ರಾಜ್ಯದಲ್ಲಿ ಜೂನ್ 14ರವರೆಗೂ ಭಾರಿ ಮಳೆ ಸಾಧ್ಯತೆ! 9 ಜಿಲ್ಲೆಗಳಿಗೆ ರೆಡ್ ಅಲರ್ಟ್

ರಾಜ್ಯದ ಬಹುತೇಕ ಕಡೆ ಮುಂದಿನ ನಾಲ್ಕು ದಿನಗಳವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. 9 ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಹಾಸನ, ದಾವಣಗೆರೆ, ಕೊಪ್ಪಳ, ರಾಯಚೂರು, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಮಂಗಳವಾರ ರಾತ್ರಿ ಬೆಂಗಳೂರು ಸೇರಿ ಕರ್ನಾಟಕದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗಿದೆ. ಮುಂಗಾರು ಪೂರ್ವ ಮಳೆ ಹೊಯ್ದು ಮುಂಗಾರು ಆರಂಭವಾದ ಬಳಿಕ ಮಳೆಯೇ ಇರಲಿಲ್ಲ, ಈಗ ಮತ್ತೆ ಜೂನ್ 10ರಿಂದ ಮುಂಗಾರು ಚುರುಕುಗೊಂಡಿದೆ.

Donate Janashakthi Media

Leave a Reply

Your email address will not be published. Required fields are marked *