86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ, ಕಲಾತಂಡಗಳ ಮೆರುಗು

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯುತ್ತಿದೆ. ವಿವಿಧ ಕಲಾತಂಡಗಳು ಸಾಹಿತ್ಯ ಮೆರವಣಿಗೆಯಲ್ಲಿ ಪಾಲ್ಗೊಂಡು ಮೆರುಗು ನೀಡಿದವು.

ಸಾಹಿತ್ಯ ಸಮ್ಮೇಳನಕ್ಕೆ ಇಂದು ಬೆಳಗ್ಗೆ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್​ ಹೆಬ್ಬಾರ್​ ರಾಷ್ಟ್ರ ಧ್ವಜಾರೋಹಣ ಮಾಡಿದರೆ, ಸಾಹಿತ್ಯ ಪರಿಷತ್ತಿನ ಧ್ವಜಾರೋಹಣವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ ಹಾಗೂ ಕನ್ನಡ ಧ್ವಜಾರೋಹಣ ಕಾರ್ಯಕ್ರಮವನ್ನು ಜಿಲ್ಲಾ ಕ.ಸಾ.ಪ ಅಧ್ಯಕ್ಷ ಲಿಂಗಯ್ಯ ಹಿರೇಮಠ ನೆರವೇರಿಸಿದ್ದಾರೆ. ಮೂರು ಧ್ವಜಾರೋಹಣವನ್ನು ಏಕಕಾಲಕ್ಕೆ ಮಾಡಲಾಯಿತು.

ಇದನ್ನೂ ಓದಿಜನಸಾಹಿತ್ಯ ಸಮ್ಮೇಳನ ಆಹ್ವಾನ ಪತ್ರ ಬಿಡುಗಡೆ

ಸುಮಾರು 128 ಎಕರೆ ವಿಸ್ತೀರ್ಣದಲ್ಲಿ ವಿವಿಧ ವೇದಿಕೆಗಳನ್ನು ನಿರ್ಮಿಸಲಾಗಿದೆ. ಪ್ರಧಾನ ವೇದಿಕೆಯಲ್ಲಿ ಸುಮಾರು 30 ಸಾವಿರ ಜನರು ಕುಳಿತುಕೊಳ್ಳಲು ಆಸನ ಕಲ್ಪಿಸಲಾಗಿದೆ. ಇದರ ಜೊತೆಗೆ ಸಮನಾಂತರ ವೇದಿಕೆಗಳನ್ನು ನಿರ್ಮಿಸಲಾಗಿದ್ದು, ಅಲ್ಲಿಯೂ ಸಹ ಸಾವಿರಾರು ಜನರಿಗೆ ಕುಳಿತುಕೊಳ್ಳುವ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಮೂರು ವೇದಿಕೆಗಳಲ್ಲಿ ವಿವಿಧ ಗೋಷ್ಠಿಗಳು ನಡೆಯಲಿದ್ದು, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಪುಸ್ತಕ ಮತ್ತು ವಾಣಿಜ್ಯ ಬಳಕೆಗೆ ಸುಮಾರು 600 ಮಳಿಗೆಗಳನ್ನು ಸಿದ್ಧಪಡಿಸಲಾಗಿದೆ. ಪ್ರಮುಖವಾಗಿ ಮೂರು ಬೃಹತ್ ಮಳಿಗೆಗಳಲ್ಲಿ ಪ್ರದರ್ಶನ ಏರ್ಪಡಿಸಲಾಗಿದೆ. ಒಂದರಲ್ಲಿ ತೋಟಗಾರಿಕೆ ಇಲಾಖೆ ಫಲಪುಷ್ಪಪ್ರದರ್ಶನ, ಎರಡನೇಯದರಲ್ಲಿ ವಾರ್ತಾ ಇಲಾಖೆ ಪ್ರದರ್ಶನ ಮತ್ತು ಮೂರನೇಯ ಪ್ರದರ್ಶನವನ್ನು ಕಸಾಪ ಏರ್ಪಡಿಸಿತ್ತು. ಕಸಾಪ ಪ್ರದರ್ಶನದಲ್ಲಿ ವಿಶೇಷವಾಗಿ ಕನ್ನಡದ ಪ್ರಥಮಗಳ ಪುಸ್ತಕಗಳ ಪ್ರದರ್ಶನ ಮಾಡಲಾಗಿದೆ.ಸಾಹಿತ್ಯ ಸಮ್ಮೇಳನ ನಡೆಯುವ 6,7 ಮತ್ತು 8 ರಂದು ಸಂಜೆ 7 ಗಂಟೆಯಿಂದ 10 ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

Donate Janashakthi Media

Leave a Reply

Your email address will not be published. Required fields are marked *