ಬೆಂಗಳೂರು | ಕನ್ನಡ ಸಾಹಿತ್ಯ ಪರಿಷತ್ತಿನೊಳಗೆ ರಾಜಕೀಯ ಪಕ್ಷಗಳು ಮೂಗು ತೂರಿಸುವುದು ಸರಿಯಲ್ಲ- ಪ್ರೊ.ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನೊಳಗೆ ಯಾವುದೇ ರಾಜಕೀಯ ಪಕ್ಷಗಳು ತಮ್ಮ ಕೊಳಕು ಮೂಗನ್ನು ತೂರಿಸಬೇಡಿ. ಯಾಕೆಂದರೆ,  ನಾಲ್ವಡಿ ಕೃಷ್ಣರಾಜ ಒಡೆಯರ್ ಜನಮುಖಿ, ಸಮಾಜಮುಖಿ ದೃಷ್ಟಿಕೋನವನ್ನು ಇಟ್ಟುಕೊಂಡು ಕಟ್ಟಿ ಬೆಳೆಸಿರುವ ಸಂಸ್ಥೆ ಹೋದಬಾರಿ ನಡೆದ ಚುನಾವಣೆ ಇಂದಿಗೂ ಮೈ ಉರಿಯುವಂತೆ ಮಾಡುತ್ತಿದೆ ಎಂದು ಹಿರಿಯ ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು

ಇದನ್ನೂ ಓದಿ  : ಬಿಹಾರ ಚುನಾವಣೆ | ಎನ್.ಡಿ.ಎ ಮತ್ತು ಮಹಾಘಟಬಂಧನ ನಡುವೆ ಹಣಾಹಣಿ

ರವಿವಾರ ನಗರದ ಕೊಂಡಜ್ಜಿ ಸಭಾಂಗಣದಲ್ಲಿ ನಡೆದ ಸಮಾಜಮುಖಿ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಯತ್ತತೆಯನ್ನು ಗೌರವಿಸಿ. ನಿಮ್ಮ ರಾಜಕೀಯ ಪಕ್ಷದ ಬೇಳೆ ಬೇಯಿಸಿಕೊಳ್ಳಲು ಬರಬೇಡಿ. ಬೇರೆ ಸಂಸ್ಥೆಗಳನ್ನು ಕಬ್ಜಾ ಮಾಡಿಕೊಂಡಿರುವ ರೀತಿಯೊಳಗೆ ಕಸಪಾ ವನ್ನು ಕಬ್ಜಾ ಮಾಡಿಕೊಂಡು ಹೋಗಬೇಡಿ. ಇದು ಇಡೀ ಕನ್ನಡ ಜನತೆ ಪರವಾಗಿ ರಾಜಕೀಯ ಪಕ್ಷಗಳಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಹೇಳಿದರು.

ಇದನ್ನೂ ನೋಡಿ : ವಚನಾನುಭವ 33 | ಉದಕ ಮಜ್ಜನವಲ್ಲ ಪತ್ರೆ ಪೂಜೆಯಲ್ಲ Janashakthi Media

Donate Janashakthi Media

Leave a Reply

Your email address will not be published. Required fields are marked *