ರೋಹಿಂಗ್ಯಾಗಳನ್ನು ಬಂಧನಲ್ಲಿರಿಸಿಲ್ಲ: ಸುಪ್ರೀಂ ಕೋರ್ಟ್‌ ಆದೇಶಕ್ಕೆ ಬದ್ಧ ಎಂದ ರಾಜ್ಯ ಸರ್ಕಾರ

ನವದೆಹಲಿ: ರಾಜ್ಯ ಸರ್ಕಾರವು ಕರ್ನಾಟಕದಲ್ಲಿ 126 ರೋಹಿಂಗ್ಯಾಗಳನ್ನು ಪತ್ತೆ ಹಚ್ಚಿದ್ದು, ಅವರನ್ನು ಯಾವುದೇ ಶಿಬಿರ ಅಥವಾ ಬಂಧನ ಕೇಂದ್ರದಲ್ಲಿ ಪೊಲೀಸರು ಇಟ್ಟಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ತಿಳಿಸಿದೆ.

ರೋಹಿಂಗ್ಯಾ ಸಮಸ್ಯೆ ಕುರಿತಂತೆ ಬಿಜೆಪಿ ಮುಖಂಡ ಅಶ್ವಿನಿ ಉಪಾಧ್ಯಾಯ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ವರ್ಷದೊಳಗೆ ಬಾಂಗ್ಲಾದೇಶಿಗರು, ರೋಹಿಂಗ್ಯಾಗಳು, ಕಾನೂನುಬಾಹಿರ ವಲಸಿಗರು ಮತ್ತು ನುಸುಳುಕೋರರನ್ನು ಗುರುತಿಸಿ ಅವರನ್ನು ಬಂಧಿಸುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿರುವಂತೆ ಕೋರಿ ಸುಪ್ರೀಂ ಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದರು.

ಇದಕ್ಕೂ ಮುನ್ನ ಉಪಾಧ್ಯಾಯ ಅವರ ಮನವಿಯು ನಿರ್ವಹಣೆಗೆ ಅರ್ಹವಾಗಿಲ್ಲ ಎಂದು ಕರ್ನಾಟಕ ಸರ್ಕಾರ ತಗಾದೆ ಎತ್ತಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿ ಅಫಿಡವಿಟ್ ಸಲ್ಲಿಸಿರುವ ರಾಜ್ಯ ಸರ್ಕಾರ, ಸುಪ್ರೀಂ ಕೋರ್ಟ್ ಹೊರಡಿಸುವ ಆದೇಶಕ್ಕೆ ಬದ್ಧವಾಗಿರುವುದಾಗಿ ತಿಳಿಸಿದೆ.

ಈ ಸಂಬಂಧ ಸುಪ್ರೀಂ ಕೋರ್ಟ್ ಆದೇಶವನ್ನು ಚಾಚೂ ತಪ್ಪದೆ ಪಾಲಿಸಲಾಗುವುದು ಎಂದು ಗೃಹ ಇಲಾಖೆಯ ಅಧೀನ ಕಾರ್ಯದರ್ಶಿ ವನಜಾ ಕೆ ಎನ್ ಸಲ್ಲಿಸಿರುವ ಅಫಿಡವಿಟ್ ನಲ್ಲಿ ತಿಳಿಸಿದ್ದಾರೆ.

ಅಲ್ಲದೆ,  ತನ್ನ ವ್ಯಾಪ್ತಿಗೆ ಒಳಪಡುವ ಯಾವುದೇ ಶಿಬಿರ ಅಥವಾ ಬಂಧನ ಕೇಂದ್ರದಲ್ಲಿ ರೋಹಿಂಗ್ಯಾಗಳಿಗೆ ಕರ್ನಾಟಕ ನೆಲೆ ಕಲ್ಪಿಸಿಲ್ಲ ಎಂದು ಸ್ಪಷ್ಟಪಡಿಸಿದೆ. ಅಗತ್ಯವೆನಿಸಿದರೆ ಮುಂದಿನ ಹಂತದಲ್ಲಿ ವಿಸ್ತೃತವಾದ ಅಫಿಡವಿಟ್ ಸಲ್ಲಿಸಲು ಅವಕಾಶ ಕಲ್ಪಿಸಬೇಕು ಎಂದು ರಾಜ್ಯ ಸರ್ಕಾರವು ನ್ಯಾಯಾಲಯವನ್ನು ಕೋರಿದೆ.

Donate Janashakthi Media

Leave a Reply

Your email address will not be published. Required fields are marked *