ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಜುಲೈ 14 ಸೋಮವಾರದಂದು ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ಸಮಯದಿಂದ ಸರೋಜಾ ದೇವಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕನ್ನಡ
2019ರಲ್ಲಿ ರಿಲೀಸ್ ಆದ ಪುನೀತ್ ರಾಜ್‌ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರವಾಗಿದೆ.
ಇದನ್ನೂ ಓದಿ: ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ – ಭಾಗ 1
ಸರೋಜಾ 1967ರಲ್ಲಿ ಹರ್ಷ ರನ್ನು ವಿವಾಹ ಆದರು. 1986ರಲ್ಲಿ ಪತಿ ನಿಧನ ಹೊಂದಿದರು. ಈಗ ಪತಿ ಹರ್ಷ ಸಮಾಧಿ ಪಕ್ಕದಲ್ಲೇ ಸರೋಜಾ ಅವರ ಅಂತ್ಯಕ್ರಿಯೆ ನಡೆಯಲಿದೆ. ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.
ಸರೋಜಾ ದೇವಿ ಜನಿಸಿದ್ದು 1938ರ ಜನವರಿ 7ರಂದು. ಅವರು ಬೆಂಗಳೂರಿನಲ್ಲಿ ಹುಟ್ಟಿದರು. ಅವರ ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ ಅವರು ಹೌಸ್ವೈಫ್ ಆಗಿದ್ದರು. ಸರೋಜಾ ಬಳಿ ಭೈರಪ್ಪ ಅವರು ಡ್ಯಾನ್ಸ್ ಕಲಿಯುವಂತೆ ಪ್ರೋತ್ಸಾಹಿಸಿದರು. ಅವರು ಚಿತ್ರರಂಗಕ್ಕೆ ಬರಲು ತಂದೆಯಿಂದಲೇ ಬೆಂಬಲ ಸಿಕ್ಕಿತ್ತು.
ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು.
ಸರೋಜಾದೇವಿ ಅವರು ಕನ್ನಡದಲ್ಲಿ ಡಾ. ರಾಜ್‌ಕುಮಾರ್ ಅವರೊಂದಿಗೆ ಅಮರಶಿಲ್ಪಿ ಜಕಣಾಚಾರಿ, ಕಥಾಸಾಗರ, ಬಬ್ರುವಾಹನ, ಭಾಗ್ಯವಂತರು, ಆಷಾಡಭೂತಿ, ಶ್ರೀರಾಮಪೂಜಾ, ಕಚ ದೇವಯಾನಿ, ರತ್ನಗಿರಿ ರಹಸ್ಯ, ಕೋಕಿಲವಾಣಿ, ಸ್ಕೂಲ್‌ಮಾಸ್ಟರ್, ಪಂಚರತ್ನ, ಲಕ್ಷ್ಮೀಸರಸ್ವತಿ, ಚಿಂತಾಮಣಿ, ಭೂಕೈಲಾಸ, ಅಣ್ಣತಂಗಿ, ಜಗಜ್ಯೋತಿ ಬಸವೇಶ್ವರ, ದೇವಸುಂದರಿ, ವಿಜಯನಗರದ ವೀರಪುತ್ರ, ಮಲ್ಲಮ್ಮನ ಪವಾಡ, ಶ್ರೀಕೃಷ್ಣರುಕ್ಮಿಣಿ ಸತ್ಯಭಾಮ, ಪೂರ್ಣಿಮಾ, ಗೃಹಿಣಿ, ಪಾಪಪುಣ್ಯ, ಸಹಧರ್ಮಿಣಿ, ಶ್ರೀನಿವಾಸಕಲ್ಯಾಣ, ಚಾಮುಂಡೇಶ್ವರಿ ಮಹಿಮೆ, ಚಿರಂಜೀವಿ, ಶನಿಪ್ರಭಾವ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.
ಸರೋಜಾದೇವಿ ಅವರು ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿ ಗಣೇಶನ್, ಮತ್ತು ಎಂ.ಜಿ. ರಾಮಚಂದ್ರನ್ ಅವರೊಂದಿಗೆ ಅನೇಕ ಹಿಟ್ ಚಿತ್ರಗಳಲ್ಲಿ ಅಭಿನಯಿಸಿದ್ದರು. ಅವರು ಹಿಂದಿಯಲ್ಲಿ ದಿಲೀಪ್ ಕುಮಾರ್, ರಾಜೇಂದ್ರ ಕುಮಾರ್, ಶಮ್ಮಿ ಕಪೂರ್, ಮತ್ತು ಸುನೀಲ್ ದತ್ ಅವರೊಂದಿಗೆ ನಟಿಸಿದ್ದಾರೆ.
ಇದನ್ನೂ ನೋಡಿ: ಜೀವನಾಂಶ ಅಂದರೇನು? ಅದನ್ನು ಪಡೆಯುವುದು ಹೇಗೆ?Janashakthi Media
