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಅಂಜಲಿ ಸಿಂಗ್ ಎಂಬ ಯುವತಿ ಚಾಲನೆ ಮಾಡುತ್ತಿದ್ದ ದ್ವಿಚಕ್ರ ವಾಹನ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಡಿ ಸಿಲುಕಿಕೊಂಡು ಮೃತಪಟ್ಟಿದ್ದಾಳೆ. ಯುವತಿ ಶವ 13 ಕಿಲೋಮೀಟರ್‌ಗೂ ಹೆಚ್ಚು ಪ್ರಯಾಣಿಸಿದೆ. ಈ ಪ್ರಕರಣದ ಬಗ್ಗೆ ವಿವರವಾದ ವರದಿಯನ್ನು ಕೇಂದ್ರ ಗೃಹ ಸಚಿವಾಲಯ ಪಡೆದುಕೊಂಡಿತು. ಅದರಂತೆ, ಆಮಾನತು ಆದೇಶ ನೀಡಿದೆ.
ಮರಣೋತ್ತರ ಪರೀಕ್ಷೆಯ ವರದಿಯಂತೆ ಯುವತಿ ದೇಹದ ಮೇಲೆ 40 ಗಾಯಗಳಾಗಿತ್ತು ಎಂದು ವರದಿಯಲ್ಲಿ ಉಲ್ಲೇಖವಾಗಿದೆ. ಅಪಘಾತದ ತೀವ್ರತೆಯಿಂದಾಗಿ ಯುವತಿಯ ಮೆದುಳು ಕಾಣೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪ ತೋರಿದ ಒಟ್ಟು 11 ಪೊಲೀಸರನ್ನು ಅಮಾನತುಗೊಳಿಸಲಾಗಿದೆ.
ಇದನ್ನು ಓದಿ: ಮದುವೆಗೆ ಕುಜ ದೋಷ ಅಡ್ಡಿ: ಜ್ಯೋತಿಷಿ ಮಾತು ಕೇಳಿ ಮದುವೆಗೆ ನಿರಾಕರಣೆ, ಮಹಿಳಾ ಪೊಲೀಸ್ ಪೇದೆ ಸಾವು
ಅಂದು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರಾ ಅವರಿಗೆ ಗೃಹ ಸಚಿವಾಲಯ ಪತ್ರ ಬರೆದಿದೆ. ಇದರೊಂದಿಗೆ, ಪ್ರಕರಣದ ತನಿಖೆಯ ನಿರ್ಲಕ್ಷ್ಯದ ಕಾರಣ ಮೇಲ್ವಿಚಾರಣಾ ಅಧಿಕಾರಿಗಳ ವಿರುದ್ಧ ಶೋಕಾಸ್ ನೋಟಿಸ್ ನೀಡುವಂತೆಯೂ ಸೂಚಿಸಿದೆ.
ಘಟನೆಯ ಹಿನ್ನೆಲೆ
ಅಂದು ಮುಂಜಾನೆ 3.30ರ ಸುಮಾರಿಗೆ ಹೊಸ ವರ್ಷದ ಸಂಭ್ರಮಾಚರಣೆ ಮುಗಿಸಿ, ಕುಡಿದು ವಾಹನ ಚಲಾಯಿಸುತ್ತಿದ್ದ ಐವರ ಕಾರು ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದಿತ್ತು. ಆ ವೇಳೆ ಆಕೆಯ ಬಟ್ಟೆ ಕಾರಿಗೆ ಸಿಕ್ಕಿಹಾಕಿಕೊಂಡಿದೆ. ಆ ವೇಳೆ ಆಕೆಯನ್ನು 13 ಕಿ.ಮೀವರೆಗೂ ಎಳೆದುಕೊಂಡು ಹೋಗಿತ್ತು. ಕಾರಿನಲ್ಲಿದ್ದವರು ಪಾನಮತ್ತರಾಗಿದ್ದರಿಂದ ಆಕೆ ತಮ್ಮ ಕಾರಿನಡಿ ಸಿಲುಕಿಕೊಂಡಿದ್ದು ಅವರಿಗೆ ತಿಳಿದಿಲ್ಲ ಎನ್ನಲಾಗುತ್ತಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಪ್ರತ್ಯಕ್ಷದರ್ಶಿಯ ಪ್ರಕಾರ, ಕಾರಿನಲ್ಲಿದ್ದ ಆರೋಪಿಗಳು ಯು-ಟರ್ನ್ ತೆಗೆದುಕೊಳ್ಳುವ ಮೂಲಕ ಸುಮಾರು 4ರಿಂದ 5 ಕಿಲೋಮೀಟರ್ ಒಂದೇ ರಸ್ತೆಯಲ್ಲಿ ಪದೇ ಪದೇ ವಾಹನ ಚಲಾಯಿಸಿದ್ದಾರೆ. ಹೀಗಾಗಿ, ಇದು ಕೇವಲ ಅಪಘಾತವಲ್ಲ. ಆಕೆ ಕಾರಿನಡಿ ಸಿಲುಕಿದ್ದು ತಿಳಿದೇ ಅವರು ಆಕೆಯನ್ನು ಎಳೆದುಕೊಂಡು ಹೋಗಿದ್ದರು ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸುಮಾರು ಒಂದೂವರೆ ಗಂಟೆಗಳ ಕಾಲ ಯುವತಿಯ ಶವವನ್ನು ಎಳೆದೊಯ್ಯಲಾಗಿದೆ ಎಂದು ತಿಳಿಸಿದ್ದಾರೆ. ಒಂದೂವರೆ ಗಂಟೆಗಳ ನಂತರ ಆ ಯುವತಿಯ ಶವವು ಕಾಂಜ್ವಾಲಾ ರಸ್ತೆಯ ಜ್ಯೋತಿ ಗ್ರಾಮದ ಬಳಿ ಬಿದ್ದಿತು.