ಗಣೇಶ ಚತುರ್ಥಿ, ಮೊಹರಂ ಸರಳ ಆಚರಣೆಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು :  ಮುಂಬರುವ ಗೌರಿ ಗಣೇಶ ಹಾಗೂ ಮೊಹರಂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಕೋವಿಡ್ 19 ಮೂರನೇ ಅಲೆ ಭೀತಿ ಎದುರಾಗಿರುವ ನಡುವೆ, ಹಬ್ಬದ ನೆಪದಲ್ಲಿ ಜನರು ಗುಂಪುಗೂಡದಂತೆ ತಡೆಯಲು ಕಠಿಣ ನಿಯಮಗಳನ್ನು ರೂಪಿಸಲಾಗಿದೆ.

ಶ್ರಾವಣ ಮಾಸ ಬಂತೆಂದರೆ ಸಾಲು ಸಾಲು ಹಬ್ಬಗಳು ಬರುವುದು ಸಹಜ. ಆದರೆ ಮಾರಕ ಕೊರೊನಾ ಸೋಂಕು ಹಬ್ಬದ ಸಂಭ್ರಮಾಚರಣೆಗೆ ಈ ಬಾರಿಯೂ ತಣ್ಣೀರು ಎರಚಿದೆ.‌ ಹೀಗಾಗಿ ಹಬ್ಬ ಸರಳವಾಗಿ ಆಚರಿಸುವುದು ಅನಿವಾರ್ಯವಾಗಿದೆ. ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನಿರ್ಬಂಧಿಸಲಾಗಿದೆ. ಜನರು ತಮ್ಮ ಮನೆಗಳಲ್ಲಿ ಹಾಗೂ ದೇವಸ್ಥಾನದಲ್ಲಿ ಮಾತ್ರ ಗಣೇಶ ಪ್ರತಿಷ್ಠಾಪನೆ ಮಾಡಬಹುದಾಗಿದೆ. ಆದರೆ ಯಾವುದೇ ರೀತಿ ಸಭೆ ಸಮಾರಂಭಗಳನ್ನು, ಮನರಂಜನಾ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಸೋಂಕು ತಡೆಯುವ ನಿಟ್ಟಿನಲ್ಲಿ ಸರ್ಕಾರ ಸಾರ್ವಜನಿಕ ಗಣೇಶೋತ್ಸವ ಆಚರಿಸದಂತೆ ಸರ್ಕಾರ ಸೂಚಿಸಿದೆ. ಗಣೇಶೋತ್ಸವ, ಮೊಹರಂ ಆಚರಣೆಗೆ ಸರಳವಾಗಿ ಆಚರಿಸಲು ಸರ್ಕಾರ ಇಂದು ಮಾರ್ಗಸೂಚಿಗಳನ್ನು ಪ್ರಕಟಿಸಿದೆ.‌ ರಾಜ್ಯದಲ್ಲಿ ಮೂರನೇ ಅಲೆ ಸೋಂಕು ಹೆಚ್ಚಾಗುವ ಭೀತಿಯ ಹಿನ್ನೆಲೆಯಲ್ಲಿ ಜನರ ಆರೋಗ್ಯ ದೃಷ್ಟಿಯಿಂದ ಈ ಕ್ರಮಕೃಗೊಳ್ಳಲಾಗಿದೆ ಎಂದು ರಾಜ್ಯ ಸರಕಾರ ಪ್ರಮುಖ ನಿರ್ಧಾರವನ್ನು ಪ್ರಕಟಿಸಿದೆ.

ಗಣೇಶ ಹಬ್ಬದ ನಿಯಮಗಳು

  • ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಬೇಕು
  • ದೇವಸ್ಥಾನದೊಳಗೆ ಹಾಗೂ ಮನೆಗಳಲ್ಲಿ ಆಚರಿಸಲು ಸೂಚನೆ
  • ಯಾವುದೇ ಸಾರ್ವಜನಿಕ ಸಭೆಗಳಲ್ಲಿ ಹೊರಾಂಗಣಗಳಲ್ಲಿ ಚಪ್ಪರ, ಪೆಂಡಾಲ್/ಶಾಮಿಯಾನ ವೇದಿಕೆಗಳನ್ನು ನಿರ್ಮಿಸಿ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆಗಿಲ್ಲ ಅನುಮತಿ
  • ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ ಮನೋರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ
  • ಮೂರ್ತಿಗಳನ್ನು ಮನೆಯಲ್ಲಿಯೇ ವಿಸರ್ಜಿಸಲು ಸೂಚನೆ
  • ಇಲ್ಲದಿದ್ರೆ ಮಹಾನಗರ ಪಾಲಿಕೆ / ಜಿಲ್ಲಾಡಳಿತ / ಹತ್ತಿರದ ಸ್ಥಳೀಯ ಸಂಸ್ಥೆಗಳ ವತಿಯಿಂದ ನಿರ್ಮಿಸಲಾದ ಹೊಂಡ, ಕಲ್ಯಾಣಿ, ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್‌ಗಳಲ್ಲಿ ವಿಸರ್ಜಿಸಬೇಕು
  • ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನಗಳಲ್ಲಿ ದಿನನಿತ್ಯ ಸಾನಿಟೈಸೇಷನ್ ಮಾಡಬೇಕು
  • ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್‌ ಹಾಗೂ ಥರ್ಮಲ್​ ಸ್ಕ್ರೀನಿಂಗ್​ ಕಡ್ಡಾಯ
  • ದರ್ಶನಕ್ಕಾಗಿ ಬರುವ ಭಕ್ತರಿಗೆ ಕೋವಿಡ್-19 ಮಾರ್ಗಸೂಚಿಯಂತೆ ಕಡ್ಡಾಯ ಮಾಸ್ಕ್​​ ಧರಿಸಬೇಕು
  • ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು

ಸರ್ಕಾರ ಜಿಲ್ಲಾಡಳಿತ, ಪೊಲೀಸ್, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ ಪ್ರಾಧಿಕಾರಿಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ, ನಿರ್ದೇಶನ ಹಾಗೂ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು

ಇದನ್ನೂ ಓದಿ : ಮೇಕೆದಾಟು ನಮ್ಮ ರಾಜ್ಯದ ಸಂಪತ್ತು – ಅಪ್ಪಚ್ಚು ರಂಜನ್

 

ಮೊಹರಂ ಹಬ್ಬಕ್ಕೆ ಮಾರ್ಗಸೂಚಿ :

  • ಸಾರ್ವಜನಿಕ ಸ್ಥಳಗಳಲ್ಲಿ ಅಲಂಗಳನ್ನು ಪಂಜಾವನ್ನು ಸ್ಥಾಪಿಸುವುದು ಹಾಗೂ ತಾಜಿಯಾವನ್ನು ನಿರ್ಬಂಧಿಸಲಾಗಿದೆ.
  • ದಿನಾಂಕ:12.08.2021 ರಿಂದ 20.08.2021 ರವರೆಗೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು ಮೆರವಣಿಗೆ ನಿಷೇಧಿಸಲಾಗಿದೆ.
  • ಮೊಹರಂ ಸಂಬಂಧಿತ ಆಚರಣೆಗಳಲ್ಲಿ ಭಾಗವಹಿಸುವ ಭಕ್ತಾದಿಗಳು ಸೂಕ್ತ ಸಾಮಾಜಿಕ ಅಂತರದೊಂದಿಗೆ ಕನಿಷ್ಠ ಸಂಖ್ಯೆಯಲ್ಲಿ ಭಾಗವಹಿಸಬೇಕು
  • ಪಂಜ, ಆಲಂ ಮತ್ತು ತಾಜಿಯಗಳನ್ನು ಸಾರ್ವಜನಿಕರು ಮುಟ್ಟದೆ ದೂರದಿಂದ ನೋಡಬೇಕು
  • ಖಬರಸ್ಕಾನ್ ಒಳಗೊಂಡಂತೆ ಯಾವುದೇ ಖಾಲಿ ಜಾಗಗಳಲ್ಲಿ ಯಾವುದೇ ತರಹದ ಸಭೆ ಏರ್ಪಡಿಸುವಂತಿಲ್ಲ
  • ಖಬರಸ್ಥಾನಗಳಿಗೆ ಕೇವಲ ದವನ ಮಾಡಲು ಮಾತ್ರ ಅನುಮತಿ ನೀಡಿದ್ದು, ಮೊಹರಂಗೆ ಸಂಬಂಧಿಸಿದ ಆಚರಣೆಗಳಿಗೆ ಅನುಮತಿ ನಿರಾಕರಿಸಲಾಗಿದೆ
  • ಪ್ರಾರ್ಥನಾ ಸ್ಥಳಗಳಲ್ಲಿ ಮಾಸ್ಕ್​​​ ಕಡ್ಡಾಯ. 60 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು. ಕೋವಿಡ್-19 ಸಮುಚಿತ ವರ್ತನಗಳೊಂದಿಗೆ, ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಹೆಚ್ಚು ಜನರು ಆಗಮಿಸಿದ್ದಲ್ಲಿ ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ನಡೆಸತಕ್ಕದ್ದು
Donate Janashakthi Media

One thought on “ಗಣೇಶ ಚತುರ್ಥಿ, ಮೊಹರಂ ಸರಳ ಆಚರಣೆಗೆ ಮಾರ್ಗಸೂಚಿ ಪ್ರಕಟ

Leave a Reply

Your email address will not be published. Required fields are marked *