ಕರ್ನಾಟಕ ವಿಧಾನಸಭೆ : ಮೇ 10 ಕ್ಕೆ ಚುನಾವಣೆ, 13 ಕ್ಕೆ ಫಲಿತಾಂಶ – ಚುರುಕುಗೊಂಡ ಪ್ರಕ್ರಿಯೆ

ನವದೆಹಲಿ: ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ  10 ರಂದು ಚುನಾವಣೆ ನಡೆಯಲಿದೆ.

ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ (Election Commission) ಮುಖ್ಯಸ್ಥ ರಾಜೀವ್ ಕುಮಾರ್, ಏಪ್ರಿಲ್‌ 13ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏಪ್ರಿಲ್‌ 20 ನಾಮಪತ್ರ ಲ್ಲಿಸಲು ಕೊನೆಯ ದಿನವಾಗಿದೆ. ಏಪ್ರಿಲ್‌ 21 ನಾಮಪತ್ರ ಪರಿಶೀಲನೆ ನಡೆಲಿದ್ದು, ಏಪ್ರಿಲ್‌ 24 ನಾಮಪತ್ರ ವಾಪಸ್ಸಿಗೆ ಕೊನೆಯ ದಿನವಾಗಿದೆ.  ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದ್ದು, ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.

ಕರ್ನಾಟಕದಲ್ಲಿರುವ ಒಟ್ಟು ಮತದಾರರು  – 5,21,73,579 
ಪುರುಷ ಮತದಾರರು – 2,62,42,561
ಮಹಿಳಾ ಮತದಾರರು – 2,59,26,319
80 ವರ್ಷ ಮೇಲ್ಪಟ್ಟ ಮತದಾರರು – 12,15,763
100 ವರ್ಷ ಮೇಲ್ಪಟ್ಟ ಮತದಾರರು – 16,976 
ಮೊದಲ ಬಾರಿಗೆ ಮತದಾನ ಮಾಡಲಿರುವವರು – 9,17,241
ತೃತೀಯ ಲಿಂಗಿ ಮತದಾರರು – 4,699

ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಮಾಹಿತಿ  ನೀಡಿದ್ದು, 2023ರ ಮೇ 23ರ ಒಳಗೆ ವಿಧಾನಸಭೆ ಅಂತ್ಯವಾಗಬೇಕು. ಅದಕ್ಕೂ ಮುನ್ನ ಹೊಸ ಸರ್ಕಾರ ರಚನೆ ಆಗಬೇಕು. ಮೇ 24ಕ್ಕೆ ವಿಧಾನಸಭೆ 15ನೇ ವಿಧಾನಸಭೆ ಅವಧಿ ಮುಕ್ತಾಯವಾಗಲಿದೆ.  ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತ ಚಲಾಯಿಸುವ ಅವಕಾಶ ನೀಡಲಾಗುತ್ತಿದೆ. ಸಾಕಷ್ಟು ಚಾಲೆಂಜ್ ಗಳಿವೆ, ಅವುಗಳನ್ನು ಸುಧಾರಿಸಿದೆ.  ಬುಡಕಟ್ಟು ಸಮುದಾಯ ಮತದಾನಕ್ಕೂ ವ್ಯವಸ್ಥೆ ಮಾಡಲಾಗಿದೆ. ತೃತೀಯ ಲಿಂಗಿಗಳು ಮತದಾರರ ಸೇರ್ಪಡೆಗೆ ಹಿಂದೇಟು ಹಾಕುತ್ತಾರೆ. ಅವರಿಗೆ ನೋಂದಣಿ ಮಾಡಿಕೊಳ್ಳಲು ಮನವಿ ಮಾಡಲಾಗಿದೆ ಎಂದರು.

58,282 ಒಟ್ಟು ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತಿದೆ. ಒಂದೊಂದು ಮತಗಟ್ಟೆಗೆ 883 ಮಂದಿ ಮತದಾರರಿಗೆ ಅವಕಾಶ ಮಾಡಿಕೊಡಲಾಗುತ್ತದೆ. ನಗರ ಪ್ರದೇಶದಲ್ಲಿ 24,063, ಗ್ರಾಮೀಣ ಭಾಗದಲ್ಲಿ 34,219 ಹಾಗೂ 1320 ಮಹಿಳಾ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತದೆ. ಇನ್ನು ಯುವಕರಿಗಾಗಿ 224 ಮತಗಟ್ಟೆಗಳ ಸ್ಥಾಪನೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ : ನಿಗದಿತ ಅವಧಿಗೂ ಮುನ್ನವೇ ವಿಧಾನಸಭೆ ಚುನಾವಣೆ; ಮೇ 10ರೊಳಗೆ ಎಲ್ಲಾ ಪ್ರಕ್ರಿಯೆ ಪೂರ್ಣ

ಇತರೆ ಮಹಾನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮತದಾನದ ಪ್ರಮಾಣ ಉತ್ತಮವಾಗಿದೆ. ಕಳೆದ ಬಾರಿ ಬೆಂಗಳೂರಿನಲ್ಲಿ ಕಡಿಮೆ ಮತದಾನವಾಗಿದೆ. ಹೀಗಾಗಿ ಈ ಬಾರಿ ಮತದಾನ ಹೆಚ್ಚಿಸಲು ಪ್ರಯತ್ನ ಮಾಡುತ್ತಿದ್ದು, ಮತದಾನ ಹೆಚ್ಚಿಸಲು ಜಾಗೃತಿ ಮೂಡಿಸಲಾಗುತ್ತಿದೆ. ಬಹಳಷ್ಟು ಐಟಿ ಕಂಪನಿಗಳು ಇದಕ್ಕೆ ಸಹಕಾರ ನೀಡುತ್ತಿವೆ ಎಂದು ಮಾಹಿತಿ  ನೀಡಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *