ಕರ್ನಾಟಕ ಅರೆಭಾಷೆ ಸಂಸ್ಕತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಭೇಟಿ

ಮಡಿಕೇರಿ-ನಗರದಲ್ಲಿರುವ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಶನಿವಾರ ಭೇಟಿ ನೀಡಿ ವೀಕ್ಷಿಸಿದರು.ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಪ್ರಕಟವಾಗಿರುವ ಪುಸ್ತಕಗಳ ಬಗ್ಗೆ ಮಾಹಿತಿ ಪಡೆದರು. ಹಾಗೆಯೇ ಸುಳ್ಯ ಮತ್ತು ಮಡಿಕೇರಿ ತಾಲ್ಲೂಕಿನ ಸ್ಥಳನಾಮ ಬಗ್ಗೆ ಹೆಚ್ಚಿನ ಅಧ್ಯಯನ ಮಾಡಬೇಕು ಎಂದು ಇದೇ ಸಂದರ್ಭದಲ್ಲಿ ಸಲಹೆ ನೀಡಿದರು.

ಇದನ್ನು ಓದಿ :-ಕುಡಿದ ಅಮಲಿನಲ್ಲಿ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ವ್ಯಕ್ತಿ: ಇಡೀ ಮನೆ ಬೆಂಕಿಗಾಹುತಿ

ಅಕಾಡೆಮಿ ಚಟುವಟಿಕೆ ಸಂಬಂಧಿಸಿಸಿದಂತೆ ದಾಖಲೆಗಳ ಪುಸ್ತಕ ಇರಬೇಕು. ಜೊತೆಗೆ ಇವುಗಳ ಬಗ್ಗೆ ಅಧ್ಯಯನ ಮಾಡುವಂತಾಗಬೇಕು. ಅರೆಭಾಷೆಯಲ್ಲಿ ಉತ್ತಮ ಪುಸ್ತಕಗಳನ್ನು ಪ್ರಕಟಿಸಿರುವುದು ಶ್ಘಾಘನೀಯ ಕಾರ್ಯವಾಗಿದೆ ಎಂದರು. ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕಳೆದ 12 ವರ್ಷದಲ್ಲಿ ಸಂಶೋಧನಾ ಹೊತ್ತಿಗೆ, ಪ್ರಬಂಧ, ಲೇಖನ, ಕಲೆ, ಸಂಸ್ಕøತಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ 80 ಕ್ಕೂ ಹೆಚ್ಚು ಪುಸ್ತಕಗಳು ಪ್ರಕಟಗೊಂಡಿವೆ. ಹಾಗೆಯೇ ತ್ರೈಮಾಸಿಕ ಪತ್ರಿಕೆ ‘ಹಿಂಗಾರ’ 34 ಸಂಚಿಕೆ ಪ್ರಕಟಗೊಂಡಿದೆ ಎಂದು ಅಕಾಡೆಮಿ ರಿಜಿಸ್ಟ್ರಾರ್ ಚಿನ್ನಸ್ವಾಮಿ ಮಾಹಿತಿ ನೀಡಿದರು.

ಸರ್ಕಾರದ ನಿರ್ದೇಶನದಂತೆ ನಾಮಫಲಕಗಳಲ್ಲಿ ಕನ್ನಡ ಅನುಷ್ಠಾನ ಕಡ್ಡಾಯವಾಗಿ ಜಾರಿಯಾಗಬೇಕು. ಆಹಾರ ಪೊಟ್ಟಣಗಳಲ್ಲಿಯೂ ಸಹ ಕನ್ನಡ ಬಳಕೆ ಆಗಬೇಕು. ಈ ಸಂಬಂಧ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿದ್ದು, ಅದರಂತೆ ಕ್ರಮವಹಿಸಬೇಕು ಎಂದರು.ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಅವರು ಕನ್ನಡ ಅನುಷ್ಠಾನ ಬಗ್ಗೆ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಹಲವು ಬಾರಿ ಸಭೆ ನಡೆಸಲಾಗಿದೆ. ಕನ್ನಡ ಅನುಷ್ಠಾನ ಸಂಬಂಧಿಸಿದಂತೆ ಮಾಹಿತಿ ನೀಡಲಾಗಿದೆ. ಜೊತೆಗೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Donate Janashakthi Media

Leave a Reply

Your email address will not be published. Required fields are marked *