ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲೇ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫೆಬ್ರವರಿ
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುತ್ತದೆ. ಆದ್ದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು ಎಂದಿದ್ದಾರೆ.
ಬರ ನಿರ್ವಹಣೆಗೆ ರಾಜ್ಯಸರ್ಕಾರ ತಾತ್ಕಾಲಿಕವಾಗಿ 2 ಸಾವಿರ ರೂ.ಗಳ ಪರಿಹಾರವನ್ನು ಮಾತ್ರ ನೀಡಿದೆ. ಕೇಂದ್ರ ಸರ್ಕಾರದಿಂದ ಆರ್ಥಿಕ ನೆರವು ದೊರೆತ ತಕ್ಷಣ ರೈತರಿಗೆ ನಿಯಮಾನುಸಾರ ಹೆಚ್ಚಿನ ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳುತ್ತೇವೆ ಎಂದರು. ರಾಜ್ಯಸರ್ಕಾರ ನೀಡಿರುವ ಪರಿಹಾರ ಸಾಲುವುದಿಲ್ಲ ಎಂಬುದು ನಮಗೂ ಗೊತ್ತಿದೆ. ಆದರೆ ಕೇಂದ್ರದಿಂದ ಈವರೆಗೂ ಯಾವುದೇ ನೆರವು ಬಂದಿಲ್ಲ. ರಾಜ್ಯದ ಬಿಜೆಪಿ ನಾಯಕರು ಇಲ್ಲಿ ಟೀಕೆ ಮಾಡುವ ಬದಲು ದೆಹಲಿಗೆ ಹೋಗಿ ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಲಿ ಎಂದು ಸವಾಲು ಹಾಕಿದರು.
ಇದನ್ನೂ ಓದಿ : ಹೈದರಾಬಾದ್ | ಮೈಸೂರು ಸ್ಯಾಂಡಲ್ ಸೋಪ್ ನಕಲಿ ಘಟಕ ಬಯಲಿಗೆ; 2 ಕೋಟಿ ರೂ. ಸರಕು ವಶಕ್ಕೆ!
ಇಲಾಖಾವಾರು ಚರ್ಚೆ ಆರಂಭ: ಈ ಸಾಲಿನ ಬಜೆಟ್ ಗಾತ್ರ 3.7 ಲಕ್ಷ ಕೋಟಿ ರೂಪಾಯಿಗಳಿಗೆ ಹೆಚ್ಚಳವಾಗುವ ನಿರೀಕ್ಷೆ ಇದೆ. ಆದರೆ ಬಜೆಟ್ ಗಾತ್ರಕ್ಕೆ ಅನುಗುಣವಾಗಿ ಆದಾಯ ಸಂಗ್ರಹಣೆಯಾಗುತ್ತಿಲ್ಲ. ಹೀಗಾಗಿ ಸರ್ಕಾರ ಸಾಲದ ಮೊರೆ ಹೋಗುವುದು ಅನಿವಾರ್ಯ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಡುತ್ತಾರೆ.
ಈ ಬಾರಿಯ ಬಜೆಟ್ ಫೆಬ್ರುವರಿ 16ರಂದು ಮಂಡನೆಯಾಗುವ ಸಾಧ್ಯತೆಗಳಿವೆ. ಫೆ.12ರಿಂದ ವಿಧಾನಸಭಾ ಅಧಿವೇಶನ ಆರಂಭವಾಗಲಿದೆ. ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 15ನೇ ಬಜೆಟ್ ಮಂಡಿಸಲಿದ್ದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಹಜವಾಗಿಯೇ ಕುತೂಹಲ ಮೂಡಿಸಿದೆ.
ಸಿಎಂ ಕಳೆದ ಬುಧವಾರದಿಂದಲೇ ಇಲಾಖಾವಾರು ಚರ್ಚೆ ಆರಂಭಿಸಲಿದ್ದಾರೆ. ಆದಾಯ ಸಂಗ್ರಹಣೆ ಗುರಿ ತಲುಪಲು ಸಾಧ್ಯವಾಗದಿದ್ದರೂ ಬಜೆಟ್ ಗಾತ್ರ ಸ್ವಾಭಾವಿಕವಾಗಿ ಹಿಗ್ಗಲಿದೆ. 2023ರಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 3.09 ಲಕ್ಷ ಕೋಟಿ ರೂಪಾಯಿಗಳ ಬಜೆಟ್ ಮಂಡಿಸಿದ್ದರು. ನಂತರ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಗಾತ್ರವು 3.27 ಲಕ್ಷ ಕೋಟಿಗೆ ಹೆಚ್ಚಳವಾಯಿತು. ಸರ್ಕಾರದ ಮೂಲಗಳ ಪ್ರಕಾರ ಹಿಂದಿನ ಬಜೆಟ್ ಗಾತ್ರಕ್ಕಿಂತ ಶೇ.13ರಷ್ಟು ಹೆಚ್ಚಳವಾಗಲಿದೆ ಎಂದು ತಿಳಿದು ಬಂದಿದೆ. ಫೆಬ್ರವರಿ
ಈ ವಿಡಿಯೋ ನೋಡಿ : ಸಂಕ್ರಾಂತಿ, ಸಂಕ್ರಮಣ ಎಂದರೇನು? ಉತ್ತರಾಯಣ ಪುಣ್ಯಕಾಲ ನಿಜವೇ? – ಚಿಂತಕ ಜಿ.ಎನ್. ನಾಗರಾಜ ರವರ ವಿಶ್ಲೇಷಣೆ