- ರಿಸಲ್ಟ್ ಬಿಡುಗಡೆಗೆ ಪಿಯು ಮಂಡಳಿಯಿಂದ ಸಕಲ ಸಿದ್ಧತೆ.
- ಪಿಯುಸಿ ನಂತರ ವಿದ್ಯಾರ್ಥಿಗಳಿಗೆ ಇರುವ ಆಯ್ಕೆಗಳೇನು?
ಬೆಂಗಳೂರು : ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಜೂನ್ 4ನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ ಮಾಡುವ ಸಾಧ್ಯತೆ ಇದೆ ತಿಳಿಸಿದೆ. ಕರ್ನಾಟಕದಲ್ಲಿ ಮೇ 18 ರಂದು ದ್ವಿತೀಯ ಪಿಯುಸಿ ಪರೀಕ್ಷೆಗಳು ಮುಗಿದಿವೆ. ಪರೀಕ್ಷೆ ಮುಗಿದಾಗಿನಿಂದ ಪರೀಕ್ಷೆ ಬರೆದ ಎಲ್ಲ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ತುದಿಗಾಲಲ್ಲಿ ಕಾದು ಕುಳಿತಿದ್ದಾರೆ. ಪಿಯುಸಿ ಮೌಲ್ಯಮಾಪನ ಬಹುತೇಕ ಮುಕ್ತಾಯವಾಗಿತ್ತು. ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಪ್ರಕಟಿಸಲು ಸಕಲ ರೀತಿಯಲ್ಲೂ ಸಜ್ಜಾಗುತ್ತಿದೆ.
ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್ ನಾಲ್ಕನೇ ವಾರದಲ್ಲಿ ಪ್ರಕಟಿಸಲಿದೆ. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್http://www.karresult.nic.in ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ, ಏಪ್ರಿಲ್ 22 ರಿಂದ ಆರಂಭವಾಗಿ ಮೇ 18 ಕ್ಕೆ ಮುಕ್ತವಾಗಿದ್ದವು. ರಾಜ್ಯಾದಂತ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 6,00,519 ರೆಗ್ಯುಲರ್ ವಿದ್ಯಾರ್ಥಿಗಳಿದ್ದರೆ, 61,808 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ.