ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮತದಾನ; ಚುನಾವಣಾ ಆಯೋಗಕ್ಕೆ ಧನ್ಯವಾದ ತಿಳಿಸಿದ ಕೆಯುಡಬ್ಲ್ಯೂಜೆ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾರ್ಯನಿರತ ಪತ್ರಕರ್ತರಿಗೆ ಅಂಚೆ ಮತದಾನ (ಪೋಸ್ಟಲ್ ವೋಟಿಂಗ್) ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮಾಡಿದ ಮನವಿಗೆ ಚುನಾವಣಾ ಆಯೋಗ ಪುರಸ್ಕರಿಸಿದ್ದು, ಸಂಘವು ಆಯೋಗಕ್ಕೆ ಧನ್ಯವಾದ ತಿಳಿಸಿದೆ.

ಚುನಾವಣಾ ಆಯೋಗದ ನಿರ್ಧಾರದಿಂದ ನಾನಾ ಕಡೆಯಲ್ಲಿ ಹಲವು ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ‌ ಮಾಡುತ್ತಿದ್ದ ಕಾರ್ಯನಿರತ ಪತ್ರಕರ್ತರು ಮತದಾನ ವಂಚಿತರಾಗುವುದು ತಪ್ಪಿದಂತಾಗಿದೆ. ಕರ್ತವ್ಯ ನಿರತರಾಗಿದ್ದಲ್ಲಿಂದಲೇ (ಅಗತ್ಯವಿದ್ದವರು) ತಮ್ಮ ಮತವಿರುವ ಕ್ಷೇತ್ರದಲ್ಲಿ ಮತದಾನ ಮಾಡಲು ಅವಕಾಶ ದೊರೆತಿರುವುದು ಅನುಕೂಲವಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ಇದನ್ನು ಓದಿ: ಮತದಾನದ ಸುಧಾರಣೆಗೆ ಬದಲಿ ಕ್ರಮಕ್ಕೆ ಮುಂದಾದ ಚುನಾವಣಾ ಆಯೋಗ

ಆನ್‌ಲೈನ್ ಮತದಾನಕ್ಕೆ ಅವಕಾಶ ಕೋರಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಕೆಯುಡಬ್ಲ್ಯೂಜೆ ಪತ್ರ ಬರೆದಿತ್ತು.

ದೃಶ್ಯ ಮುದ್ರಣ, ರೇಡಿಯೋ ಮಾಧ್ಯಮಗಳ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರು ಪ್ರತಿ ಚುನಾವಣೆ ವೇಳೆಯಲ್ಲೂ ಮತದಾನದಿಂದ ವಂಚಿತರಾಗುತ್ತಿದ್ದಾರೆ ಎನ್ನುವ ವಿಷಯವನ್ನು ಗಮನಕ್ಕೆ ತರಲಾಗಿತ್ತು.  ಕಾರ್ಯದೊತ್ತಡದ ನಡುವೆ ತಮ್ಮ ಸ್ವಂತ ಕ್ಷೇತ್ರಗಳಿಗೆ ಹೋಗಿ ಮತದಾನ ಮಾಡಲು ಆಗುತ್ತಿಲ್ಲ. ಹೀಗಾಗಿ ಬಹುತೇಕ ಪತ್ರಕರ್ತರು ಮತದಾನದಿಂದ ದೂರವೇ ಉಳಿಯುತ್ತಿದ್ದಾರೆ. ಆದ್ದರಿಂದ ಅಗತ್ಯವಿರುವ ಪತ್ರಕರ್ತರಿಗೂ ಆನ್ ಲೈನ್ ಮೂಲಕ ಮತದಾನ ಮಾಡುವ ವ್ಯವಸ್ಥೆ ಮಾಡಿಕೊಡಬೇಕು ಎಂದು ಕೆಯುಡಬ್ಲ್ಯೂಜೆ ವಿನಂತಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *