ಕರ್ನಾಟಕ ರಫ್ತಿನಲ್ಲಿ ನಂಬರ್‌ ಒನ್‌ ಸ್ಥಾನಕ್ಕೆ ಏರಬೇಕು:ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಂಡವಾಳ ಹೂಡಿಕೆ ಹೆಚ್ಚಾಗಬೇಕಾದರೆ ಕೈಗಾರಿಕೆಗೆ ಪೋತ್ಸಾಹದ ವಾತಾವರಣ ಇರಬೇಕು. ಅಂತಹ ವಾತಾವರಣ ಕರ್ನಾಟಕದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಶನಿವಾರ ನಡೆದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರಧಾನ ಸಮಾರಂಭ ಉದ್ವಾಟಿಸಿ,ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ರಫ್ತಿನಲ್ಲಿ ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು ಎರಡನೇ ಸ್ಥಾನದಲ್ಲಿವೆ. ಕರ್ನಾಟಕ ನಂಬರ್‌ ಒನ್‌ ಸ್ಥಾನಕ್ಕೆ ಏರಬೇಕು ಎಂದು ಆಶಿಸಿದರು.

ಇದನ್ನೂ ಓದಿ:ಆರ್ಥಿಕ ಹೊರೆ ನಿಭಾಯಿಸಲು ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಸ್ಥಗಿತ : ಸಿಎಂ ಸಿದ್ದರಾಮಯ್ಯ

ರಫ್ತಿನಲ್ಲಿ ಸಾಧನೆ ಮಾಡಿರುವ  ಉದ್ದಿಮೆಗಳಿಗೆ 1999-93 ರಿಂದ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು ನೀಡುವ ಪರಿಪಾಠ ಆರಂಭಿಸಲಾಗಿದೆ. ಇಂದು 68 ಉದ್ದಿಮೆಗಳಿಗೆ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದ ಉದ್ದಿಮೆಗಳನ್ನು ಆಯ್ಕೆ ಮಾಡಲಾಗಿದೆ ಎಂದರು. ರಫ್ತು ಮಾಡುವುದರಲ್ಲಿ ಕರ್ನಾಟಕ ಮೊದಲಿನಿಂದಲೂ ಮುಂಚೂಣಿಯಲ್ಲಿದೆ. ಕೌಶಲ್ಯ ತರಬೇತಿಯುಳ್ಳ ಕಾರ್ಮಿಕರಿದ್ದರೆ ಕೈಗಾರಿಕಾ ಬೆಳೆವಣಿಗೆಗೆ ಅನುಕೂಲವಾಗುತ್ತದೆ ಎಂಬ ದೃಷ್ಟಿಯಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಆರಂಭಿಸಲಾಗಿತ್ತು. ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು ಎಂದರು.

ಹೊಸ ಕೈಗಾರಿಕಾ ನೀತಿಯನ್ನು ಸರ್ಕಾರ ಘೋಷಣೆ ಮಾಡಿದಾಗ ಕೈಗಾರಿಕಾ ನೀತಿಯನ್ನು ಸರ್ಕಾರ ಘೋಷಣೆ ಮಾಡಿದಾಗ ಕೈಗಾರಿಕೋದ್ಯಮಿಗಳು ನೀತಿಯನ್ನು ಬೆಂಬಲಿಸಿ ಅದನ್ನು ಸ್ವಾಗತಿಸಿದರು. ಈಗಲೂ ಎಲ್ಲರೊಂದಿಗೆ ಚರ್ಚಿಸಿ ರಫ್ತು ಬೆಳೆವಣಿಗೆಗೆ ಪೂರಕವಾಗುವ ಕೈಗಾರಿಕಾ ನೀ ರೂಪಿಸಲಾಗುವುದು ಎಂದರು. ಕೈಗಾರಿಕೆ ಬೆಳೆದರೆ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿ ಆರ್ಥಿಕತೆ ಬೆಳೆಯಲು ನೆರವಾಗಲಿದೆ. ಜಿಡಿಪಿ ಬೆಳೆದು ರಾಜ್ಯ ಬೆಳೆಯಲು ಸಾಧ್ಯವಾಗಿ ರಾಷ್ಟ್ರದ ಜಿಡಿಪಿಗೆ ದೊಡ್ಡ ಕೊಡುಗೆಯನ್ನು ರಾಜ್ಯದಿಂದ ಕೇಂದ್ರಕ್ಕೆ ಕೊಡಲು ಸಾಧ್ಯವಾಗುತ್ತದೆ. ಇವೆಲ್ಲ ಒಂದಕ್ಕೊಂದು ಸಂಬಂಧ ಹೊಂದಿದೆ. ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದರೆ ಹೂಡಿಕೆಗಳು ಬರುತ್ತವೆ, ಹೂಡಿಕೆಗಳು ಬಂದಲ್ಲಿ ಕೈಗಾರಿಕೆಗಳು ಬಂದು ನಿರುದ್ಯೋಗ  ನಿವಾರಣೆಯಾಗುತ್ತದೆ ಎಂದರು.

ಕರ್ನಾಟಕದಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಲ್ಪಿಸಲಾಗುವುದು. ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿರುವ ಉದ್ಯೋಗಿಗಳನ್ನು ಸೃಷ್ಟಿ ಮಾಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಹೇಳಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಾತನಾಡಿ, ಉದ್ಯೋಗ ಸೃಷ್ಟಿ ಮಾಡಬೇಕು ಎನ್ನುವುದು ಸರ್ಕಾರದ ಉದ್ದೇಶ. ಎರಡನೇ,ಮೂರನೇ ಹಂತ ನಗರಗಳಲ್ಲಿ ಉದ್ಯೋಗ ಸೃಷ್ಟಿಗೆ ಉದ್ಯಮಿಗಳು ಮುಂದಾಗಬೇಕು. ಬೆಂಗಳೂರಿನ ಒತ್ತಡ ಕಡಿಮೆ ಮಾಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿ ಆಗಬೇಕು ಎಂದರು.

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್‌, ಶಾಸಕರಾದ ರಿಜ್ವಾನ್‌ ಅರ್ಷದ್‌, ಶಾಮನೂರು ಶಿವಶಂಕರಪ್ಪ, ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಎಸ್.ಸೆಲ್ವಕುಮಾರ್‌,ಆಯುಕ್ತರಾದ ಗುಂಜನ್‌ ಕೃಷ್ಣ ಇದ್ದರು.

Donate Janashakthi Media

Leave a Reply

Your email address will not be published. Required fields are marked *