ವಿದ್ಯಾರ್ಥಿಗಳು ಪ್ರದರ್ಶಿಸಿದ ಕಾರ್ಯಕ್ರಮದಲ್ಲಿ ಜಾತಿ ನಿಂದನೆ: ತನಿಖೆಗೆ ಆದೇಶಿಸಿದ ಜೈನ್ ವಿಶ್ವವಿದ್ಯಾಲಯ

ಬೆಂಗಳೂರು: ಸೆಂಟರ್ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ (ಸಿಎಂಎಸ್‌) ನಲ್ಲಿ ಫೆಬ್ರವರಿ 6ರಂದು ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದದಲ್ಲಿ ವಿದ್ಯಾರ್ಥಿಗಳ ಪ್ರದರ್ಶಿಸಿದ ಕಾರ್ಯಕ್ರಮದಲ್ಲಿ ದಲಿತರ ಬಗ್ಗೆ ಅವಹೇಳನವಾಗಿದೆ ಎಂದು ಆರೋಪಗಳು ಕೇಳಿ ಬಂದಿದ್ದು, ವಿವಾದ ಬಗ್ಗೆ ತನಿಖೆ ನಡೆಸಲು ಜೈನ್ ವಿಶ್ವವಿದ್ಯಾಲಯ  ಶಿಸ್ತು ಸಮಿತಿ ರಚಿಸಿದೆ.

ಜೈನ್‌ ವಿಶ್ವವಿದ್ಯಾಲಯದ ಅಡಿಯಲ್ಲಿರುವ ಎಲ್ಲಾ ಕಾಲೇಜು ವಿದ್ಯಾರ್ಥಿಗಳಿಗಾಗಿ ಯುವ ಸಮ್ಮೇಳನವೊಂದನ್ನು ಆಯೋಜಿಸಲಾಗಿತ್ತು. ಇದರ ಅಂಗವಾಗಿ ಪ್ರದರ್ಶನಗೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸಮುದಾಯವೊಂದರ ಬಗ್ಗೆ ಅವಹೇಳನ ಮಾಡಲಾಗಿದೆ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ ಅವರಿಗೂ ಅಪಮಾನ ಮಾಡಲಾಗಿದೆ.

ಇದನ್ನು ಓದಿ: 70 ವರ್ಷಗಳಿಂದ ನಿಷೇಧ ಹೇರಲಾಗಿದ್ದ ದೇವಾಲಯ ಪ್ರವೇಶಿಸಿದ 300 ಮಂದಿ ದಲಿತರು

ವಿಶ್ವವಿದ್ಯಾಲಯವು ಯಾವುದೇ ರೀತಿಯ ಅಸಮಾನತೆ, ಜಾತೀಯತೆಯನ್ನು ಪ್ರೋತ್ಸಾಹಿಸುವುದಿಲ್ಲ ಮತ್ತು ಅಂತಹ ವಿಷಯಗಳನ್ನು ಪುರಸ್ಕರಿಸುವುದಿಲ್ಲ. ಸ್ಕಿಟ್ ಅನ್ನು ಪ್ರದರ್ಶಿಸಿದ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ವಿಷಯವನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ.

ವಿಶ್ವವಿದ್ಯಾಲಯ ಧನಸಹಾಯ ಆಯೋಗದ (ಯುಜಿಸಿ) ಮಾರ್ಗಸೂಚಿಗೆ ಅನುಗುಣವಾಗಿಯೇ ತನಿಖೆಗೆ ಆದೇಶಿಸಲಾಗಿದೆ. ಅದರ ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಲು ಶಿಸ್ತು ಸಮಿತಿಯನ್ನು ರಚಿಸಲಾಗಿದೆ. ಈ ಬಗ್ಗೆ ಸ್ಕಿಟ್ ಮಾಡಿದ ವಿದ್ಯಾರ್ಥಿಗಳ ಪೋಷಕರೊಂದಿಗೂ ಚರ್ಚಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ: ಗದಗದಲ್ಲಿ ದಲಿತ ಕುಟುಂಬಗಳಿಗೆ ಬಹಿಷ್ಕಾರ; ದೇವಸ್ಥಾನ ಪ್ರವೇಶವಿಲ್ಲ, ಹೋಟೆಲು ಕಿರಾಣಿಗೂ ಹೋಗುವಂತಿಲ್ಲ

ದಿ ಡೆಲ್ರಾಯ್ಸ್ ಬಾಯ್ಸ್ ತಂಡ ಪ್ರದರ್ಶಿಸಿದ ಕಾರ್ಯಕ್ರಮದಲ್ಲಿ, ಜಾತಿವಾದಿ ಸಂಭಾಷಣೆಗಳಿದ್ದವು, ಭಾರತೀಯ ಸಂವಿಧಾನದ ಪಿತಾಮಹ ಮತ್ತು ಹಿಂದುಳಿದ ವರ್ಗಗಳ ನಾಯಕ ಡಾ ಬಿಆರ್ ಅಂಬೇಡ್ಕರ್ ಅವರನ್ನು ಗುರಿಯಾಗಿಸಿಕೊಂಡು ಅವಹೇಳನ ಮಾಡಿ ಅಸ್ಪೃಶ್ಯತೆ ಪದವನ್ನು ಬಳಸಲಾಗಿತ್ತು. ಮ್ಯಾಡ್ ಆಡ್ಸ್ ಎಂಬ ಕಾರ್ಯಕ್ರಮದಲ್ಲಿ ಹಾಸ್ಯಮಯ ರೀತಿಯಲ್ಲಿ ಕಾಲ್ಪನಿಕ ಉತ್ಪನ್ನಗಳನ್ನು ಜಾಹೀರಾತು ಮಾಡುವ ಕುರಿತು ಸ್ಕಿಟ್ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದಲಿತ ಸಂಘಟನೆಗಳು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಜೈನ್‌ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಮತ್ತು ವಿದ್ಯಾರ್ಥಿಗಳ ವಿರುದ್ಧ ಕ್ರಮ ಆಗ್ರಹಿಸಿವೆ ಮತ್ತು ದೂರನ್ನು ದಾಖಲಿಸಿದೆ.

ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ ನಂತರ ಎಫ್‌ಐಆರ್ ದಾಖಲಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸ್ಕಿಟ್‌ ನ ವೀಡಿಯೊ ವೈರಲ್ ಆದ ನಂತರ, ಡೆಲ್ರಾಯ್ಸ್ ಬಾಯ್ಸ್ ತಂಡ ಇನ್‌ಸ್ಟಾಗ್ರಾಂ ನಲ್ಲಿ ಕ್ಷಮೆಯಾಚಿಸಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *