ಕನ್ನಡದ ಖ್ಯಾತ ಕವಿ, ವಿಮರ್ಶಕ ಕೆ.ವಿ ತಿರುಮಲೇಶ್‌ ನಿಧನ

ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ.ತಿರುಮಲೇಶ್‌ (82) ಇನ್ನಿಲ್ಲ. ಹೈದರಾಬಾದಿನ ತಮ್ಮ ಮಗಳ ಮನೆಯಲ್ಲಿ ವಾಸವಾಗಿದ್ದ ಅವರು, ಕೊನೆಯುಸಿರೆಳೆದಿದ್ದಾರೆ.

ಕೆ.ವಿ. ತಿರುಮಲೇಶ್ ಕನ್ನಡದ ಪ್ರಮುಖ ಬರಹಗಾರರಲ್ಲೊಬ್ಬರು. ಅವರ ಅಕ್ಷಯ ಕಾವ್ಯ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ವಠಾರ ಸಂಕಲನದ ಮೂಲಕ ಕಾವ್ಯ ಕ್ಷೇತ್ರ ಪ್ರವೇಶಿಸಿದ ತಿರುಮಲೇಶ್‌ ಅವರು, ಒಂಬತ್ತು ಕವನ ಸಂಕಲನ ಪ್ರಕಟಿಸಿದ್ದಾರೆ.

ಇದನ್ನು ಓದಿ: ನಾಟಕ ಬೆಂಗ್ಳೂರು-23: ಹದಿನೈದನೇ ವರ್ಷದ ರಂಗ ಸಂಭ್ರಮ

ಕೇರಳದ ಕಾಸರಗೋಡು ಜಿಲ್ಲೆಯ ಕಾರಡ್ಕ ಎಂಬ ಗ್ರಾಮದಲ್ಲಿ 1940ರ ಸೆಪ್ಟೆಂಬರ್ 12ರಂದು ಜನಿಸಿದ ಕೆ.ವಿ. ತಿರುಮಲೇಶ್ ಕನ್ನಡ ಭಾಷೆಯ ಬಹು ಮುಖ್ಯ ಕವಿ, ಕತೆಗಾರ, ಭಾಷಾ ವಿಜ್ಞಾನಿ, ವಿದ್ವಾಂಸ ಹಾಗೂ ವಿಮರ್ಶಕ. ಹೈದರಾಬಾದ್ ನ ಸೆಂಟ್ರಲ್ ಇನ್ಸ್‌ಟಿಟ್ಯೂಟ್ ಆಫ್ ಇಂಗ್ಲಿಷ್ ಆ್ಯಂಡ್ ಫಾರಿನ್ ಲ್ಯಾಂಗ್ವೇಜಸ್’ ನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿದ್ದಾರೆ.

ಕೆ ವಿ ತಿರುಮಲೇಶ್ ಅವರು ಆರು ಕಥಾ ಸಂಕಲನಗಳು, ನಾಲ್ಕು ಕಿರು ಕಾದಂಬರಿಗಳು, ಎರಡು ನಾಟಕಗಳು, ಭಾವಗೀತೆ ಹಾಗೂ ಮಕ್ಕಳ ಕವಿತೆಗಳ ತಲಾ ಒಂದು ಸಂಕಲನಗಳನ್ನು ರಚಿಸಿದ್ದಾರೆ.

ಅವರ ಕೃತಿಗಳಲ್ಲಿ ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಸಮಸ್ಯೆಗಳ ಸಂಕೀರ್ಣತೆಯನ್ನು ಅನಾವರಣಗೊಳಿಸುವ ಪರಿ ವಿಶಿಷ್ಟವಾದದ್ದು. ವಿಶ್ವದ ಅಗ್ರಮಾನ್ಯ ಚಿಂತನೆ, ಜ್ಞಾನ, ಅನುಭವ, ದರ್ಶನಗಳನ್ನು ನಮ್ಮ ಕನ್ನಡ ಭಾಷೆಯೂ ತನ್ನದಾಗಿಸಿಕೊಳ್ಳಬೇಕು ಎಂಬ ಧೋರಣೆಯಿಂದ ತಿರುಮಲೇಶ ಅವರು ವಿವಿಧ ದೇಶ ಭಾಷೆಗಳ ಎಂಟು ಕೃತಿಗಳನ್ನು ಕನ್ನಡಕ್ಕೆ ತಂದಿದ್ದಾರೆ.

ಕವನಸಂಕಲನಗಳು: ಅಕ್ಷಯ ಕಾವ್ಯ, ಆಡು ಕನ್ನಡ ಹಾಡು ಕನ್ನಡ ಮಾತಾಡು ಕನ್ನಡವೇ, ಅವ್ಯಯ ಕಾವ್ಯ, ಅರಬ್ಬಿ, ಅವಧ, ಏನೇನ್ ತುಂಬಿ, ಪಾಪಿಯೂ, ಮಹಾಪ್ರಸ್ಥಾನ, ಮುಖವಾಡಗಳು, ಮುಖಾಮುಖಿ, ವಠಾರ.

ಕಥಾಸಂಕಲನ: ನಾಯಕ ಮತ್ತು ಇತರರು, ಕೆಲವು ಕಥಾನಕಗಳು, ಕಳ್ಳಿ ಗಿಡದ ಹೂ, ಅಪರೂಪದ ಕತೆಗಳು, ಕಾದಂಬರಿ, ಆರೋಪ, ಮುಸುಗು, ಅನೇಕ.

ವಿಮರ್ಶಾ ಕೃತಿಗಳು: ಬೇಂದ್ರೆಯವರ ಕಾವ್ಯಶೈಲಿ, ಅಸ್ತಿತ್ವವಾದ – 1989 / 2016, ಸಮ್ಮುಖ, ಉಲ್ಲೇಖ, ಕಾವ್ಯಕಾರಣ (ಆಧುನಿಕ ಕನ್ನಡ ಕಾವ್ಯದ ಒಂದು ಪಾರ್ಶ್ವನೋಟ).

ಭಾಷಾ ವಿಜ್ಞಾನ ಲೇಖನ ಸಂಗ್ರಹಗಳು: ನಮ್ಮ ಕನ್ನಡ, ಸಮೃದ್ಧ ಕನ್ನಡ, ಇನ್ನಷ್ಟು ಕನ್ನಡ

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *