ಎಲ್‌ಕೆಜಿ-ಯುಕೆಜಿ ತರಗತಿಗಳು ನವೆಂಬರ್‌ 8ರಿಂದ ಆರಂಭಕ್ಕೆ ಸರ್ಕಾರ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಆರಂಭ ಮಾಡುವುದಕ್ಕೆ ಸರ್ಕಾರವು ಸೂಚನೆ ನೀಡಿದ್ದು, ನವೆಂಬರ್ 8 ರಿಂದ ಆರಂಭಿಸಲು ಸೂಚನೆ ನೀಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಐು ಎಲ್‌ಕೆಜಿ-ಯುಕೆಜಿ ಭೌತಿಕ ತರಗತಿ ಆರಂಭಕ್ಕೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ತರಗತಿಗಳು ಆರಂಭಕ್ಕೂ ಮೊದಲು ಕೇಂದ್ರವನ್ನು ಸ್ವಚ್ಛಗೊಳಿಸಬೇಕು. ರಾಸಾಯನಿಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು. ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯ ಇರಬೇಕು. ಪೋಷಕರಿಗೂ ಎರಡು ಡೋಸ್ ಲಸಿಕೆ ಕಡ್ಡಾಯ ಆಗಿರಬೇಕು. ಪಾಸಿಟಿವಿಟಿ ದರ ಶೇಕಡಾ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಿಗೆ ಮಾರ್ಗಸೂಚಿಗಳು ಅನ್ವಯವಾಗಲಿದೆ.

ಇದನ್ನು ಓದಿ: ನ.8 ರಿಂದ ಅಂಗನವಾಡಿ ಕೇಂದ್ರಗಳು ಪುನರಾರಂಭಕ್ಕೆ ಮಾರ್ಗಸೂಚಿ ಪ್ರಕಟ

ಮಾರ್ಗಸೂಚಿಗಳ ವಿವರ ಹೀಗಿದೆ
* ಅರ್ಧ ದಿನ ಮಾತ್ರ ತರಗತಿಗಳನ್ನು ನಡೆಸಬೇಕು.
* ಶೇ. 2 ಕ್ಕಿಂತ ಕಡಿಮೆ ಕೊರೊನಾ ಪ್ರಕರಣ ಇರುವ ತಾಲೂಕುಗಳಲ್ಲಿ ಮಾತ್ರ ಅವಕಾಶ.
* ವಿದ್ಯಾರ್ಥಿಗಳು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ತರಬೇಕು.
* ನಿತ್ಯ ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಬೇಕು.
* ಎಲ್ಲಾ ಶಿಕ್ಷಕರು, ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. 50 ವರ್ಷ ಮೇಲ್ಪಟ್ಟವರು ಫೇಸ್ ಶೀಲ್ಡ್ ಧರಿಸಬೇಕು.
* ಶಿಕ್ಷಕರು, ಸಿಬ್ಬಂದಿ ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.
* ಮನೆಯಿಂದಲೇ ಮಕ್ಕಳು ಉಪಹಾರ ಮತ್ತು ಕುಡಿಯುವ ನೀರು ತರಲು ಅವಕಾಶ ಕೊಡಬೇಕು.
* ಶಾಲೆಗಳಲ್ಲಿ ಕುಡಿಯಲು ಬಿಸಿ ನೀರಿನ ವ್ಯವಸ್ಥೆ ಮಾಡಬೇಕು.
* ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬದವರಿಗೆ ಆರೋಗ್ಯ ಸಮಸ್ಯೆ ಇದ್ದರೆ, ವಿದ್ಯಾರ್ಥಿಗಳಿಗೆ ಶಾಲೆಗೆ ಬರಲು ಅವಕಾಶ ನೀಡಬಾರದು.
* ಶಾಲಾ ಆವರಣ, ಶಾಲೆಯ ಒಳಗೆ ವಿದ್ಯಾರ್ಥಿಗಳನ್ನು ಕೂರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಕ್ರಮವಹಿಸಬೇಕು.
* ವಿದ್ಯಾರ್ಥಿಗೆ ಸೋಂಕು ಬಂದ ಕೂಡಲೇ ಶಾಲೆ ಮುಚ್ಚಿಸಿ ಎಲ್ಲಾ ವಿದ್ಯಾರ್ಥಿಗಳಿಗೂ ತಪಾಸಣೆ ನಡೆಸಬೇಕು.
* ವಿದ್ಯಾರ್ಥಿಯ ಆರೋಗ್ಯದ ಮೇಲೆ ನಿತ್ಯ ಶಾಲೆಯವರು ನಿಗಾ ವಹಿಸಬೇಕು.
* ಸಂದರ್ಶಕರು ಅಥವಾ ಮೂರನೇ ವ್ಯಕ್ತಿಗಳಿಗೆ ಶಾಲೆಗೆ ಪ್ರವೇಶ ನೀಡಬಾರದು.
* ಶಾಲೆ ಮುಚ್ಚಿಸಿದ ಬಳಿಕ ಸ್ಥಳೀಯ ಆರೋಗ್ಯ ಅಧಿಕಾರಿಗಳ ಸೂಚನೆಯಂತೆ ಶಾಲೆ ಸಂಪೂರ್ಣ ಸ್ಯಾನಿಟೈಸ್ ಮಾಡಿ ಮತ್ತೆ ಪ್ರಾರಂಭಿಸಬೇಕು.
* ಸೋಮವಾರದಿಂದ ಶುಕ್ರವಾರದೊಳಗೆ ಬೆಳಗ್ಗೆ 9.30 ರಿಂದ ಮಧ್ಯಾಹ್ನ 3.30 ವರೆಗೆ ತರಗತಿ ನಡೆಸಬೇಕು.

ತರಗತಿಗಳನ್ನು ಬೆಳಗ್ಗೆ 9.30 ರಿಂದ ಮಧ್ಯಾಹ್ನ 3.30 ರವರೆಗೆ ತರಗತಿ ನಡೆಸಬೇಕು ಎಂದು ಹೇಳಲಾಗಿದೆ. ಕೋವಿಡ್ ಲಕ್ಷಣ ಇರುವ ಮಕ್ಕಳಿಗೆ ಪ್ರವೇಶಾತಿ ಇಲ್ಲ ಎಂದೂ ತಿಳಿಸಲಾಗಿದೆ.

ಕರ್ನಾಟಕದಲ್ಲಿ ಅಕ್ಟೋಬರ್ 25 ರಿಂದ 1ರಿಂದ 5ನೇ ತರಗತಿ ಶಾಲೆ ಆರಂಭವಾಗಿತ್ತು. ಶಾಲೆ ಆರಂಭಕ್ಕೆ ಕೋವಿಡ್​ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಅಕ್ಟೋಬರ್ 25ರಿಂದ ಅಕ್ಟೋಬರ್ 30ರವರೆಗೆ ಅರ್ಧದಿನ ಮಾತ್ರ ತರಗತಿಗಳು ನಡೆದಿತ್ತು.

ನವೆಂಬರ್​ 2ರಿಂದ ಪೂರ್ಣಾವಧಿ ತರಗತಿಗಳು ಆರಂಭವಾಗಿದೆ. ಮಕ್ಕಳು ಶಾಲೆಗೆ ಬರಲು ಪೋಷಕರ ಒಪ್ಪಿಗೆ ಕಡ್ಡಾಯವಾಗಿದೆ. ಶಿಕ್ಷಕರು, ಮಕ್ಕಳಿಗೆ ಮಾಸ್ಕ್ ಧರಿಸುವುದು ಕಡ್ಡಾಯ​ ಮಾಡಲಾಗಿದ್ದು, ಶಿಕ್ಷಕರು 2 ಡೋಸ್​ ಲಸಿಕೆ ಪಡೆದಿರಬೇಕು. ಹಾಗೇ, 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಫೇಸ್​​ಶೀಲ್ಡ್​​​ ಕಡ್ಡಾಯವಾಗಿದೆ ಎಂದು ನಿಯಮ ವಿಧಿಸಲಾಗಿತ್ತು.

Donate Janashakthi Media

Leave a Reply

Your email address will not be published. Required fields are marked *