ಕೆನಡಾ: ಕೆನಡಾದ ಪ್ರಧಾನಿ ಹುದ್ದೆಗೆ ಕರ್ನಾಟಕ ಮೂಲದ ಕೆನಡಾದ ಸಂಸದ ಚಂದ್ರ ಆರ್ಯ ಅಧಿಕೃತವಾಗಿ ಸ್ಪರ್ಧೆಗೆ ಇಳಿದಿದ್ದಾರೆ.
ನೇಪಿಯನ್ ಅನ್ನು ಪ್ರತಿನಿಧಿಸುವ ಲಿಬರಲ್ ಸಂಸದರಾದ ಚಂದ್ರ ಆರ್ಯ ಅವರು ಈ ಬಗ್ಗೆ ಎಕ್ಸ್‌ನಲ್ಲಿ ತಿಳಿಸಿದ್ದಾರೆ. ನಮ್ಮ ರಾಷ್ಟ್ರವನ್ನು ಪುನರ್ನಿರ್ಮಿಸಲು ಮತ್ತು ಭವಿಷ್ಯದ ಪೀಳಿಗೆಗಾಗಿ ಸಣ್ಣ ಹಾಗೂ ಹೆಚ್ಚು ಪರಿಣಾಮಕಾರಿಯಾದ ಸರ್ಕಾರವನ್ನು ಮುನ್ನಡೆಸಲು ನಾನು ಕೆನಡಾದ ಮುಂದಿನ ಪ್ರಧಾನಿಯಾಗಲು ಸ್ಪರ್ಧಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಇದನ್ನು ಓದಿ :- ಚಾಂಪಿಯನ್ಸ್ ಟ್ರೋಫಿ: ತಂಡಗಳ ವಿವರ ಹೀಗಿದೆ….
ಆರ್ಯ ಚಂದ್ರ ಅವರು, ನಿವೃತ್ತಿ ವಯಸ್ಸನ್ನು ಹೆಚ್ಚಿಸುವುದು, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಪರಿಚಯಿಸುವುದು ಮತ್ತು ಪ್ಯಾಲೆಸ್ತೇನ್‌ನ್ನು ಒಂದು ರಾಜ್ಯವಾಗಿ ಗುರುತಿಸುವುದು ಸೇರಿದಂತೆ ಮಹತ್ವಾಕಾಂಕ್ಷೆಯ ನೀತಿ ಪ್ರಸ್ತಾಪಗಳನ್ನು ಉಮೇದುವಾರಿಕೆ ಬಳಿಕ ವಿವರಿಸಿದ್ದಾರೆ.
ಕರ್ನಾಟಕದಿಂದ ಕೆನಡಾಕ್ಕೆ:
ಚಂದ್ರ ಆರ್ಯ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಲು ಗ್ರಾಮದವರು. ಅವರು ಧಾರವಾಡದ ಕೌಸಲಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸ್ಟಡೀಸ್‌ನಿಂದ ಎಂಬಿಎ ಪದವಿ ಪಡೆದಿದ್ದಾರೆ. ಅವರು 20 ವರ್ಷಗಳ ಹಿಂದೆ ತಮ್ಮ ಪತ್ನಿ ಮತ್ತು ಚಿಕ್ಕ ಮಗನೊಂದಿಗೆ ಒಟ್ಟಾವಾಕ್ಕೆ ತೆರಳಿದರು.
ರಾಜಕೀಯ ಪ್ರವೇಶಿಸುವ ಮೊದಲು ಎಂಜಿನಿಯರ್, ಹೂಡಿಕೆ ಸಲಹೆಗಾರ ಮತ್ತು ಉದ್ಯಮಿಯಾಗಿ ಕೆಲಸ ಮಾಡಿದ್ದರು. 2015 ರಲ್ಲಿ ಹೌಸ್ ಆಫ್ ಕಾಮನ್ಸ್‌ಗೆ ತಮ್ಮ ಮೊದಲ ಚುನಾವಣೆಯಲ್ಲಿ ಗೆದ್ದರು. 2019 ರಲ್ಲಿ ಮರು ಆಯ್ಕೆಯಾದರು.