ನವದೆಹಲಿ: ಕರ್ನಾಟಕದ ಹೈಕೋರ್ಟ್‌ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಆರು ಮಂದಿ ನ್ಯಾಯಮೂರ್ತಿಗಳನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಕಾಯಂಗೊಳಿಸಿ ಅನುಮೋದನೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ಕೊಲಿಜಿಯಂ ಸಭೆಯು ಆಗಸ್ಟ್ 17ರಂದು ನಡೆದಿತ್ತು. ಕರ್ನಾಟಕದ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ನೇರನಹಳ್ಳಿ ಶ್ರೀನಿವಾಸನ್ ಸಂಜಯ್ ಗೌಡ, ಜ್ಯೋತಿ ಮೂಲಿಮನಿ, ನಟರಾಜ ರಂಗಸ್ವಾಮಿ, ಹೇಮಂತ್ ಚಂದನಗೌಡರ್, ಪ್ರದೀಪ್ ಸಿಂಗ್ ಯೆರೂರ್ ಮತ್ತು ಮಹೇಶನ್ ನಾಗಪ್ರಸನ್ನ್ ಅವರನ್ನು ಕಾಯಂ ನ್ಯಾಯಮೂರ್ತಿಗಳಿಗಾಗಿ ಅನುಮೋದನೆ ನೀಡಲಾಗಿದೆ.
ಕಲ್ಕತ್ತ ಹೈಕೋರ್ಟ್‌ನ ನ್ಯಾಯಮೂರ್ತಿ ಕೌಶಿಕ್ ಚಂದಾ ಅವರನ್ನು ಕಾಯಂ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡುವ ಪ್ರಸ್ತಾವಕ್ಕೂ ಕೊಲಿಜಿಯಂ ಅನುಮೋದಿಸಿದೆ.
ನ್ಯಾಯಮೂರ್ತಿ ರಮಣ ಹಾಗೂ ನ್ಯಾಯಮೂರ್ತಿಗಳಾದ ಯುಯು ಲಲಿತ್ ಮತ್ತು ಎಎಂ ಖಾನ್ವಿಲ್ಕರ್ ಅವರು ಹೈಕೋರ್ಟ್ ನ್ಯಾಯಾಧೀಶರಿಗೆ ಸಂಬಂಧಿಸಿದಂತೆ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂರು ಸದಸ್ಯರ ಕೊಲಿಜಿಯಂನ ಭಾಗವಾಗಿದ್ದಾರೆ.