ಬೆಂಗಳೂರು : ಇಡೀ ರಾಜ್ಯವೇ ಕುತೂಹಲದಿಂದ ಎದುರು ನೋಡುತ್ತಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ಮತದಾನಕ್ಕೆ ಟೈಂ ಬಂದೇ ಬಿಟ್ಟಿದೆ. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದ್ದು, ಇಂದು ಬೆಳಗ್ಗೆ 7ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿರಲಿದೆ.
ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೆ ರಾಜ್ಯದಲ್ಲಿ ಶೇ.20.99ರಷ್ಟು ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್ ಶೇಕಡಾ 19.30ರಷ್ಟು, ಬೆಂಗಳೂರು ಉತ್ತರ ಶೇಕಡಾ 17.50ರಷ್ಟು, ಬೆಂಗಳೂರು ದಕ್ಷಿಣ ಶೇಕಡಾ 19.18ರಷ್ಟು, ಬೆಂಗಳೂರು ನಗರದಲ್ಲಿ ಶೇಕಡಾ 17.72ರಷ್ಟು, ಬಾಗಲಕೋಟೆ ಜಿಲ್ಲೆಯಲ್ಲಿ ಶೇಕಡಾ 23.44ರಷ್ಟು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 20.23ರಷ್ಟು, ಬೆಳಗಾವಿ ಜಿಲ್ಲೆಯಲ್ಲಿ ಶೇಕಡಾ 20.76ರಷ್ಟು, ಬಳ್ಳಾರಿ ಜಿಲ್ಲೆಯಲ್ಲಿ ಶೇಕಡಾ 23.56ರಷ್ಟು, ಬೀದರ್ ಜಿಲ್ಲೆಯಲ್ಲಿ ಶೇಕಡಾ 20.54ರಷ್ಟು, ವಿಜಯಪುರ ಜಿಲ್ಲೆಯಲ್ಲಿ ಶೇಕಡಾ 20.66ರಷ್ಟು, ಚಾಮರಾಜನಗರ ಜಿಲ್ಲೆಯಲ್ಲಿ ಶೇಕಡಾ 16.77ರಷ್ಟು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶೇಕಡಾ 21.46ರಷ್ಟು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇಕಡಾ 22.29ರಷ್ಟು ಮತದಾನವಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಶೇಕಡಾ 18.56ರಷ್ಟು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 28.46ರಷ್ಟು, ದಾವಣಗೆರೆ ಜಿಲ್ಲೆಯಲ್ಲಿ ಶೇಕಡಾ 21.32ರಷ್ಟು, ಧಾರವಾಡ ಜಿಲ್ಲೆಯಲ್ಲಿ ಶೇಕಡಾ 20.82ರಷ್ಟು, ಗದಗ ಜಿಲ್ಲೆಯಲ್ಲಿ ಶೇಕಡಾ 21.14ರಷ್ಟು, ಕಲಬುರಗಿ ಜಿಲ್ಲೆಯಲ್ಲಿ ಶೇಕಡಾ 17.89ರಷ್ಟು, ಹಾಸನ ಜಿಲ್ಲೆಯಲ್ಲಿ ಶೇಕಡಾ 22.18ರಷ್ಟು, ಹಾವೇರಿ ಜಿಲ್ಲೆಯಲ್ಲಿ ಶೇಕಡಾ 19.44ರಷ್ಟು, ಕೊಡಗು ಜಿಲ್ಲೆಯಲ್ಲಿ ಶೇಕಡಾ 26.49ರಷ್ಟು, ಕೋಲಾರ ಜಿಲ್ಲೆಯಲ್ಲಿ ಶೇಕಡಾ 19.87ರಷ್ಟು, ಕೊಪ್ಪಳ ಜಿಲ್ಲೆಯಲ್ಲಿ ಶೇಕಡಾ 21.46ರಷ್ಟು, ಮಂಡ್ಯ ಜಿಲ್ಲೆಯಲ್ಲಿ ಶೇಕಡಾ 19.56ರಷ್ಟು, ಮೈಸೂರು ಜಿಲ್ಲೆಯಲ್ಲಿ ಶೇಕಡಾ 19.34ರಷ್ಟು, ರಾಯಚೂರು ಜಿಲ್ಲೆಯಲ್ಲಿ ಶೇಕಡಾ 22.48ರಷ್ಟು, ರಾಮನಗರ ಜಿಲ್ಲೆಯಲ್ಲಿ ಶೇಕಡಾ 25.21ರಷ್ಟು, ಶಿವಮೊಗ್ಗ ಜಿಲ್ಲೆಯಲ್ಲಿ ಶೇಕಡಾ 22.75ರಷ್ಟು, ತುಮಕೂರು ಜಿಲ್ಲೆಯಲ್ಲಿ ಶೇಕಡಾ 22.06ರಷ್ಟು, ಉಡುಪಿ ಜಿಲ್ಲೆಯಲ್ಲಿ ಶೇಕಡಾ 30.26ರಷ್ಟು, ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇಕಡಾ 25.46ರಷ್ಟು, ವಿಜಯನಗರ ಜಿಲ್ಲೆಯಲ್ಲಿ ಶೇಕಡಾ 21.07ರಷ್ಟು, ಯಾದಗಿರಿ ಜಿಲ್ಲೆಯಲ್ಲಿ ಶೇಕಡಾ 18.84ರಷ್ಟು ಮತದಾನವಾಗಿದೆ.
ಬೆಂಗಳೂರಿನಲ್ಲಿ ಬೆಳಗ್ಗೆ 11ರವರೆಗೆ ಶೇಕಡಾ 17.74ರಷ್ಟು ಮತದಾನವಾಗಿದೆ. ಬೆಂಗಳೂರು ಸೆಂಟ್ರಲ್ನಲ್ಲಿ ಬರುವ ಚಾಮರಾಜಪೇಟೆ ಕ್ಷೇತ್ರದಲ್ಲಿ ಶೇ. 16, ಚಿಕ್ಕಪೇಟೆ ಕ್ಷೇತ್ರದಲ್ಲಿ ಶೇ. 18, ಗಾಂಧಿನಗರ ಕ್ಷೇತ್ರದಲ್ಲಿ ಶೇ. 17, ರಾಜಾಜಿನಗರ ಕ್ಷೇತ್ರದಲ್ಲಿ ಶೇ. 20, ಆರ್.ಆರ್. ನಗರ ಕ್ಷೇತ್ರದಲ್ಲಿ ಶೇ. 17, ಶಾಂತಿನಗರ ಶೇ. 16, ಶಿವಾಜಿನಗರ ಕ್ಷೇತ್ರದಲ್ಲಿ ಶೇ. 17 ರಷ್ಟು ಮತದಾನವಾಗಿದೆ.
ಬೆಂಗಳೂರು ಉತ್ತರದ ಸಿ.ವಿ ರಾಮನ್ನಗರ ಶೇ. 15, ಹೆಬ್ಬಾಳ ಶೇ. 20, ಕೆ.ಆರ್. ಪುರ ಶೇ. 19, ಮಹಾಲಕ್ಷ್ಮೀ ಲೇಔಟ್ ಶೇ 20, ಮಲ್ಲೇಶ್ವರಂ ಶೇ. 21, ಪುಲಿಕೇಶಿನಗರ ಶೇ. 18, ಸರ್ವಜ್ಞನಗರ ಶೇ. 15 ರಷ್ಟು ಮತದಾನವಾಗಿದೆ. ಬೆಂಗಳೂರು ದಕ್ಷಿಣದ ಬಿಟಿಎಂ ಲೇಔಟ್ ಶೇ. 17, ಬಸವನಗುಡಿ ಶೇ. 19, ಬೊಮ್ಮನಹಳ್ಳಿ ಶೇ. 18, ಗೋವಿಂದರಾಜನಗರ ಶೇ. 19, ಜಯನಗರ ಶೇ. 20, ಪದ್ಮನಾಭನಗರ ಶೇ. 20, ವಿಜಯನಗರ ಶೇ. 16 ರಷ್ಟು ಮತದಾನವಾಗಿದೆ. ಬೆಂಗಳೂರು ನಗರದ ಆನೇಕಲ್ ಕ್ಷೇತ್ರದ ಶೇ. 13, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇ. 17, ಬ್ಯಾಟರಾಯನಪುರ ಶೇ. 17, ದಾಸರಹಳ್ಳಿ ಶೇ. 15, ಮಹಾದೇವಪುರ ಶೇ. 17, ಯಲಹಂಕ ಶೇ. 19, ಯಶವಂತಪುರ ಶೇ. 20 ರಷ್ಟು ಮತದಾನವಾಗಿದೆ.