ಬೆಂಗಳೂರು: ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ-2024’ಕ್ಕೆ ಮಂಗಳವಾರ ರಾಜ್ಯ ವಿಧಾನ ಪರಿಷತ್ತಿನಲ್ಲಿ ಅಂಗೀಕಾರ ದೊರೆತಿದೆ. ಎಲ್ಲಾ ವಾಣಿಜ್ಯ ಸಂಸ್ಥೆಗಳು ಕನ್ನಡದಲ್ಲಿ 60% ದಷ್ಟು ಸೂಚನಾ ಫಲಕಗಳನ್ನು ಹೊಂದಿರುವುದನ್ನು ಕಡ್ಡಾಯಗೊಳಿಸುವ ಈ ಮಸೂದೆಯನ್ನು ಈ ಹಿಂದೆ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿತ್ತು. ಕನ್ನಡ ಭಾಷಾ ಮಸೂದೆ
ಪರಿಷತ್ತಿನಲ್ಲಿ ವಿಧೇಯಕದ ಮೇಲಿನ ಚರ್ಚೆಗೆ ಉತ್ತರಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ರಾಜ್ಯಾದ್ಯಂತ ವಿಧೇಯಕದ ನಿಬಂಧನೆಗಳನ್ನು ಜಾರಿಗೊಳಿಸಲು ಜಾರಿ ವಿಭಾಗವನ್ನು ರಚಿಸಲಾಗುವುದು ಎಂದು ಹೇಳಿದ್ದಾರೆ. ಕನ್ನಡ ಭಾಷಾ ಮಸೂದೆ
ಇದನ್ನೂ ಓದಿ: ‘ಜ್ಞಾನ ದೇಗುಲವಿದು, ಧೈರ್ಯವಾಗಿ ಪ್ರಶ್ನಿಸಿ’ | ಅಧಿವೇಶನದಲ್ಲಿ ಗದ್ದಲ ಎಬ್ಬಿಸಿದ ಬಿಜೆಪಿ
ಕಾನೂನಿನ ನಿಬಂಧನೆಗಳನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುವುದು ಮತ್ತು ಅವರು ತಮ್ಮ ವ್ಯಾಪಾರ ಪರವಾನಗಿಯನ್ನು ಸಹ ಕಳೆದುಕೊಳ್ಳು ಸಾಧ್ಯತೆ ಇದೆ ಎಂದು ಸಚಿವರು ಹೇಳಿದ್ದಾರೆ. ವಾಣಿಜ್ಯ ಸಂಸ್ಥೆಗಳು ಆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕನ್ನಡಿಗರ ಸಂಖ್ಯೆಯನ್ನು ಸೂಚಿಸುವ ಡ್ಯಾಶ್‌ಬೋರ್ಡ್ ಅನ್ನು ಸಹ ಹಾಕಬೇಕಾಗುತ್ತದೆ ಎಂದು ಹೇಳಿದ್ದಾರೆ.
ಚರ್ಚೆಯ ವೇಳೆ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರು ಸರ್ಕಾರಕ್ಕೆ ಕಾನೂನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಿದ್ದು, ಕನ್ನಡ ಪರ ಸಂಘಟನೆಗಳ ಸದಸ್ಯರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ. ಈ ಕುರಿತು ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ತಂಗಡಗಿ ಪರಿಷತ್ ಸದಸ್ಯರಿಗೆ ತಿಳಿಸಿದರು.
ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ದೊರಕಿಸಿಕೊಡಲು ಹಾಗೂ ಭಾಷೆಯ ಉತ್ತೇಜನಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ಪಡೆಯಲು ಸಚಿವರು ಬಿಜೆಪಿ ಸದಸ್ಯರ ಸಹಕಾರ ಕೋರಿದ್ದಾರೆ. ತೆರಿಗೆ ವಿಕೇಂದ್ರಿಕರಣದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಭಾಷೆಗೂ ಅನ್ಯಾಯವಾಗಿದೆ ಎಂದು ಅವರು ಹೇಳಿದ್ದಾರೆ.
ವಿಡಿಯೊ ನೋಡಿ: ಸೆಕ್ಯೂಲರಿಸಂ ಹಾಗೂ ಸೊಶಿಯಲಿಸಂ ಬೆಸದಾಗ ಮಾತ್ರ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ – ಡಾ. ಪ್ರಕಾಶ್