ಕನ್ನಡದ ಹೆಸರಾಂತ ಪೋಷಕ ನಟ ಲಕ್ಷ್ಮಣ್ ನಿಧನ

ಬೆಂಗಳೂರು: ಕನ್ನಡದ ಹೆಸರಾಂತ ಪೋಷಕ ನಟ ಲಕ್ಷ್ಮಣ್ (74) ನಿಧನರಾಗಿದ್ದಾರೆ. ಹೃದಯಾಘಾತದಿಂದಾಗಿ ಅವರು ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ನಟ ಲಕ್ಷ್ಮಣ್ ಕೆಲವು ವರ್ಷಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು (ಜನವರಿ 23) ಎದೆನೋವು ಕಾಣಿಸಿಕೊಂಡಿದೆ ಕೂಡಲೇ ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಇಸಿಜಿ ಮಾಡಿಸಿದ ನಂತರ ಮನೆಗೆ ಕರೆತರಲಾಗಿದೆ. ನಂತರ ಹೃದಯಾಘಾತ ಸಂಭವಿಸಿ ಅವರು ನಿಧನರಾಗಿದ್ದಾರೆ.

ಇದನ್ನು ಓದಿ: 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಹಿರಿಯ ನಟ ಲೋಹಿತಾಶ್ವ ನಿಧನ

ಬೆಂಗಳೂರಿನ ಮೂಡಲಪಾಳ್ಯದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಇಂದು ಸಂಜೆ ಲಕ್ಷ್ಮಣ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೆಲಕಾಲ ಫ್ಯಾಕ್ಟರಿಯಲ್ಲೂ ಕೆಲಸ ಮಾಡುತ್ತಿದ್ದರು. ರಂಗಭೂಮಿಯಲ್ಲಿ ಹಲವು ವರ್ಷಗಳ ಕಾಲ ನಟರಾಗಿ ಸೇವೆ ಸಲ್ಲಿಸಿ, ಆನಂತರ ಸಿನಿಮಾ ರಂಗಕ್ಕೆ ಬಂದಿದ್ದರು. ಚಿತ್ರರಂಗದಲ್ಲಿ ಅವರು ಪೋಷಕ ಪಾತ್ರದ ಮೂಲಕ ಗಮನ ಸೆಳೆದಿದ್ದರು. ಉಷಾ ಸ್ವಯಂವರ ಎಂಬ ಸಿನಿಮಾ ಮೂಲಕ ನಾಯಕರಾಗಿ ಬೆಳ್ಳಿ ತೆರೆಗೆ ಪಾದಾರ್ಪಣೆ ಮಾಡಿದ್ದರು. ಬಳಿಕ ಅವರು ಖಳನಾಯಕನಾಗಿ ಮಿಂಚಿದ್ದರು.

ಇದನ್ನು ಓದಿ: ಆಸ್ಕರ್‌ ಆಕಾಡೆಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ‘ಛೆಲ್ಲೋ ಶೋ’ ಚಿತ್ರದ ಬಾಲನಟ ಕ್ಯಾನ್ಸರ್‌ಗೆ ಬಲಿ

ಅಂತ, ಮಲ್ಲ, ಯಜಮಾನ, ಒಲವಿನ ಉಡುಗೊರೆ, ಸೂರ್ಯವಂಶ, ಸಾಂಗ್ಲಿಯಾನ, ಸೇರಿದಂತೆ 300 ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಲಕ್ಷ್ಮಣ್, ಹೆಚ್ಚಿನ ಸಿನಿಮಾಗಳಲ್ಲಿ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಮಿಂಚಿದ್ದರು.

ಕನ್ನಡದ ಶ್ರೇಷ್ಠ ನಟರಾದ ಡಾ.ರಾಜ್ ‌ಕುಮಾರ್, ಡಾ.ವಿಷ್ಣುವರ್ಧನ್, ಟೈಗರ್ ಪ್ರಭಾಕರ್, ಶಂಕರ್ ನಾಗ್, ಅಂಬರೀಶ್, ರವಿಚಂದ್ರನ್, ಶಿವರಾಜ್ ಕುಮಾರ್, ‌ಸುದೀಪ್ ಸೇರಿದಂತೆ ಹಲವು ನಟರೊಂದಿಗೆ ಅವರು ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಲಕ್ಷ್ಮಣ್ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ನಟ, ನಟಿಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *