“ಕಾಶ್ಮೀರದಲ್ಲಿ ಯಾವಾಗ ಕಪ್ಪು ಹಿಮ ಬೀಳುತ್ತದೋ ಆಗ ನಾನು ಬಿಜೆಪಿ ಸೇರುತ್ತೇನೆ” – ಗುಲಾಂ ನಬಿ

ನವದೆಹಲಿ, ಫೆಬ್ರುವರಿ 12: ರಾಜ್ಯಸಭೆಯಿಂದ ನಿವೃತ್ತಿಯಾಗುತ್ತಿರುವ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ಬಿಜೆಪಿ ಸೇರುವರೆಂಬ ವದಂತಿ ಹರಡಿದ್ದು,  ಅದನ್ನು ಗುಲಾಂ ನಬಿಯವರು ನಿರಾಕರಿಸಿದ್ದು, “ಕಾಶ್ಮೀರದಲ್ಲಿ ಯಾವಾಗ ಕಪ್ಪು ಹಿಮ ಬೀಳುತ್ತದೋ ಆಗ ನಾನು ಬಿಜೆಪಿ ಸೇರುತ್ತೇನೆ” ಎಂದು  ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಹಿಂದುಸ್ತಾನ ಟೈಮ್ಸ್ ವರದಿ ಮಾಡಿದೆ.

ರಾಜ್ಯಸಭೆಯಲ್ಲಿ ನಿವೃತ್ತರಾಗುತ್ತಿರುವ ಸದಸ್ಯರಿಗೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ವಿದಾಯ ಭಾಷಣ ಮಾಡಿದ್ದು, ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿದ್ದರು. “ಗುಲಾಂ ನಬಿ ನನ್ನ ನಿಜ ಸ್ನೇಹಿತ” ಎಂದು ಕಣ್ಣೀರು ಹಾಕಿದ್ದರು.  ಇದಕ್ಕೆ ಪ್ರತ್ಯುತ್ತರವಾಗಿ ಅಜಾದ್ ರವರು ಮೋದಿಯವರನ್ನು ಶ್ಲಾಗಿಸಿದ್ದರು ಅಷ್ಟೆ ಅಲ್ಲದೆ  ಮಾಜಿಪ್ರಧಾನಿ  ದಿ.ಅಟಲ್ ಬಿಹಾರಿ ವಾಜಪೇಯಿ ಅವರೊಂದಿಗಿನ ಒಡನಾಟದ ಕುರಿತು ರಾಜ್ಯ ಸಭೆಯಲ್ಲಿ ಮಾತನಾಡಿದ್ದರು. ಆನಂತರ ಗುಲಾಂ ನಬಿ ಆಜಾದ್ ಅವರು ಬಿಜೆಪಿ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಮೋದಿ ಅವರು ನನಗೆ 90ರ ದಶಕದಿಂದಲೂ ತಿಳಿದಿದ್ದಾರೆ. ಕೆಲವು ಟಿವಿ ಚರ್ಚೆಗಳಲ್ಲೂ ನಾವು ಭಾಗವಹಿಸಿದ್ದೆವು. ಜಗಳ ಆಡುತ್ತಿದ್ದೆವು, ಒಟ್ಟಿಗೆ ಟೀ ಕುಡಿಯುತ್ತಿದ್ದೆವು. ಹಾಗೆಂದು ನಾನು ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ಹೊಗಳಿದ ಮಾತ್ರಕ್ಕೆ ಈ ರೀತಿ ಕಲ್ಪನೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಆಜಾದ್ ಅವರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು  ಅಭಿನಂದನಾ ಪತ್ರ ಬರೆದಿದ್ದು, ಪಕ್ಷದ ಕಾರ್ಯದರ್ಶಿಯಾಗಿ ಆಜಾದ್ ಕಾರ್ಯವೈಖರಿಯನ್ನು ಶ್ಲಾಘಿಸಿದ್ದಾರೆ.

ಜನಶಕ್ತಿ ಮೀಡಿಯಾ ವಾಟ್ಸಪ್ ಸೇರಿಕೊಳ್ಳಲು ಲಿಂಕ್ ಕ್ಲಿಕ್ ಮಾಡಿ

Donate Janashakthi Media

Leave a Reply

Your email address will not be published. Required fields are marked *