ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರು ಇಂದಿರಾ ಕ್ಯಾಂಟೀನ್‌ಗಳಲ್ಲಿ ದಿನ ಮೂರು ಹೊತ್ತು ಉಚಿತವಾಗಿ ಒದಗಿಸುವಂತೆ ಪೌರಾಡಳಿತ ನಿರ್ದೇಶಕರು ಆದೇಶ ನೀಡಿದ್ದಾರೆ.
ಈ ಬಗ್ಗೆ ಸುತ್ತೋಲೆ ಹರಡಿಸಿರುವ ನಿರ್ದೇಶಕರು ಕೋವಿಡ್-19 ವೈರಾಣು ಹರಡುವಿಕೆಯನ್ನು ತಡೆಗಟ್ಟಲು ಹಾಗೂ ಪ್ರಸರಣ ಸರಪಳಿಯನ್ನು ತುಂಡರಿಸಲು ರಾಜ್ಯದಲ್ಲಿ ಮೇ 10ರಿಂದ ಜಾರಿಯಲ್ಲಿರುವ ಹದಿನಾಲ್ಕು ದಿನಗಳ ಕೋವಿಡ್ ನಿಯಂತ್ರಣ ಕ್ರಮಗಳು ಇರುವುದರಿಂದ ಕಠಿಣ ನಿರ್ಬಂಧಗಳನ್ನು ಹೇರಲಾಗಿದೆ.
ಇದನ್ನು ಓದಿ: ವಾಹನ ಓಡಾಟಕ್ಕೆ ಬ್ರೇಕ್ : 8 ಕಿಮಿ ನಡೆದ ತುಂಬು ಗರ್ಭಿಣಿ
ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರು, ವಲಸಿಗರು ಮತ್ತು ಇತರೆ ದುರ್ಬಲ ವರ್ಗದವರಿಗೆ ಅನಾನುಕೂಲವಾಗದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಚಾಲ್ತಿಯಲ್ಲಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತವಾಗಿ ಊಟವನ್ನು ಒದಗಿಸಲು ಆದೇಶ ನೀಡಿದ್ದಾರೆ.
ಈ ಆದೇಶವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿ ಹೊರತುಪಡಿಸಿ ಉಳಿದೆಡೆ ಜಾರಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮುಂಜಾಗ್ರತೆಯಾಗಿ ಕೋವಿಡ್ ನಿಯಮಗಳನ್ನು ಚಾಚುತಪ್ಪದೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.