ನೇತ್ರದಾನದ ಮೂಲಕ ಸಮಾಜಮುಖಿಯಾದ ಕರುನಾಡ ಕುಳ್ಳ

 ಬೆಂಗಳೂರು : ಹಿರಿಯ ನಟ ಕರುನಾಡ ಕುಳ್ಳ ದ್ವಾರಕೀಶ್‌ ಅವರ ಕಣ್ಣುಗಳನ್ನು ದಾನಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಎರಡು ಕಣ್ಣುಗಳನ್ನು ದಾನಮಾಡಿರುವುದು ಸಮಾಜಕಮುಖಿ ಕೆಲಸ ಎಂದು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಡಾ. ರಾಜ್ ಕುಮಾರ್ ಮತ್ತು ಅವರ ಜೋಡಿ ಬಹಳ ಚೆನ್ನಾಗಿತ್ತು. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರ ಚಿತ್ರಗಳಲ್ಲಿ ಯೂ ಅಭಿನಯಿಸಿದ್ದರು. ಜೀವನದಲ್ಲಿ ಬಹಳಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆದರೂ ಕನ್ನಡ ಚಿತ್ರ ನಿರ್ಮಾಣ, ನಟನೆಯನ್ನು ಬಿಟ್ಟಿರಲಿಲ್ಲ. ಕಷ್ಟಗಳನ್ನು ಸಹಿಸಿ ಕನ್ನಡ ಚಿತ್ರರಂಗ ಬೆಳೆಯಲು ಕೊಡುಗೆ ನೀಡಿದ್ದಾರೆ. ಮೈಸೂರಿನ ಹುಣಸೂರಿನಲ್ಲಿ ಹುಟ್ಟಿದವರು. ತವರಿನ ಬಗ್ಗೆ ಬಹಳ ಪ್ರೇಮವಿತ್ತು. ಒಮ್ಮೆ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ರಾಜಕೀಯ, ಸಿನಿಮಾ, ಸಾಮಾಜಿಕ ವಿಚಾರಗಳನ್ನು ಚರ್ಚೆ ಮಾಡಿದ್ದೆವು ಎಂದು ಸ್ಮರಿಸಿದರು.

ಇದನ್ನೂ ಓದಿ: ಕನ್ನಡದ ಹಿರಿಯ ನಟ ದ್ವಾರಕೀಶ್ ನಿಧನ

ಸತ್ತ ನಂತರವೂ ಸಮಾಜಮುಖಿ ಕೆಲಸ ಮಾಡಿದ್ದಾರೆ. ಅಂಥ ವ್ಯಕ್ತಿಯನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ ಕನ್ನಡ ಚಿತ್ರರಂಗದಕ್ಕೆ ನಟ, ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿ ದ್ವಾರಕೀಶ್ ಅಪಾರ ಕೊಡುಗೆ ಹಾಗೂ ಸೇವೆಯನ್ನು ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ಹಾಸ್ಯನಟರಾಗಿ ಅಲ್ಲದೇ ನಾಯಕ ನಟರಾಗಿಯೂ ಉತ್ತಮ ಅಭಿನಯ ಮಾಡಿ ಜನಮಾನಸದಲ್ಲಿ ಉಳಿದಿದ್ದಾರೆ. ಎರಡು ಕಣ್ಣುಗಳನ್ನು ದಾನಮಾಡಿರುವುದು ಶ್ಲಾಘನೀಯ. ಸತ್ತ ನಂತರವೂ ಸಮಾಜಮುಖಿ ಕೆಲಸ ಮಾಡಿದ್ದಾರೆ. ಅಂಥ ವ್ಯಕ್ತಿಯನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ ಎಂದರು.

ಇದನ್ನೂ ನೋಡಿ: ರಾಮ ನವಮಿ ವಿಶೇಷ : ರಾಮಯ್ಯ ಬಾರಯ್ಯ ಮೋದಿಯ ಕೇಳಯ್ಯ Janashakthi Media

Donate Janashakthi Media

Leave a Reply

Your email address will not be published. Required fields are marked *