Karnataka State Budget 2025 : ಬೆಂಗಳೂರು ವಿವಿಗೆ ಪ್ರಧಾನಿ ಮನಮೋಹನ್ ಸಿಂಗ್ ಎಂದು ಮರುನಾಮಕರಣ

ಬೆಂಗಳೂರು: 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಯಲವನ್ನು ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಈ ಬಾರಿ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ|| ಮನಮೋಹನ್ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್.ಸಿ.ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಪ್ರಕಟಿಸಿದರು.

ಇದನ್ನು ಓದಿ ತುಮಕೂರು| ಚಿತ್ರತಂಡದ ಮೇಲೆ ಅರಣ್ಯಾಧಿಕಾರಿಗಳ ದಾಳಿ

ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ ಎಂದರು.

Donate Janashakthi Media

Leave a Reply

Your email address will not be published. Required fields are marked *