ಕನ್ನಡ ಭಾಷೆ ಕಡ್ಡಾಯ ಅಲ್ಲ; ಗೃಹ ಸಚಿವಾಲಯದ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ

ಬೆಂಗಳೂರು; ಫೆ. 01 : ‘ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್ ಭಾಷೆಯನ್ನು ಮಾತ್ರ ಬಳಸಬೇಕು, ತ್ರಿಭಾಷಾಷಾ ಸೂತ್ರವನ್ನು ರಾಜ್ಯಗಳು ಪಾಲಿಸಿದರೆ ಸಾಕು ಎಂದು  ಕೇಂದ್ರ ಗೃಹ ಸಚಿವಾಲಯ ಸ್ಪಷ್ಟಪಡಿಸಿದ್ದು ಕೇಂದ್ರ ಸರ್ಕಾರದ ಈ ವಾದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಭದ್ರಾವತಿಯಲ್ಲಿ  ಏರ್ಪಡಿಸಿದ್ದ ಸಿಆರ್‌ಪಿಎಫ್‌ ಕ್ಷಿಪ್ರ ಕಾರ್ಯಾಚರಣೆ ಪಡೆಯ (ಆರ್‌ಎಎಫ್‌)  ಕೇಂದ್ರಕ್ಕೆ ಅಡಿಗಲ್ಲು ಹಾಕುವ ಕಾರ್ಯಕ್ರಮ ಹಾಗೂ ಶಿಲಾನ್ಯಾಸದ ಫಲಕಗಳಲ್ಲಿ ಹಿಂದಿ ಮತ್ತು ಇಂಗ್ಲಿಷ್‌ ಭಾಷೆ ಮಾತ್ರ ಬಳಸಿದೆ. ಆದರೆ ಕನ್ನಡವನ್ನು ಬಳಸಿಲ್ಲ. ಕನ್ನಡ ಕಡೆಗಣಿಸಿರುವುದಕ್ಕೆ ಕನ್ನಡಪರ ಹೋರಾಟಗಾರರು, ಸಾಹಿತಿಗಳು ಪ್ರಗತಿಪರ ಹೋರಾಟಗಾರರು, ರಾಜಕೀಯ ಮುಖಂಡರು ಇದನ್ನು ಖಂಡಿಸಿದ್ದಾರೆ.

ಕನ್ನಡ ಕಡೆಗಣನೆಗೆ ಸಾಹಿತಿ ಕಮಲಾ ಹಂಪನಾ ಅವರು ಕೂಡ ವಿರೋಧವನ್ನು ವ್ಯಕ್ತಪಡಿಸಿದ್ದಾರೆ. ಉದಯಬಾನು ಕಲಾ ಸಂಘಟ ಸಹಯೋಗದಲ್ಲಿ ಕನ್ನಡ ಸಂಘರ್ಷ ಸಮಿತಿಯು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ಆಡಳಿತದಲ್ಲಿ ಇಂಗ್ಲಿಷ್ ಮತ್ತು ಹಿಂದಿಗಳಿ ಮಾತ್ರ ಆಧ್ಯತೆ ನೀಡಲಾಗುತ್ತಿದೆ. ಇಲ್ಲಿರುವ ಕೇಂದ್ರ ಸರ್ಕಾರದ ಕಚೇರಿಗಳು ಸೇರಿದಂತೆ ಎಲ್ಲಡೇ ಕನ್ನಡಕ್ಕೆ ಮೊದಲ ಆಧ್ಯತೆ ನೀಡಬೇಕು. ಹಿಂದಿಯೇತರ ಭಾಷಿಗರು ಇರುವ ರಾಜ್ಯಗಳಾದ ಕರ್ನಾಟಕ, ತಮುಳುನಾಡು, ಆಂಧ್ರಪ್ರದೇಶಗಳಲ್ಲಿ ಅವರ ಮಾತೃಭಾಷೆಗೆ ಆಧ್ಯತೆ ಕೊಡಬೇಕು. ಕೇಂದ್ರ ಸರ್ಕಾರದ ಯಾವುದೇ ಕಚೇರಿಯಾಗಿರಲಿ ಅವರು ರಾಜ್ಯಭಾಷೆಗೆ ಮೊದಲ ಸ್ಥಾನ ನೀಡಬೇಕು ಎಂದು ಹೇಳಿದರು.

ಇದನ್ನು ಓದಿ : ಹಿಂದಿ, ಇಂಗ್ಲಿಷ್‍ ಪ್ರಶ್ನೆಪತ್ರಿಕೆ: ಕನ್ನಡಿಗರ ಅಸಮಾಧಾನ

ಇನ್ನು ಕನ್ನಡ ಭಾಷೆ ತಿರಸ್ಕಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ವಿಕಾಸ ರಂಗವೂ ವಿರೋಧವನ್ನು ವ್ಯಕ್ತಪಡಿಸಿದೆ. ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಹಾಗೂ ಕಾರ್ಖಾನೆಗಳಲ್ಲಿ ಕನ್ನಡ ಬಳಸದಿದ್ದರೆ ಹೋರಾಟ ಮಾಡಲಾಗುವುದು ಎಂದು ವಿಕಾಸ ರಂಗದ ಅಧ್ಯಕ್ಷ ವ.ಚ. ಚನ್ನೇಗೌಡ ಎಚ್ಚರಿಕೆಯನ್ನು ನೀಡಿದೆ.

ಕೇಂದ್ರ ಸರ್ಕಾರದ ನಿಲುವಿಗೆ ವಿರೊಧ ಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪತ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲಿ‌ ಕನ್ನಡ ಬಳಕೆಗೆ ಕಾನೂನು-ನಿಯಮಗಳು ಅಡ್ಡಬರುತ್ತದೆ ಎಂದಾದರೆ ಮೊದಲು ಅವುಗಳನ್ನು ಕಿತ್ತೆಸೆಯಬೇಕು. ಕರ್ನಾಟಕದಲ್ಲಿ‌ ನಡೆಯುವ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು. ಕನ್ನಡ ಬಳಕೆ ಬಗ್ಗೆ ಕೇಂದ್ರ ಸರ್ಕಾರದ ನಿಲುವು ಖಂಡನೀಯ. ಈ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟನೆ ನೀಡಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಕ್ಷಣ ಕೇಂದ್ರಕ್ಕೆ ಪತ್ರ ಬರೆದು ಈ ಬಗ್ಗೆ ವಿವರಣೆ ಪಡೆದು ರಾಜ್ಯದ ಜನತೆಗೆ ತಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿ : ಇಂದಿನಿಂದ ‘ಕನ್ನಡ ಕಾಯಕ ವರ್ಷ’ ಆಚರಣೆ: ಸಿಎಂ ಯಡಿಯೂರಪ್ಪ

ಇನ್ನು ವಿದ್ಯಾರ್ಥಿಗಳು ಕೂಡ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ಗೃಹ ಸಚಿವಾಲ ಏಕೆ ತ್ರಿಭಾಷಾ ಸೂತ್ರ ಪಾಲನೆಯ ಬಗ್ಗೆ ಗಮನ ಹರಿಸುತ್ತಿಲ್ಲ? ತ್ರಿಭಾಷೆ ಸೂತ್ರದ ಬಗ್ಗೆ ಏನು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಕೇಂದು ಗೃಹ ಇಲಾಖೆಗೆ ಪ್ರಶ್ನಿಸುತ್ತಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *