ಬೆಂಗಳೂರು: ಇಂದು ಭಾನುವಾರದಂದು ಕರವೇ ಕಾರ್ಯಕರ್ತರು ಕಳೆದ ಡಿಸೆಂಬರ್‌ನಲ್ಲಿ ನಡೆದ 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಬಾರದು ಹಾಗೂ ಮರುಪರೀಕ್ಷೆ ಮಾಡಬೇಕೆಂದು ಆಗ್ರಹಿಸಿ ಗಾಂಧಿನಗರದ ಕರ್ನಾಟಕ ರಕ್ಷಣಾ ವೇದಿಕೆ ಕೇಂದ್ರ ಕಛೇರಿಯಲ್ಲಿ ಪ್ರತಿಭಟನೆ ನಡೆಸಿದರು. ಬೆಂಗಳೂರು
ಈ ಪರೀಕ್ಷೆಯಲ್ಲಿ ಸಾಕಷ್ಟು ಗೊಂದಲಗಳಿವೆ. ಆದ್ದರಿಂದ ಫಲಿತಾಂಶವನ್ನು ತಡೆಹಿಡಿದು, ಹೊಸದಾಗಿ ನೋಟಿಫಿಕೇಶನ್ ಹೊರಡಿಸಿ ಮರುಪರೀಕ್ಷೆ ನಡೆಸಬೇಕು ಎಂದು ಕರವೇ ನಾರಾಯಣ ಗೌಡ ಬಣದ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಬೆಂಗಳೂರು
ಕೆಪಿಎಸ್‌ಸಿ ವಿರುದ್ಧ ಕರವೇ ಹೋರಾಟಕ್ಕೆ ಮುಂದಾಗಿದ್ದು, ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯವನ್ನು ಖಂಡಿಸಿ ಕರವೇ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಪ್ರತಿಭಟನೆ ನಡೆಸುತ್ತಿದೆ.
ಕರವೇ ಅಧ್ಯಕ್ಷ ನಾರಾಯಣ ಗೌಡರ ನೇತೃತ್ವದಲ್ಲಿ ಗಾಂಧಿನಗರದ ಕರವೇ ಕೇಂದ್ರ ಕಚೇರಿಯಲ್ಲಿ ಈ ಪ್ರತಿಭಟನೆ ನಡೆಯುತ್ತಿದೆ. 150 ಕ್ಕೂ ಹೆಚ್ಚು ಅಭ್ಯರ್ಥಿಗಳು ರಕ್ತದಲ್ಲಿ ಪತ್ರ ಬರೆದು ಕೆಪಿಎಸ್‌ಸಿ ವಿರುದ್ಧ ಹಂತ ಹಂತವಾಗಿ ಹೋರಾಟ ನಡೆಸುವುದಾಗಿ ತಿಳಿಸಿದ್ದಾರೆ.
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಕರವೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ. ಕೆಪಿಎಸ್‌ಸಿ ಭ್ರಷ್ಟಾಚಾರದ ಕೂಪವಾಗಿದೆ ಎಂದು ನಾರಾಯಣ ಗೌಡ ಆರೋಪಿಸಿದ್ದಾರೆ. ಕೆಎಎಸ್ ಪರೀಕ್ಷೆ ಬರೆದ 70,000 ಕ್ಕೂ ಹೆಚ್ಚು ಅಭ್ಯರ್ಥಿಗಳ ಭವಿಷ್ಯ ಅತಂತ್ರವಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರಶ್ನೆ ಪತ್ರಿಕೆಯಲ್ಲಿ ತಪ್ಪು ತಪ್ಪು ಪ್ರಶ್ನೆಗಳನ್ನು ಕೇಳಿ ಅಭ್ಯರ್ಥಿಗಳನ್ನು ಗೊಂದಲಕ್ಕೀಡು ಮಾಡಲಾಗಿದೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳನ್ನು ಕಡೆಗಣಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಈ ಹಿಂದೆ ಎರಡು ಬಾರಿ ಪ್ರತಿಭಟನೆ ನಡೆಸಲಾಗಿದೆ. ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದೆ. ಆದರೆ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಸಿಎಂ ಅವರನ್ನು ಒಂದು ವಾರದಿಂದ ಭೇಟಿಯಾಗಲು ಪ್ರಯತ್ನಿಸುತ್ತಿದ್ದರೂ ಸಾಧ್ಯವಾಗಿಲ್ಲ ಎಂದು ನಾರಾಯಣ ಗೌಡ ಹೇಳಿದ್ದಾರೆ.
ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಭಾಷಾಂತರದಲ್ಲಿ ಲೋಪ
ಇದೇ ಕಾರಣದಿಂದ ಇಂದು ರಾಜ್ಯಾದ್ಯಂತ ಸಾವಿರಾರು ಅಭ್ಯರ್ಥಿಗಳು ರಕ್ತದಲ್ಲಿ ಪತ್ರ ಬರೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಡಿಸೆಂಬರ್ 29 ರಂದು ನಡೆದ ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಭಾಷಾಂತರದಲ್ಲಿ ಲೋಪಗಳು ಕಂಡುಬಂದಿತ್ತು. ಅರ್ಥವಾಗದಂತೆ ಇಂಗ್ಲೀಷ್ ನಿಂದ ಕನ್ನಡಕ್ಕೆ ತರ್ಜುಮೆ ಮಾಡಲಾಗಿತ್ತು. ಈ ಹಿಂದೆ ಪರೀಕ್ಷಾರ್ಥಿಗಳು ಎರಡು ಬಾರಿ ಪ್ರತಿಭಟನೆ ನಡೆಸಿದ್ದರು ಮತ್ತು ಕೆಪಿಎಸ್‌ಸಿ ಕಚೇರಿಯನ್ನು ಮುತ್ತಿಗೆ ಹಾಕಿದ್ದರು.
1.10 ಲಕ್ಷ ಕನ್ನಡ ಮಾಧ್ಯಮದ ಪರೀಕ್ಷಾರ್ಥಿಗಳು ಪರೀಕ್ಷೆ ಬರೆದಿದ್ದರು. ಕರವೇ ನಾಯಕರು ಸಿಎಂ ಅವರನ್ನು ಭೇಟಿ ಮಾಡಿದರೂ ಪ್ರಯೋಜನವಾಗಿಲ್ಲ. ಇದೀಗ ರಕ್ತದಲ್ಲಿ ಪತ್ರ ಬರೆಯುವ ಮೂಲಕ ಕೆಪಿಎಸ್ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತಿದೆ.
ಇದನ್ನೂ ನೋಡಿ: ತ್ರಿಭಾಷ ಸೂತ್ರ ಮತ್ತು ಕಲಿಕಾ ಮಾಧ್ಯಮ – ನಿರಂಜನಾರಾಧ್ಯ.ವಿ.ಪಿJanashakthi Media