ಬೆಂಗಳೂರು: ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಒಂದೇ ದಿನ 35,024 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇಂದು 270 ಮಂದಿ ಕೋವಿಡ್ನಿಂದ ಮೃತಪಟ್ಟಿದ್ದು, ಇದುವರೆಗೆ ಒಟ್ಟು 15,306 ಮಂದಿ ನಿಧನರಾಗಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 14,74,846 ಆಗಿದೆ. ಇದರಲ್ಲಿ ಸದ್ಯ ಶೇ.19.92ರಷ್ಟು ಸಕ್ರಿಯ ಪ್ರಕರಣಗಳು ಇವೆ.
ಇದನ್ನು ಓದಿ: ರೆಮ್ಡೆಸಿವಿರ್ ವಿತರಣೆಗೆ ಯಾಕೆ ವಿಳಂಬ : ಡಿಸ್ಟ್ರಿಬ್ಯೂಟರ್ ಸುಳ್ಳೆ? ಅಥವಾ ಸರಕಾರದ ಅಂಕಿಅಂಶ ಸುಳ್ಳೆ??
ಬೆಂಗಳೂರಿನಲ್ಲಿ ಇಂದು ಅತಿ ಹೆಚ್ಚು ಅಂದರೆ 19,637 ಕೋವಿಡ್ ಪ್ರಕರಣಗಳು ಹೊಸದಾಗಿ ದಾಖಲಾಗಿವೆ. ಸೋಂಕಿತರ ಸಂಖ್ಯೆ 7,29,984ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ143 ಮಂದಿ ಸಾವಿಗೀಡಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 6282 ಮಂದಿ.
ಇಂದು ದಾಖಲೆಯ 14,142 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟಾರೆಯಾಗಿ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 11,10,025ಕ್ಕೆ ಏರಿಕೆಯಾಗಿದೆ. 3,49,496 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಇದನ್ನು ಓದಿ: ಕೋವಿಡ್-19 ಅಸಮರ್ಪಕ ನಿರ್ವಹಣೆ: ಕೇಂದ್ರ ಸರ್ಕಾರದ ವಿರುದ್ಧ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಟೀಕೆ
2431 ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆ 93,63,124 ಮೊದಲನೆ ಹಾಗೂ ಎರಡನೇ ಕೊರೊನಾ ಲಸಿಕೆಯನ್ನು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.