ಯಡಿಯೂರಪ್ಪ ದೆಹಲಿ ಭೇಟಿ : ಹುಳಿಯೋ!! ಸಿಹಿಯೋ!!!

  • ರಾಜೀನಾಮೆ ನೀಡ್ತಾರಾ ಸಿಎಂ ಯಡಿಯೂರಪ್ಪ ?
  • ನಾನೂ ಸೂಚಿಸಿದವರನ್ನೆ ಸಿಎಂ ಮಾಡಿ ಎಂದ ಬೇಡಿಕೆ ಇಟ್ಟ ಯಡಿಯೂರಪ್ಪ ? 

ನವದೆಹಲಿ : ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿನ್ನೆ ಸಂಜೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಸಾಕಷ್ಟು ಚರ್ಚೆಯನ್ನು ನಡೆಸಿದ್ದಾರೆ. ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರವರನ್ನು ಭೇಟಿಯಾಗಿ ಸಾಕಷ್ಟು ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಬ್ಯವಾಗಿದೆ. ಇದೇ ವೇಳೆ ಯಡಿಯೂರಪ್ಪ ಅನಾರೋಗ್ಯ ಮತ್ತು ವಯೋಸಹಜ ಕಾರಣದಿಂದಾಗಿ ರಾಜೀನಾಮೆ ನೀಡುತ್ತಿದ್ದಾರೆ ಎಂಬ ಸುದ್ದಿಯೂ ಹರಿದಾಡುತ್ತಿದೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಇನ್ನೂ ಜೀವಂತವಾಗಿದೆ ಎಂಬುದು ಪದೇ ಪದೇ ಸಾಭಿತಾಗುತ್ತಿದೆ.  ಬಿಜೆಪಿಯ ಶಾಸಕರು , ಸಚಿವರು ನಿರಂತರವಾಗಿ ದೆಹಲಿಗೆ ಭೇಟಿನೀಡಿ ಹೂಕಮಾಂಡ್‌ ಜೊತೆ ಚರ್ಚೆ ನಡೆಸುತ್ತಿಲೇ ಇದ್ದಾರೆ. ಮುಖ್ಯವಾಗಿ ಯಡಿಯೂರಪ್ಪ ವಿರೋಧಿಗಳಾದ ಸಚಿವ ಸಿಪಿ ಯೋಗೇಶ್ವರ್‌, ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ, ಅರವಿಂದ್‌ ಬೆಲ್ಲದ್‌ ಸಾಕಷ್ಟು ಬಾರಿ ದೆಹಲಿಗೆ ಹೋಗಿ ಬಂದಿದ್ದಾರೆ. ಸಚಿವ ಮುರಗೇಶ್‌ ನಿರಾಣಿ ಮತ್ತು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಕಳೆದ ವಾರವಷ್ಟೆ ದೆಹಲಿಗೆ ಭೇಟಿ ನೀಡಿದ್ದರು. ಇದರ ಬೆನ್ನಲ್ಲೆ ಯಡಿಯೂರಪ್ಪ ಎರಡು ದಿನಗಳ ಪ್ರವಾಸ ಕೈಗೊಂಡಿದ್ದು ಯಡಿಯೂರಪ್ಪನವರ ದೆಹಲಿ ಭೇಟಿ ಯುಳಿಯೋ, ಸಿಯಿಯೋ ಎಂಬ ಪ್ರಶ್ನೆ ಈಗ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.

ಇದನ್ನೂ ಓದಿ : ಸಿಎಂ ಖುರ್ಚಿಯ ಮೇಲೆ ಎಲ್ಲರ ಕಣ್ಣು?!

ಯಡಿಯೂರಪ್ಪ ರಾಜೀನಾಮೆ! : ವಯಸ್ಸು ಮತ್ತು ಆರೋಗ್ಯ ಸಂಬಂಧಿತ ಕಾರಣಗಳನ್ನು ಉಲ್ಲೇಖಿಸಿ ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು  ಕೇಂದ್ರ ಬಿಜೆಪಿ ಮೂಲಗಳು ತಿಳಿಸಿವೆ.  ಕರ್ನಾಟಕದ ಕುರಿತು ಸಾಕಷ್ಟು ಚರ್ಚೆಗಳು ನಡೆದಿವೆ. ಮುಖ್ಯವಾಗಿ ಸಿಎಂ ಪುತ್ರ ವಿಜಯೇಂದ್ರ ರವರ ಹಸ್ತಕ್ಷೇಪ, ಭ್ರಷ್ಟಾಚಾರ, ಹಾಗೂ ಯಡಿಯೂರಪ್ಪನವರ ಮೇಲಿನ ಆರೋಪಗಳ ಬಗ್ಗೆ ಚರ್ಚೆಯಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಯಡಿಯೂರಪ್ಪನವರ ವಯಸ್ಸು ಮತ್ತು ಅನಾರೋಗ್ಯ ಕಾರಣವನ್ನು ಮುಂದೆ ನಾಡಿ ರಾಜೀನಾಮೆ ನೀಡಲು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.  ನಾನು ರಾಜೀನಾಮೆ ನೀಡುವೆ ನನ್ನ ಮಗನಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ಹಾಗೂ ಕರ್ನಾಟಕದಲ್ಲಿ ನಾನು ಸೂಚಿಸಿದವರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಬೇಡಿಕೆಯನ್ನಿಟ್ಟದ್ದಾರೆ ಎಂದು ತಿಳಿದು ಬಂದಿದೆ.

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ :  ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ, ರಾಜೀನಾಮೆ ಕೊಡಿ ಅಂತ ಹೈಕಮಾಂಡ್ ಕೇಳಿಲ್ಲ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಮ್ಮ ವಿರೋಧಿ ಬಣಕ್ಕೆ ಖಡಕ್ ಸಂದೇಶ ನೀಡಿದ್ದಾರೆ.

ಇಂದು ದೆಹಲಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ನಾನು ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಬೆಳವಣಿಗೆ, ಮಾಡುತ್ತಿರುವ ಕೆಲಸಗಳ ಬಗ್ಗೆ ವಿವರವಾಗಿ ಚರ್ಚೆ ನಡೆಸಿದ್ದೇನೆ. ಆಗಸ್ಟ್ ಮೊದಲ ವಾರದಲ್ಲಿ ಮತ್ತೆ ಇಲ್ಲಿಗೆ ಬರುತ್ತೇನೆ, ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎನ್ನುವುದು ಶುದ್ಧ ಸುಳ್ಳು ಸುದ್ದಿ ಎಂದು ಹೇಳಿದ್ದಾರೆ. ಈ ಮೂಲಕ ದೆಹಲಿಯಿಂದಲೇ ಸಿಎಂ ಯಡಿಯೂರಪ್ಪ ವಿರೋಧಿಗಳಿಗೆ ಖಡಕ್ ಸಂದೇಶ ನೀಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *