ಧಾರವಾಡ: ಕೋವಿಡ್-19ನಿಂದಾಗಿ ಮುಂದೂಡಲ್ಪಟ್ಟಿದ್ದ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವಂತಿಲ್ಲ. ಬದಲಿಗೆ, ಹಿಂದಿನ ಸೆಮಿಸ್ಟರ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳ ಆಧಾರದಲ್ಲಿ ಆಥವಾ ಆಂತರಿಕ ಮೌಲ್ಯಮಾಪನದ ಮೂಲಕ ಫಲಿತಾಂಶ ಪ್ರಕಟಿಸಬೇಕೆಂದು ಯುಜಿಸಿ ನಿಯಮವಾಗಿದೆ.
ಕರ್ನಾಟಕ ವಿಶ್ವವಿದ್ಯಾಲಯವು ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳ ವಿಚಾರದಲ್ಲಿ ಅನುಸರಿಸುತ್ತಿರುವ ಹಠಮಾರಿ ಧೋರಣೆಯನ್ನು ಭಾರತ ವಿದ್ಯಾರ್ಥಿ ಫೆಡರೇಷನ್(ಎಸ್‌ಎಫ್‌ಐ) ಸಂಘಟನೆ ಖಂಡಿಸಿದೆ. ಇಲ್ಲವಾದಲ್ಲಿ ತೀವ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಸ್‌ಎಫ್‌ಐ ರಾಜ್ಯ ಸಮಿತಿ ಸದಸ್ಯರಾದ ಬಸವರಾಜ ಭೋವಿ, ಗಣೇಶ ರಾಠೋಡ ತಿಳಿಸಿದ್ದಾರೆ.
ಇದನ್ನು ಓದಿ: ಅಕ್ಟೋಬರ್ 1ರಿಂದ ಶೈಕ್ಷಣಿಕ ವರ್ಷಾರಂಭ: ಯುಜಿಸಿ
ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 2020-21ನೇ ಸಾಲಿನ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ‘ವರ್ಷಾಂತ್ಯದ ಸೆಮಿಸ್ಟರ್ ಅಥವಾ ಅಂತಿಮ ಸೆಮಿಸ್ಟರ್’ಗೆ ಮಾತ್ರ ‘ಆಫ್‌ಲೈನ್ ಅಥವಾ ಆನ್‌ಲೈನ್ ಪರೀಕ್ಷೆ ನಡೆಸುವಂತೆ ವಿಶ್ವವಿದ್ಯಾಲಯದ ಧನಸಹಾಯ ಆಯೋಗ (ಯುಜಿಸಿ)ವು ದಿನಾಂಕ:16.07.2021 ರಂದು ಆದೇಶ ಹೊರಡಿಸಿದೆ.
ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಬೇಕಿದ್ದ 2020-21ನೇ ಸಾಲಿನ ಪದವಿ ಕೋರ್ಸ್‌ಗಳಾದ 1, 3, 5 ಹಾಗೂ 7ನೇ ಸೆಮಿಸ್ಟರ್ ಪರೀಕ್ಷೆಗಳನ್ನು ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳು ಕೊವಿಡ್-19ರ ಲಾಕ್‌ಡೌನ್ ಕಾರಣ ಮುಂದೂಡಿದ್ದವು.
ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ದೃಷ್ಟಿಯಿಂದ 2, 4, 6 ಹಾಗೂ 8ನೇ ಸೆಮಿಸ್ಟರ್ ತರಗತಿಗಳನ್ನು ಜುಲೈ ಅಂತ್ಯದ ವೇಳೆಗೆ ವರ್ಷದ ಎರಡು ಸೆಮಿಸ್ಟರ್ ಗಳ ಪರೀಕ್ಷೆಗಳನ್ನು ನಡೆಸಲು ಮುಂದಾಗಿದವು. ವಿವಿಯ ಈ ಕ್ರಮದ ವಿರುದ್ಧ ಎಸ್‌ಎಫ್‌ಐ ಸಂಘಟನೆಯು ರಾಜ್ಯಾದ್ಯಂತ ಪ್ರತಿಭಟನೆ ಮಾಡಿ ತೀವ್ರ ವಿರೋಧ ವ್ಯಕ್ತಪಡಿಸಿತ್ತು.
ವರ್ಷಾಂತ್ಯದ 2, 4, 6 ಹಾಗೂ 8ನೇ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸುವಂತೆ ಸೂಚಿಸಿರುವ ಯುಜಿಸಿ ಆದೇಶವನ್ನು ನೀಡಿದೆ. 1, 3, 5, 7ನೇ ಸೆಮಿಸ್ಟರ್‌ಗೆ ಆಂತರಿಕ ಮೌಲ್ಯಮಾಪನದ ಮೂಲಕ ಫಲಿತಾಂಶ ಪ್ರಕಟಿವಂತೆ ತಿಳಿಸಿದೆ. ಈ ನಿಯಮವನ್ನು ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ ಗಾಳಿಗೆ ತೂರಿದೆ ಎಂದು ಸಂಘಟನೆಯು ಆರೋಪಿಸಿದೆ. ಇಂತಹ ಅವೈಜ್ಞಾನಿಕ ಪರೀಕ್ಷಾ ನೀತಿಯನ್ನು ಜಾರಿ ಮಾಡಲು ಮುಂದಾಗಿರುವದನ್ನು ತೀವ್ರವಾಗಿ ಖಂಡಿಸಿದ್ದಾರೆ.
ಇದನ್ನು ಓದಿ: ಸೆಮಿಸ್ಟರ್ ಪರೀಕ್ಷೆ ರದ್ದತಿ-ಪರೀಕ್ಷಾ ಶುಲ್ಕ ಮನ್ನಾಕ್ಕಾಗಿ ಎಸ್‌ಎಫ್‌ಐ ಮನವಿ
ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಸೆಪ್ಟಂಬರ್ 24ರಿಂದ ಆರಂಭಗೊಳ್ಳಲಿದ್ದು, ಅಕ್ಟೋಬರ್ 1ರಿಂದ ಸ್ನಾತಕ ಮತ್ತು ಸ್ನಾತಕೋತ್ತರ ಪದವಿಗಳ ತರಗತಿಗಳು ಶುರುವಾಗಲಿವೆ. ಈ ಬಾರಿ ತರಗತಿಗಳನ್ನು ಆಫ್‌ಲೈನ್, ಆನ್‌ಲೈನ್ ಅಥವಾ ಎರಡೂ ಮಾದರಿಯಲ್ಲಿ ನಡೆಸಲು ಯುಜಿಸಿ ನಿರ್ದೇಶಿಸಿದೆ.
ಜುಲೈ ಅಂತ್ಯದ ವೇಳೆಗೆ ಐಸಿಎಸ್‌ಇ, ಸಿಬಿಎಸ್‌ಇ ಸೇರಿದಂತೆ ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ 12ನೇ ತರಗತಿ ಫಲಿತಾಂಶ ಪ್ರಕಟಗೊಳ್ಳಲಿದ್ದು, ಸೆಪ್ಟಂಬರ್ 30ರ ಒಳಗೆ ಎಲ್ಲಾ ಪದವಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಖಾಲಿ ಉಳಿದ ಪ್ರಕ್ರಿಯೆಯನ್ನು ಸೀಟುಗಳ ಭರ್ತಿ ಒಳಗೆ ಪೂರ್ಣಗೊಳಿಸಿ, ಅಗತ್ಯ ದಾಖಲೆಗಳ ಸಲ್ಲಿಕೆಗೆ ಡಿಸೆಂಬರ್ 31ರ ವರೆಗೆ ಅವಕಾಶ ನೀಡಬೇಕು ಎಂದು ಯುಜಿಸಿಯ ನಿಯಮಗಳಾಗಿವೆ.
ಯುಜಿಸಿ ನಿಯಮದಂತೆಯೇ ಕರ್ನಾಟಕ ವಿಶ್ವವಿದ್ಯಾಲಯವು ಪಾಲಿಸಬೇಕೆಂದು ಎಸ್‌ಎಫ್‌ಐ ಸಂಘಟನೆಯು ಆಗ್ರಹಿಸಿದೆ.
Namage eradu semester exam bariyoke time illa…
Pramoot
Yes SFI we can do it
Jai hind