ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದು ಹೊಸ ಸರ್ಕಾರಕ್ಕೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
ಇನ್ನು ನೂತನ ಸರ್ಕಾರ ರಚನೆ ಬೆನ್ನಲ್ಲೇ ಪ್ರಧಾನಿ ಮೋದಿ, ಮಾಜಿ ಸಿಎಂಗಳಾದ ಬಸವರಾಜ್ ಬೊಮ್ಮಾಯಿ, ಎಚ್.ಡಿ. ಕುಮಾರಸ್ವಾಮಿ, ಸೇರಿದಂತೆ ಅನೇಕ ಗಣ್ಯರು ಶುಭ ಹಾರೈಸಿದ್ಧಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ @siddaramaiah ಜೀ ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ @DKShivakumar ಜೀ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು.
— Narendra Modi (@narendramodi) May 20, 2023
ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ, ಮತ್ತು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆಗಳು. ಫಲಪ್ರದ ಅಧಿಕಾರಾವಧಿಗಾಗಿ ನನ್ನ ಶುಭ ಹಾರೈಕೆಗಳು ಎಂದು ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಪ್ರಧಾನಿ ಮೋದಿ ಶುಭ ಹಾರೈಸಿದ್ಧಾರೆ. ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀ ಸಿದ್ದರಾಮಯ್ಯ ಅವರು ಹಾಗೂ ಅವರ ಸಚಿವ ಸಂಪುಟ ಸದಸ್ಯರಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶುಭ ಹಾರೈಸಿದ್ದಾರೆ.
ಇದನ್ನೂ ಓದಿ:-5 ಗ್ಯಾರಂಟಿಗಳಿಗೆ ಸಂಪುಟ ಸಭೆಯಲ್ಲಿ ಅನುಮೋದನೆ; ಸಿಎಂ ಸಿದ್ದರಾಮಯ್ಯ ಘೋಷಣೆ
ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬಂದ ಕಾಂಗ್ರೆಸ್ ಸರಕಾರಕ್ಕೆ ಶುಭವಾಗಲಿ. ನೂತನ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಹಾಗೂ ಅವರ ಸಂಪುಟ ಸಹೋದ್ಯೋಗಿಗಳಿಗೆ ಹಾರ್ದಿಕ ಶುಭಾಶಯಗಳು. ರಾಜ್ಯದ ಜನತೆಗೆ ಅರ್ಪಣಾ ಮನೋಭಾವದಿಂದ ಅವರೆಲ್ಲರೂ ಸೇವೆ ಮಾಡಲಿ. ಕನ್ನಡನಾಡಿನ ಜನಹಿತಕ್ಕಾಗಿ ಕಾಂಗ್ರೆಸ್ ಸರಕಾರ ಕೈಗೊಳ್ಳುವ ಪ್ರತಿಯೊಂದು ಕ್ರಮಕ್ಕೂ ನಮ್ಮ ಜನತಾದಳ ಪಕ್ಷ ಪರಿಪೂರ್ಣ ಬೆಂಬಲ ನೀಡಲಿದೆ ಎಂದು ಟ್ವೀಟ್ ಮಾಡುವ ಮೂಲಕ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಶುಭ ಹಾರೈಸಿದ್ಧಾರೆ.
Hearty congratulations to Hon'ble @siddaramaiah avaru and Hon'ble @DKShivakumar avaru on taking oath as the Chief Minister and Deputy Chief Minister of Karnataka respectively.
I sincerely believe that the secular duo will take the state of #Karnataka to newer heights with their… pic.twitter.com/VxV6lRsskW
— M.K.Stalin (@mkstalin) May 20, 2023