ಹೈಕೋರ್ಟ್‌ ತೀರ್ಪಿಗೆ ಅಸಮಾಧಾನ, ಮುಸ್ಲಿಂ ಸಂಘಟನೆಗಳಿಂದ ಕರ್ನಾಟಕ ಬಂದ್‌

ಹಿಜಾಬ್ ವಿಷಯದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪು ನಿರಾಶದಾಯಕವಾಗಿದ್ದು, ತೀರ್ಪು ವಿರೋಧಿಸಿ ಮಾರ್ಚ್ 17ರಂದು ಕರ್ನಾಟಕ ಬಂದ್ ನಡೆಸಲು ನಿರ್ಧರಿಸಲಾಗಿದೆ ಎಂದು ಅಮೀರ್ ಎ ಶರೀಯತ್ ಮೌಲಾನಾ ಸಗೀರ್ ಅಹ್ಮದ್ ತಿಳಿಸಿದ್ದಾರೆ.

ಮಾರ್ಚ್ 17 ಗುರುವಾರ ರಾಜ್ಯದ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ತಮ್ಮ ವಿರೋಧವನ್ನು ವ್ಯಕ್ತಿಪಡಿಸಬೇಕು. ನ್ಯಾಯಕ್ಕಾಗಿ ಒತ್ತಾಯಿಸಿ ಈ ಬಂದ್‌ಗೆ ಕರೆ ನೀಡಲಾಗಿದ್ದು, ಬಂದ್ ಶಾಂತಿಯುತವಾಗಿಬೇಕು. ಬಲವಂತದ ಬಂದ್ ನಡೆಸಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಬುಧವಾರ ನಗರದ ದಾರುಲ್ ಉಲೂಮ್ ಸಬೀಲುರ್ರಶಾದ್ ನಲ್ಲಿ ನಡೆದ ಉಲಮಾಗಳು, ವಿವಿಧ ಸಂಘ ಸಂಸ್ಥೆಗಳ ಪತ್ರಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಈ ಬಂದ್ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ವಿಸಲು ಪ್ರಯತ್ನಿಸಬಾರದು, ಪ್ರಮುಖವಾಗಿ ಯುವಕರು ಯಾವುದೇ ರೀತಿಯ ರ‌್ಯಾಲಿಗಳನ್ನು ನಡೆಸುವುದಾಗಲಿ, ಘೋಷಣೆಗಳನ್ನು ಕೂಗುವುದಾಗಿ ಮಾಡಬಾರದು ಎಂದು ಅವರು ತಿಳಿಸಿದರು.

ಬಂದ್ ಅತ್ಯಂತ ಶಾಂತಿಯುತವಾಗಿ ನಡೆಯಬೇಕು. ಅದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಅಮೀರ್ ಎ ಶರೀಅತ್ ಕರೆ ನೀಡಿದರು.ಬುಧವಾರ ನಗರದ ದಾರುಲ್ ಉಲೂಮ್ ಸಬೀಲುರ್ರಶಾದ್ ನಲ್ಲಿ ನಡೆದ ಉಲಮಾಗಳು, ವಿವಿಧ ಸಂಘ ಸಂಸ್ಥೆಗಳ ಪತ್ರಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಈ ಬಂದ್ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು. ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ವಿಸಲು ಪ್ರಯತ್ನಿಸಬಾರದು, ಪ್ರಮುಖವಾಗಿ ಯುವಕರು ಯಾವುದೇ ರೀತಿಯ ರ‌್ಯಾಲಿಗಳನ್ನು ನಡೆಸುವುದಾಗಲಿ, ಘೋಷಣೆಗಳನ್ನು ಕೂಗುವುದಾಗಿ ಮಾಡಬಾರದು ಎಂದು ಅವರು ತಿಳಿಸಿದರು.

ಬಂದ್ ಅತ್ಯಂತ ಶಾಂತಿಯುತವಾಗಿ ನಡೆಯಬೇಕು. ಅದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಅಮೀರ್ ಎ ಶರೀಅತ್ ಕರೆ ನೀಡಿದರು.

Donate Janashakthi Media

Leave a Reply

Your email address will not be published. Required fields are marked *