ಲಿಂಗಸಗೂರು| ಮೂಲಭೂತ ಸೌಲಭ್ಯ ಒದಗಿಸಲು ಆಗ್ರಹಿಸಿ ಕರುನಾಡ ವಿಜಯಸೇನೆ ನೇತೃತ್ವದಲ್ಲಿ ಪ್ರತಿಭಟನೆ

ಲಿಂಗಸುಗೂರು: ತಾಲೂಕಿನ ನೀರಲಕೇರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಡವಿಬಾವಿ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಕರುನಾಡ ವಿಜಯಸೇನೆ ಗ್ರಾಮ ಘಟಕ ಮತ್ತು ತಾಲೂಕ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಕರುನಾಡ ವಿಜಯಸೇನೆ ತಾಲೂಕ ಸಮಿತಿ ಅಧ್ಯಕ್ಷ ಹನುಮಂತ ಬಡಿಗೇರ ಮಾತನಾಡಿ ಸುಮಾರು ವರ್ಷಗಳು ಕಳೆದರೂ ಸಹ ಈ ಗ್ರಾಮ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದ್ದು, ಸುಮಾರು ವರ್ಷಗಳಿಂದ ಗ್ರಾಮದಲ್ಲಿ ಜನತೆಗೆ ಕುಡಿಯಲು ಶುದ್ಧ  ನೀರು ಸಿಗುತ್ತಿಲ್ಲ. ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿದ್ದು ಅಧಿಕಾರಿಗಳ ಬೇಜವಾಬ್ದಾರಿಯಿಂದ ಗ್ರಾಮದಲ್ಲಿ ಅನೇಕ ಸಮಸ್ಯೆಗಳು ತಾಂಡವಾಡುತ್ತಿವೆ ಎಂದು ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:ಮಂಜುಳಾ ಕೊಲೆ| ಕೊಲೆಗಾರರ ಬಂಧನ ಮಾಡದ ಪೊಲೀಸ್ ಇಲಾಖೆ ವಿರುದ್ದ ಪ್ರಗತಿಪರ ಸಂಘಟನೆಗಳ ಹೋರಾಟ

ಕೂಡಲೇ ಕುಡಿಯುವ ನೀರಿನ ಘಟಕವನ್ನು ದುರಸ್ತಿಗೊಳಿಸಬೇಕು. ಗ್ರಾಮದಲ್ಲಿ ಒಳಚರಂಡಿ ನಿರ್ಮಾಣ ಮಾಡಬೇಕು ಗ್ರಾಮದಲ್ಲಿ ಕೊಳಚೆ ನೀರು ರಸ್ತೆಗೆ ಹರಿದು ರಸ್ತೆ ತಿರುಗಾಡಲು ಬಾರದೆ ದುರ್ವಾಸನೆಯಿಂದ ಗಬ್ಬು ನಾರುತಿದೆ ಇದರಿಂದಾಗಿ ಗ್ರಾಮದಲ್ಲಿ ಸಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಮತ್ತು ಅಡವಿಬಾವಿ ಗ್ರಾಮದಿಂದ ಮಜ್ಜಿಗೆರೆ ದೊಡ್ಡಿಗೆ ರಸ್ತೆ ನಿರ್ಮಾಣ ಮಾಡಬೇಕು ಎಂದರು.

ಅಡವಿಬಾವಿಯಿಂದ ರಾಂಪುರ ಮೂಲಕ ನಾಗರಾಳ ದೊಡ್ಡಿಗೆ ರಸ್ತೆ ನಿರ್ಮಾಣ ಮಾಡಬೇಕು. ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂಭಾಗದಲ್ಲಿರುವ ಒಳಚರಂಡಿ ಮತ್ತು ಶಾಲಾ ಮಕ್ಕಳು ಕುಡಿಯುವ ನೀರಿನ ತೊಟ್ಟಿಯನ್ನು ಸ್ವಚ್ಛಗೊಳಿಸಬೇಕು ಈ ಕುರಿತು ಇಲ್ಲಿಯ ಜನಪ್ರತಿನಿಧಿಗಳಿಗೆ ಮತ್ತು ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ ಕೂಡಲೇ ಗ್ರಾಮದಲ್ಲಿರುವ ಮೂಲಭೂತ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕು ಒಂದು ವೇಳೆ ನಿರ್ಲಕ್ಷ್ಯವಹಿಸಿದರೆ ಗ್ರಾಮ ಪ೦ಚಾಯಿತಿ ಕಾರ್ಯಾಲಯದ ಮುಂದೆ ಉಗ್ರವಾದ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು ತದ ನಂತರ ಸಂಘಟನೆಯ ಮತ್ತು ಗ್ರಾಮದ ಮುಖಂಡರು ಪೋಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾಮ ಪ೦ಚಾಯತ್‌ ಕಾರ್ಯದರ್ಶಿ ಈಶ್ವರಪ್ಪ ಅವರಿಗೆ ಮನವಿ‌ ಪತ್ರ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕರುನಾಡ ವಿಜಯಸೇನೆಯ ತಾಲೂಕ ಅಧ್ಯಕ್ಷ ಹನುಮಂತ ಬಡಿಗೇರ, ಉಪಾಧ್ಯಕ್ಷ ರಂಗಪ್ಪ ಭೋವಿ, ಕಾರ್ಯದರ್ಶಿ ಪರುಶುರಾಮ್ ಗೊರೆಬಾಳ, ಹನುಮಂತ ರಾಂಪುರ, ಗ್ರಾಮ ಘಟಕದ ಅಧ್ಯಕ್ಷ ಹನುಮಂತ ನಾಗರಹಾಳ, ದುರಗಪ್ಪ ಪೂಜಾರ, ದುರಗಪ್ಪ ಮೇಗಳಮನಿ, ಹುಲುಗಪ್ಪ ನಾಗರಹಾಳ, ಶಿವಪ್ಪ, ಅಂದಾನಪ್ಪ ಹೊಸಮನಿ, ಆದಪ್ಪ, ಅಮರೇಶ್ ಈಚ ನಾಳ, ಆದೇಶ ತಳವಾರ ಯಮನಪ್ಪ ಸೇರಿದಂತೆ ಸಂಘಟನೆಯ ಕಾರ್ಯಕರ್ತರು ಪದಾಧಿಕಾರಿಗಳು ಹಾಗೂ ಗ್ರಾಮದ ಗ್ರಾಮಸ್ಥರು ಪಾಲ್ಗೊಂಡಿದ್ದರು.

ವಿಡಿಯೋ ನೋಡಿ:ದುಡಿಯುವ ಜನರ ಮಹಾಧರಣಿ ನವೆಂಬರ್ 26 ರಿಂದ 28 Janashakthi Media

Donate Janashakthi Media

Leave a Reply

Your email address will not be published. Required fields are marked *