ಕಾನೂನು ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿ ಬದಲಿಸುವಂತೆ ಪ್ರತಿಭಟನೆ

ಕೊಪ್ಪಳ ಜ, 21 : ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಎಲ್ಲಾ ವಿದ್ಯಾರ್ಥಿಗಳಿಗೆ ಫೆಬ್ರವರಿ ತಿಂಗಳಲ್ಲಿ ಎರಡು, ನಾಲ್ಕು, ಆರನೇ ಸೆಮಿಸ್ಟರ್ ನ ಪರೀಕ್ಷೆ ಮತ್ತು ಮಾರ್ಚ್ ತಿಂಗಳಲ್ಲಿ ಒಂದನೇ, ಮೂರನೇ, ಐದನೇ ಸಮಿಸ್ಟರ್ ಪರೀಕ್ಷೆ ಮಾಡಲು ತಯಾರಿ ನಡೆಸುತ್ತಿದ್ದು ಇದು ಅವೈಜ್ಞಾನಿಕವಾಗಿದೆ ಎಂದು ಎಸ್ಎಫ್ಐ ನೇತೃತ್ವದಲ್ಲಿ  ವಿದ್ಯಾರ್ಥಿಗಳು ಕೊಪ್ಪಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪರೀಕ್ಷೆ ವೇಳಾಪಟ್ಟಿ ಬದಲಾವಣೆ ಮಾಡುವಂತೆ ಸರಕಾರ ಹಾಗೂ ವಿಶ್ವವಿದ್ಯಾಲಯವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಕೊಪ್ಪಳದ ಸರ್ದಾರ್ ವಲ್ಲಭಭಾಯಿ ಪಟೇಲ್ ಲಾ ಕಾಲೇಜು ಮುಂದೆ ಎಸ್ಎಫ್ಐ ಪ್ರತಿಭಟನೆ ನಡೆಸಿದೆ. ತದನಂತರ ಪ್ರತಿಭನಟನೆ ಕುರಿತು ಮಾತನಾಡಿದ ಎಸ್.ಎಫ್.ಐ ರಾಜ್ಯಾಧ್ಯಕ್ಷ ಅಧ್ಯಕ್ಷ ಅಮರೇಶ ಕಡಗದ ಲಾ ಕಲಿಯುತ್ತಿರುವ ಎಲ್ಲಾ ಸೆಮಿಸ್ಟರ್ ನ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ತಯಾರಿ ನಡೆಸಿದ್ದು ಅದಕ್ಕೆ ಪೂರಕ ಎಂಬಂತೆ ಈಗಾಗಲೇ ವಿಶ್ವವಿದ್ಯಾಲಯವು ತನ್ನ ವೆಬ್ ಸೈಟಲ್ಲಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದು ಅತ್ಯಂತ ಅವೈಜ್ಞಾನಿಕವಾಗಿದೆ. ಏಕೆಂದರೆ ಇಡೀ ಪ್ರಪಂಚವೇ ಕರೋನಾ ಎಂಬ ಮಹಾಮಾರಿಗೆ ಜನರು ತತ್ತರಿಸಿಹೋಗಿದ್ದಾರೆ. ನಮ್ಮ ದೇಶದಲ್ಲಿ ಕರೋನಾದಿಂದಾಗಿ ರಾಜ್ಯ ಸರ್ಕಾರ ಸುಮಾರ 8-9 ತಿಂಗಳು ಕಾಲ ಕಾಲೇಜ್ ಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದರ ಮಧ್ಯೆ ವಿಶ್ವವಿದ್ಯಾಲಯಗಳು ನಡೆಸಿದ ಆನ್ಲೈನ್ ತರಗತಿಗಳಿಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ನೆಟ್ವರ್ಕ್ ಸಮಸ್ಯೆಯಿಂದಾಗಿ ಸಂಪೂರ್ಣವಾಗಿ ಹಾಜರಾಗಲು ಸಾಧ್ಯವಾಗಿಲ್ಲ. ಹಾಗಾಗಿ ಕಾನೂನ ವಿದ್ಯಾರ್ಥಿಗಳ ಪರೀಕ್ಷೆ ವೇಳಪಟ್ಟಿ ಬದಲಾವಣೆ ಮಾಡಬೇಕೆಂದು ಅಮರೇಶ ಕಡಗದ ವಿಶ್ವವಿದ್ಯಾಲಯ ಉಪಕುಲಪತಿಗಳಿಗೆ ಒತ್ತಾಯಿಸಿದ್ದಾರೆ.

ಇತ್ತೀಚಿಗೆ ಕಾಲೇಜುಗಳು ಪ್ರಾರಂಭವಾಗಿದ್ದು ಸಮರ್ಪಕವಾಗಿ, ಆಫ್ ಲೈನಲ್ಲಿ ತರಗತಿಗಳು ಮುಗಿದ ನಂತರ  ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಾಗಿ ಈ ಹಿಂದೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಸಂಘಟನೆ ರಾಜ್ಯಾದ್ಯಂತ ಹೋರಾಟ ಮಾಡಿದ ಸಂದರ್ಭದಲ್ಲಿ ಕಾನೂನು ಸಚಿವರಾದ ಜೆ.ಸಿ, ಮಾಧುಸ್ವಾಮಿ ಅವರು ಪತ್ರಿಕೆ ಮಾಧ್ಯಮಗಳಿಗೆ ಮತ್ತು ವಿಶ್ವವಿದ್ಯಾಲಯದ ಕುಲಪತಿಗಳಿಗೆ ಸೂಚನೆ ಕೊಟ್ಟಿದ್ದಿರು. ಆದರೆ ಈಗ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಸಚಿವರ  ಸೂಚನೆಯನ್ನು ಉಲ್ಲಂಘನೆ ಮಾಡಿ ಇದೇ ಶೈಕ್ಷಣಿಕ ವರ್ಷದ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ವಿದ್ಯಾರ್ಥಿಗಳಿಗೆ ಎಲ್ಲಾ ಅಂತದ ಪರೀಕ್ಷೆಗಳನ್ನು ನಡೆಸಲು ಹೊರಟಿದೆ ಎಂದು ಎಸ್.ಎಫ್‌.ಐ ಆರೋಪಿಸಿದೆ.

ವಿದ್ಯಾರ್ಥಿಗಳಿಗೆ ಸಮರ್ಪಕವಾಗಿ ಆಫ್ಲೈನ್ ತರಗತಿಗಳನ್ನು ಸಂಪೂರ್ಣವಾಗಿ ಮುಗಿಸದೆ ಪರೀಕ್ಷೆ ಮಾಡಲು ಹೊರಟಿರುವುದು ಅವೈಜ್ಞಾನಿಕವಾಗಿದೆ ಆದ್ದರಿಂದ ಕೂಡಲೇ ಸಂಬಂಧಪಟ್ಟ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಭಾರತ ವಿದ್ಯಾರ್ಥಿ ಫೆಡರೇಷನ್ ಸಂಘಟನೆಯು ಪ್ರತಿಭಟನೆ ಮಾಡುವ ಮೂಲಕ ಪರೀಕ್ಷೆಯ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಫೆಬ್ರುವರಿ ತಿಂಗಳಲ್ಲಿ 2,4,6 ಸೆಮಿಸ್ಟರ್ ಪರೀಕ್ಷೆಗಳನ್ನು ಮಾಡಿ ನಂತರ 45 ದಿನಗಳ ಕಾಲ ತರಗತಿಗಳನ್ನು ನಡೆಸಿ ಮುಂದಿನ 1,3,5 ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸಬೇಕೆಂದು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಕಾನೂನು ಮಹಾವಿದ್ಯಾಲಯದಲ್ಲಿ ಪ್ರಾಶಂಪಾಲರ ಮೂಲಕ ವಿಶ್ವವಿದ್ಯಾಲಯ ಉಪಕುಲಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ Sfi ನ ಜಿಲ್ಲಾ ಕಾರ್ಯದರ್ಶಿ ಸಿದ್ದಪ್ಪ, ತಿಮ್ಮಣ್ಣ ಹೊಮ್ಮಿನಾಳ ಕಾಲೇಜಿನ ಪ್ರಮುಖ ವಿದ್ಯಾರ್ಥಿ ಮುಂಖಡರಾದ ಅನೀಲ್, ಹನುಮಂತ, ರವಿಚಂದ್ರ, ಮಲ್ಲಿಕಾರ್ಜುನ, ರಮೇಶ, ಸೋಮನಾಥ, ಪರಶುರಾಮ, ಪ್ರಕಾಶ ಮತ್ತಿತರರು ಉಪಸ್ಥಿತರಿದ್ದರು.

Donate Janashakthi Media

Leave a Reply

Your email address will not be published. Required fields are marked *