ಬೆಂಗಳೂರು : ಪರಿಶಿಷ್ಟ ವರ್ಗ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿದ್ದ ಆರೋಪದಡಿ ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣ ಸಂಚಾಲಕ ಪ್ರಶಾಂತ್ ಮಾಕನೂರು ಅವರನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿಯ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಅಪ್ಲೋಡ್ ಮಾಡಲಾಗಿದ್ದ ಮೊಟ್ಟೆ ವಿಡಿಯೊಗೆ ಸಂಬಂಧಪಟ್ಟಂತೆ ಮೇ 5 ರಂದು ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ದೂರು ದಾಖಲು ಮಾಡಿತ್ತು. ಪ್ರಗತಿಪರ ಸಂಘಟನೆಗಳು ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದರು.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗುವಂತೆ ಜೆ.ಪಿ. ನಡ್ಡಾ, ಬಿ.ವೈ. ವಿಜಯೇಂದ್ರ ಹಾಗೂ ಅಮಿತ್ ಮಾಳವೀಯಾ ಅವರಿಗೆ ನೊಟೀಸ್ ನೀಡಿರುವ ಹೈ ಗ್ರೌಂಡ್ಸ್ ಪೊಲೀಸರು, ನೋಟಿಸ್ ತಲುಪಿದ 7 ದಿನದ ಒಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಹೈಗ್ರೌಂಡ್ಸ್ ಪೊಲೀಸರು ಪ್ರಶಾಂತ್ರನ್ನು ಬಂಧಿಸಿದ್ದಾರೆ.