ಅಕಾಡೆಮಿಗೆ ನೇಮಕ : ಕನ್ನಡ ಅಭಿವೃದ್ಧಿಗೆ ಬಿಳಿಮಲೆ, ಸಾಹಿತ್ಯಕ್ಕೆ ಮುಕುಂದ್ ರಾಜ್, ನಾಟಕಕ್ಕೆ ಕೆ.ವಿ.ನಾಗರಾಜ ನೇಮಕ

ಬೆಂಗಳೂರು : ರಾಜ್ಯ ಸರಕಾರವು ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕಮಾಡಿದ್ದು, ಹಿರಿಯ ಚಿಂತಕರಾದ ಡಾ.ಪುರುಷೋತ್ತಮ ಬಿಳಿಮಲೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕವಾಗಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಎಲ್.ಎನ್.ಮುಕುಂದರಾಜ್,  ನಾಟಕ ಅಕಾಡೆಮಿ ಅಧ್ಯಕ್ಷರಾಗಿ ಡಾ. ಕೆ.ವಿ.ನಾಗರಾಜ ಮೂರ್ತಿ ನೇಮಕಗೊಂಡಿದ್ದಾರೆ. ಅಕಾಡೆಮಿ

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಸದಸ್ಯರ ವಿವರಗಳಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಇದನ್ನೂ ಓದಿಲೋಕಸಭಾ ಚುನಾವಣೆ 2024 : ಏ 19 ರಿಂದ 7 ಹಂತಗಳಲ್ಲಿ ಮತದಾನ| ಜೂನ್‌ 04ಕ್ಕೆ ಫಲಿತಾಂಶ

ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಡಾ. ಚನ್ನಪ್ಪ ಕಟ್ಟಿ, ಕನ್ನಡ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮೈಸೂರಿನ ಮಾನಸ ನೇಮಕಗೊಂಡಿದ್ದಾರೆ. ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ ಅಧ್ಯಕ್ಷರಾಗಿ ಡಾ.ಕೃಪಾ ಫಡಕಿ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷರಾಗಿ ಎಂ.ಸಿ.ರಮೇಶ್, ಕರ್ನಾಟಕ ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಾಗಿ ಡಾ. ಪ.ಸ.ಕುಮಾರ್, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಸಾಹಿತಿ ಗೊಲ್ಲಹಳ್ಳಿ ಶಿವಪ್ರಸಾದ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ತಾರಾನಾತ್ ಗಟ್ಟಿ ಕಾಪಿಕಾಡ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಜೊಕಿಂ ಸ್ಟ್ಯಾನ್ಲಿ ಅಲ್ವಾರಿಸ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಉಮರ್ ಯು.ಎಚ್. ನೇಮಕಗೊಂಡಿದ್ದಾರೆ. ಅಕಾಡೆಮಿ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸದಾನಂದ ಮಾವಜಿ, ಕರ್ನಾಟಕ ಬಯಲಾಟ ಅಕಾಡೆಮಿ ಅಧ್ಯಕ್ಷರಾಗಿ ಪ್ರೊ.ದುರ್ಗಾದಾಸ್, ಕರ್ನಾಟಕ ಬಂಜಾರ ಅಕಾಡೆಮಿ ಅಧ್ಯಕ್ಷರಾಗಿ ಡಾ.ಎ.ಆರ್. ಗೋವಿಂದಸ್ವಾಮಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಅಜ್ಜಿನಕೊಂಡ ಮಹೇಶ ನಾಚಯ್ಯ ನೇಮಕವಾಗಿದ್ದಾರೆ.

ಆಯಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಕಲಾವಿದರು, ಬರಹಗಾರರು, ಉಪನ್ಯಾಸಕರು ಮತ್ತು ಸಂಘಟಕರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ಸರ್ಕಾರ ತಿಳಿಸಿದೆ.

 

Donate Janashakthi Media

Leave a Reply

Your email address will not be published. Required fields are marked *