ಬೆಂಗಳೂರು ಫೆ 05: ಫೆಬ್ರವರಿ ತಿಂಗಳ ಕೊನೆಯಲ್ಲಿ ಹಾವೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದ 86ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.
ಸಮ್ಮೇಳನದ ಸಿದ್ಧತೆ ಇನ್ನೂ ಪೂರ್ಣಗೊಂಡಿಲ್ಲ. ಅಲ್ಲದೆ, ಹೆಚ್ಚಿನ ಸಂಖ್ಯೆಯ ಜನರು ಸೇರುವುದರಿಂದ, ಕೋವಿಡ್ ನಿಯಮ ಪಾಲನೆ ಕಷ್ಟವಾಗಲಿದೆ. ಫೆಬ್ರವರಿ ಅಂತ್ಯದಲ್ಲಿ ಕೋವಿಡ್ ಹೊಸ ನಿಯಮಾವಳಿ ಜಾರಿಗೆ ಬಂದ ಬಳಿಕ ಮಾರ್ಚ್ 9ಕ್ಕೆ ಮತ್ತೊಂದು ಸಭೆ ನಡೆಸಿ, ಸಮ್ಮೇಳನ ದಿನಾಂಕ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಈ ಸಂಬಂಧ ಸಚಿವರು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಗೃಹ ಸಚೀವರಾದ ಶ್ರೀ ಬಸವರಾಜ ಬೊಮ್ಮಾಯಿ, ಕೃಷಿ ಸಚಿವರಾದ ಶ್ರೀ ಬಿ.ಸಿ.ಪಾಟೀಲ, ತೋಟಗಾರಿಕೆ ಸಚಿವರಾದ ಶ್ರೀ ಆರ್. ಶಂಕರ, ಶಾಸಕರಾದ ನೆಹರು ಓಲೇಕಾರ್, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಮನು ಬಳಿಗಾರ ಹಾಗೂ ಹಾವೇರಿ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.
ಜನಶಕ್ತಿ ಮೀಡಿಯಾ ವಾಟ್ಸಪ್ ಸೇರಿಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಗಳನ್ನು ಓದಿ : ದೊಡ್ಡರಂಗೇಗೌಡ ವಿವಾದಾತ್ಮಕ ಹೇಳಿಕೆಗೆ ವ್ಯಾಪಕ ಖಂಡನೆ