ಕಾಟಾಚಾರ ಎಂಬಂತೆ ಕಾರ್ಯಕ್ರಮದ ಹಿಂದಿನ ದಿನ ರಾತ್ರಿ ಕರೆದರೆ ಸರಿಯೇ: ಜೆಡಿಎಸ್‌ ಪ್ರಶ್ನೆ

ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾಣ ನಿಲ್ದಾಣ ಕೆಂಪೇಗೌಡ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಆಹ್ವಾನಿಸಿಲ್ಲ ಎಂಬ ವಿಚಾರವೂ ಭಾರೀ ಚರ್ಚೆಗೆ ಗುರಿಯಾಗಿದ್ದು, ಜನತಾ ದಳ (ಜಾತ್ಯತೀತ) ಕಾರ್ಯಕ್ರಮಕ್ಕೆ ಆಹ್ವಾನವನ್ನೇ ನೀಡಲಿಲ್ಲ ಎಂದು ದಾಳಿ ನಡೆಸಿದಾಗ, ಬಿಜೆಪಿ ಆಹ್ವಾನ ಮಾಡಿರುವ ಬಗ್ಗೆ ಟ್ವೀಟ್‌ ಮಾಡಿದ್ದು, ಇದೀಗ ಬಿಜೆಪಿ ಪ್ರತ್ಯೂತ್ತರ ನೀಡಿರುವ ಜೆಡಿಎಸ್‌ ಪಕ್ಷವು ಸರಣಿ ಟ್ವೀಟ್‌ ಮಾಡಿ ಪ್ರಶ್ನಿಸಿದೆ.

ಈ ಮಧ್ಯೆ, ಆಡಳಿತಾರೂಢ ಬಿಜೆಪಿ ಮತ್ತು ಜೆಡಿ(ಎಸ್) ಪಕ್ಷಗಳ ನಡುವೆ ರಾಜಕೀಯ ವೈಷಮ್ಯ ಢಾಳಾಗಿ ಅನಾವರಣಗೊಂಡಿದೆ. ಬಿಜೆಪಿಯು ಆಮಂತ್ರಣ ಪತ್ರಿಕೆಯನ್ನೂ ತಲುಪಿಸಿದ್ದೇವೆ, ದೊಡ್ಡಗೌಡರಿಗೆ ಫೋನೂ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಹೇಳಿದರು. ಅದಕ್ಕೆ ಜೆಡಿಎಸ್, ಇಂದು ಬೆಳಗ್ಗೆ ಮತ್ತೆ ಟ್ವೀಟ್ ಮಾಡಿದೆ.

ಮಾಡಿದ ತಪ್ಪನ್ನೇ ಸಮರ್ಥಿಸಿಕೊಳ್ಳುವುದು ಬಿಜೆಪಿಗೆ ಸಿದ್ಧಿಸಿರುವ ಕಲೆ. ಪ್ರತಿಮೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಿ ಮುಖ್ಯಮಂತ್ರಿ ಪತ್ರ ಬರೆದಿದ್ದರು. ಹೆಚ್‌ ಡಿ ದೇವೇಗೌಡ ಅವರಿಗೆ ಕರೆ ಮಾಡಿ ಪತ್ರ ಬರೆದಿದ್ದಾರೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಚ್​.ಡಿ.ದೇವೇಗೌಡರ ಹೆಸರೇ ಇಲ್ಲ. ನವೆಂಬರ್ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಪತ್ರ ಬರೆದಿದ್ದು ಯಾವಾಗ? ಆ ಪತ್ರ ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಮುಖ್ಯಮಮತ್ರಿ ಪತ್ರವನ್ನು ‘ಸಂಘ ಸಂಸ್ಕಾರ’ದ ಬಿಜೆಪಿಗರು ಗಮನಿಸಬೇಕು ಎಂದು ಟ್ವೀಟ್‌ ಮಾಡಿದೆ.

ಜನರಿಗೆ ಸತ್ಯ ಯಾವುದು? ಸುಳ್ಳು ಯಾವುದು? ಎಂಬುದು ತಿಳಿಯಲಿ

ಮಾಡಿದ ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲ ಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ! ಆದರೆ; ಮುಖ್ಯಮಂತ್ರಿಗಳೇ ಪತ್ರ ಬರೆದು ಶ್ರೀ ಹೆಚ್‌ ಡಿ ದೇವೇಗೌಡ ಅವರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ ಎಂದು ಜೆಡಿಎಸ್‌ ಪ್ರತಿಕ್ರಿಯಿಸಿದೆ.

ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳಿಗೆ ಕರೆ ಮಾಡಿ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿ ಪತ್ರ ಬರೆದಿದ್ದಾರೆ ಎಂದು ಬಿಜೆಪಿ ಟ್ವೀಟಿಸಿದೆ.

ಸರಿ; ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಘನವೇತ್ತ ಮಾನ್ಯ ಮುಖ್ಯಮಂತ್ರಿಗಳು ಬರೆದ ʼಘನವೇತ್ತʼ ಪತ್ರವನ್ನೊಮ್ಮೆ ʼಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ಮಾಜಿ ಪ್ರಧಾನಿಗಳ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ? ಎಂದು ಪ್ರಶ್ನಿಸಲಾಗಿದೆ.

ಮರುದಿನ(ನವೆಂಬರ್‌ 11) 12.50ರ ಸಮಾರಂಭಕ್ಕೆ ಹಿಂದಿನ ದಿನದ ರಾತ್ರಿ 9 ಗಂಟೆಗೆ ಮಾಜಿ ಪ್ರಧಾನಿಗಳಿಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ!! ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಜಬಾಬ್ದಾರಿ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?

ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಖತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ ಎಂದು ಜೆಡಿಎಸ್‌ ಟ್ವೀಟ್‌ ಮಾಡಿದೆ.

ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ, ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು? ‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ.

ಕುಟುಂಬ ರಾಜಕಾರಣ ಅಂತೀರಾ? ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ? ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ? ಎಂದು ಜೆಡಿಎಸ್‌ ಪಕ್ಷವು ಸರಣಿ ಟ್ವೀಟ್‌ ಮಾಡಿ ಬಿಜೆಪಿಗೆ ಸವಾಲು ಹಾಕಿದೆ.

ಹೆಚ್‌ ಡಿ ಕುಮಾರಸ್ವಾಮಿ ಪ್ರತಿಕ್ರಿಯೆ

ರಾಮನಗರದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ,  ಕಾರ್ಯಕ್ರಮದ ಹಿಂದಿನ ದಿನ 9:30ಕ್ಕೆ ಸಿಎಂ ದೂರವಾಣಿ ಕರೆ ಮಾಡಿದ್ದಾರೆ. ರಾತ್ರಿ 12:45ರಲ್ಲಿ ಯಾರದ್ದೋ ಕೈಯಲ್ಲಿ ಲೆಟರ್ ಕೊಟ್ಟಿದ್ದಾರೆ. ಆ ಲೆಟೆರ್ ನಲ್ಲಿ ಮಾನ್ಯರೇ ಅಂತ ಇದೆ, ಕೆಳಗಡೆ ಮಾತ್ರ ದೇವೇಗೌಡರ ಹೆಸರು ಹಾಕಿದ್ದಾರೆ. ಕರ್ನಾಟಕದ ಅಸ್ಮಿತೆ ಅಂತ ಕನ್ನಡಿಗರನ್ನ ಗುಲಾಮರನ್ನಾಗಿ ಮಾಡಲು ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಎಲ್ಲವನ್ನೂ ಸರ್ವಮಾಶ ಮಾಡ್ತಿದ್ದಾರೆ. ನಮ್ಮ ಕುಟುಂಬ ಅಂದ್ರೆ ದೇವೇಗೌಡ್ರು ಜನ್ಮ ನೀಡಿರೋ ಆರು ಜನ ಮಾತ್ರ ಅಲ್ಲ. ರಾಜ್ಯದ ಪ್ರತಿ ಕುಟುಂಬವೂ ನಮ್ಮ ಕುಟುಂಬವೇ. ನನ್ನ ಬಳಿ ಸಂಕಷ್ಟ ಹೇಳಿಕೊಂಡು ಬರುವ ಜನರ ಸಮಸ್ಯೆ ಬಗೆಹರಿಸುತ್ತಿದ್ದೇವೆ. ಆದರೆ ನಿಮ್ಮ ನಡವಳಿಕೆ ಏನು.? ಅಭಿವೃದ್ಧಿ ಹೆಸರಲ್ಲಿ ರಾಜ್ಯದಲ್ಲಿ ಲೂಟಿ ಮಾಡ್ಕೊಂಡು ಕೂತಿದ್ದೀರಿ. ನಿನ್ನೆ ದಿನ ರಾಜಕಾರಣಕ್ಕೋಸ್ಕರ ಕಾರ್ಯಕ್ರಮ ಮಾಡಿದ್ದೀರಿ. ಇದರಿಂದ ನನಗೇನು ಆತಂಕ ಇಲ್ಲ ಎಂದರು.

Donate Janashakthi Media

Leave a Reply

Your email address will not be published. Required fields are marked *