ಬೆಂಗಳೂರು : ಮೇ 10ರಂದು ನಡೆದ ರಾಜ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದ್ದು, ಫಲಿತಾಂಶ ಏನಾಗಲಿದೆಯೋ ಎಂಬ ಆತಂಕ ಅಭ್ಯರ್ಥಿಗಳನ್ನು ಕಾಡುತ್ತಿದ್ದರೆ, ರಾಜ್ಯದಲ್ಲಿ ಮುಂದಿನ ಸರ್ಕಾರ ಯಾರು ರಚಿಸಲಿದ್ದಾರೆ ಎಂಬ ಕುತೂಹಲ ಸಾರ್ವಜನಿಕರಲ್ಲಿ ಮನೆ ಮಾಡಿದೆ.
ಮತ ಎಣಿಕಾ ಸಂದರ್ಭದಲ್ಲಿ ಇವಿಎಂ ಮತ್ತು ಕಂಟ್ರೋಲ್ ಯುನಿಟ್ ನಿರ್ವಹಿಸುವುದು ಅತ್ಯಂತ ಮುಖ್ಯವಾಗಿದೆ. ಹೀಗಾಗಿ, ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಯಕರಿಗೆ ಈಗಾಗಲೇ ಒಂದು ಹಂತದ ತರಬೇತಿ ನೀಡಲಾಗಿತ್ತು. ಶುಕ್ರವಾರ ಮತ್ತೊಂದು ಹಂತದಲ್ಲಿ ಮೈಕ್ರೋ ಅಬ್ಸರ್ವರ್ಸ್, ಎಣಿಕಾ ಮೇಲ್ವಿಚಾರಕರು ಹಾಗೂ ಎಣಿಕಾ ಸಹಾಯಕರಿಗೆ ತರಬೇತಿಯನ್ನು ನೀಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಸಾರ್ವಜನಿಕರು ವೀಕ್ಷಣೆಗೆ ಲಭ್ಯ : ಮತ ಎಣಿಕೆ ಕಾರ್ಯವನ್ನು ಲೈವ್ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ. ಸಾರ್ವಜನಿಕರು ಲೈವ್ ಆಗಿ ವೀಕ್ಷಣೆ ಮಾಡಬಹುದಾಗಿದೆ. ಒಟ್ಟು 34 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ.
https://results.eci.gov.in/ ಭೇಟಿ ನೀಡಿ ವೀಕ್ಷಿಸಬಹುದು.
ಬೆಳಗ್ಗೆ 8 ರಿಂದ ಮತ ಎಣಿಕೆ
34 ಮತ ಎಣಿಕಾ ಕೇಂದ್ರದಲ್ಲಿ ಬೆಳಗ್ಗೆ 8 ಗಂಟೆಯಿಂದ ಮತ ಎಣಿಕಾ ಕಾರ್ಯ ಆರಂಭಗೊಳ್ಳಲಿದೆ. ಮೊದಲು ಅಂಚೆ ಮತ ಎಣಿಕೆ, ನಂತರ ಇವಿಎಂನಲ್ಲಿರುವ ಮತಗಳ ಎಣಿಕೆಯನ್ನು ಎಣಿಕೆ ಮಾಡಲಾಗುತ್ತದೆ. ಅದಕ್ಕೆ ಮೂರು ಹಂತದಲ್ಲಿ ಅಧಿಕಾರಿ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. ಪ್ರತಿ ಟೇಬಲ್‌ಗೆ ಮೈಕ್ರೋ ಅಬ್ಸರ್ವರ್, ಮತ ಎಣಿಕೆ ಮೇಲ್ವಿಚಾರಕರು ಮತ್ತು ಮತ ಎಣಿಕೆ ಸಹಾಯಕರು ಇರಲಿದ್ದಾರೆ.
ಜನಶಕ್ತಿ ಮೀಡಿಯಾದಲ್ಲಿ ಚುನಾವಣೆಯ ಕ್ಷಣ ಕ್ಷಣದ ಮಾಹಿತಿಯನ್ನು ಪಡೆಯಬಹುದಾಗಿದೆ. http://www.janashakthimedia.com ಗೆ ಭೇಟಿ ನೀಡಿ ವೀಕ್ಷಿಸಬಹುದಾಗಿದೆ. ಬೆಳಗ್ಗೆ 10 ರಿಂದ ಸಂಜೆ 7 ರ ವರೆಗೆ ಫೆಸ್ಬುಕ್ ಹಾಗೂ ಯೂಟ್ಯೂಬ್ ನಲ್ಲಿ ಫಲಿತಾಂಸದ ಲೆಕ್ಕಾಚಾರ, ವಿಶ್ಲೇಷಣೆಯನ್ನು ನುರಿತ ರಾಜಕೀಯ ತಜ್ಞರು ಮಾಹಿತಿಯನ್ನು ನೀಡಲಿದ್ದಾರೆ.