ಕಠಿಣ ಕ್ರಮ ಅನುಸರಿಸದೆ ಇದ್ದರೆ ಲಾಕ್ಡೌನ್ ಅನಿವಾರ್ಯ – ಸಿಎಂ ಯಡಿಯೂರಪ್ಪ

ಬೆಂಗಳೂರು: ಮತ್ತೆ ಲಾಕ್‌ಡೌನ್ ಆಗಬಾರದು ಎಂದರೆ ಜನತೆ ಕಟ್ಟುನಿಟ್ಟಾಗಿ ಕೊರೋನಾ ನಿಯಮ ಪಾಲನೆ ಮಾಡಬೇಕು, ಇಲ್ಲದಿದ್ದಲ್ಲಿ ಕಠಿಣ ಕ್ರಮ ಅನಿವಾರ್ಯವೆಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಕೋವಿಡ್ ತಾಂತ್ರಿಕ ಸಲಹಾ, ತಜ್ಞರ ಸಮಿತಿ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಪರಿಸ್ಥಿತಿ ಅವಲೋಕನ ಕುರಿತು ತಜ್ಞರ ಜೊತೆ ಸಮಾಲೋಚನೆ ಮಾಡಲಾಯಿತು. ಎಲ್ಲರ ಅಭಿಪ್ರಾಯದಂತೆ ಕಳೆದ 14 ದಿನಗಳಲ್ಲಿ ಪಾಸಿಟಿವ್ ದರ ಹೆಚ್ಚಾಗಿದೆ, ಮರಣ ದರ ಕಡಿಮೆ ಇದೆ. ಬೀದರ್, ಕಲಬುರಗಿ ಬೆಂಗಳೂರು ಗ್ರಾಮಾಂತರ, ತುಮಕೂರು ಉಡುಪಿ‌, ಬೆಂಗಳೂರು ನಗರ ಜಿಲ್ಲೆಯಲ್ಲಿ ಪಾಸಿಟಿವ್ ದರ ಹೆಚ್ಚಾಗಿದೆ. ಇದು ಕೊರೋನಾ ಎರಡನೇ ಅಲೆಯ ಮುನ್ಸೂಚನೆ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೆಚ್ಚು ಪಾಸಿಟಿವ್ ಇರುವ ಜಿಲ್ಲೆಯಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸಲು ಅಧಿಕಾರಿಗಳು ಸಲಹೆ ನೀಡಿದ್ದಾರೆ ಎಂದರು.

ಇವತ್ತಿನಿಂದ ಬಿಗಿ ಕ್ರಮ ಕೈಗೊಳ್ಳಲಾಗುವುದು. ಲಸಿಕೆ ಅಭಿಯಾನ ಯಶಸ್ವಿಗೊಳಿಸಲು ಎಲ್ಲರ ಸಹಕಾರ ಅಗತ್ಯ. ಲಸಿಕೆ ಪ್ರಮಾಣವನ್ನು ದ್ವಿಗುಣಗೊಳಿಸಲು ನಿರ್ಧರಿಸಿದ್ದೇವೆ. 3500 ವ್ಯಾಕ್ಸಿನೇಷನ್ ಸೆಂಟರ್ ಇದೆ. ಪ್ರತಿ ದಿನ 3500 ಮಂದಿ ಲಸಿಕೆ ತೆಗದುಕೊಂಡರೆ 3.50 ಲಕ್ಷ ಜನರು ಲಸಿಕೆ ಪಡೆಯಬಹುದು. ಈ ನಿಟ್ಟಿನಲ್ಲಿ ಲಸಿಕೆ ಹಾಕುವ ಪ್ರಕ್ರಿಯೆ ಹೆಚ್ಚಳ ‌ಮಾಡಲಾಗುವುದು ಎಂದು ಬಿಎಸ್‌ವೈ ತಿಳಿಸಿದರು.

ನಿನ್ನೆ ಸಂಜೆ ತಜ್ಞರ ಜೊತೆ ಸಭೆ ನಡೆಸಿದ ಸಿಎಂ ಯಡಿಯೂರಪ್ಪ

ಸಂಪರ್ಕಿತರ ಪತ್ತೆ ಚುರುಕುಗೊಳಿಸಬೇಕು, ಕೋವಿಡ್ ಆಸ್ಪತ್ರೆಗಳಲ್ಲಿ, ಆಕ್ಸಿಜನ್, ಐಸಿಯು ಕೋವಿಡ್ ಕೇರ್ ಗೆ ಸಿದ್ದತೆ ಮಾಡಿಕೊಳ್ಳಬೇಕು, ಖಾಸಗಿ ಆಸ್ಪತ್ರೆಯಲ್ಲಿ ಹಿಂದಿನಂತೆ ಚಿಕಿತ್ಸೆ ವ್ಯವಸ್ಥೆ ಮಾಡಬೇಕು, ಹಿರಿಯ ನಾಗರಿಕರಿಗೆ ಲಸಿಕೆ‌ ಚುರುಕುಗೊಳಿಸಬೇಕು, ಗ್ರಾಮೀಣ ಪ್ರದೇಶ, ಕೊಳಗೇರಿಯಲ್ಲಿ ಲಸಿಕೆ‌ ಹೆಚ್ಚಿಸಬೇಕು ಎಂದು ಸೂಚಿಸಲಾಗಿದೆ.

ರೋಟರಿ ಕ್ಲಬ್, ಲಯನ್ಸ್ ಕ್ಲಬ್ ಜೊತೆ ನೆರವು ಪಡೆದು ಲಸಿಕೆ ವಾಹನಗಳಲ್ಲಿ ನಿಗದಿ ಮೀರಿ ಪ್ರಯಾಣಿಕರ‌ ಕರೆದೊಯ್ಯುವುದಕ್ಕೆ‌ ಕಡಿವಾಣ ಮಾಡಬೇಕು, ಹೆಚ್ಚಿನ ಅರಿವು ಮೂಡಿಸಲು ತೀರ್ಮಾನಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಮಹಾರಾಷ್ಟ್ರ, ಕೇರಳದಿಂದ ಬರುವವರ ಮೇಲೆ ನಿಗಾ ಇಡಲು ಸಲಹೆ ಬಂದಿದೆ. ಪ್ರಧಾನಿ ಮೋದಿ ಮಾರ್ಚ್ 17 ರಂದು ಎಲ್ಲ ಮುಖ್ಯಮಂತ್ರಿಗಳ ಜೊತೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಅವರ ಸಲಹೆ ಪಡೆದು ನಂತರ ಅನಿವಾರ್ಯವಾದಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುತ್ತದೆ, ಮತ್ತೊಮ್ಮೆ ಲಾಕ್ ಡೌನ್ ಆಗಬಾರದು ಎನ್ನುವ ಅಪೇಕ್ಷೆ ಇದ್ದರೆ ಕಟ್ಟುನಿಟ್ಟಿನ ಕ್ರಮ ನೀವೇ ಕೈಗೊಳ್ಳಬೇಕು. ಈಗ ಕೊರೋನಾ ಜಾಗೃತಿ ಹೋಗಿದೆ, ಜಾತ್ರೆ ಸಂತೆಯಲ್ಲಿ‌ ಶೇ.80 ರಷ್ಟು ಜನ ಮಾಸ್ಕ್ ಧರಿಸುತ್ತಿಲ್ಲ, ಜನ ಸಹಕಾರ ಕೊಡಬೇಕು, ಜನರ ಸಹಕಾರ ಇಲ್ಲದೆ ಯಶಸ್ವಿ ಆಗಲ್ಲ ಎಂದು ಯಡಿಯೂರಪ್ಪ ಹೇಳಿದರು.

ನಿಯಮ ಪಾಲನೆ ಕಡ್ಡಾಯ : ಮಾಸ್ಕ್ ಕಡ್ಡಾಯ, ದೈಹಿಕ ಅಂತರ ಕಡ್ಡಾಯ, ಉಲ್ಲಂಘಿಸಿದಲ್ಲಿ ದಂಡ ಅನಿವಾರ್ಯ. ಮದುವೆ, ಸಮಾಜಿಕ ಧಾರ್ಮಿಕ ಕಾರ್ಯಕ್ರಮದಲ್ಲಿ 500 ಮೀರಬಾರದು, ಕೊರೊನಾ ಪರೀಕ್ಷೆ ಹೆಚ್ಚಿಸಬೇಕು, ರೋಗಲಕ್ಷಣ ಇರುವವರಿಗೆ ಪರೀಕ್ಷೆ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿ ಸಲಹೆ ನೀಡಿದ್ದಾರೆ.

ಮತ್ತೆ ಲಾಕ್‌ಡೌನ್‌, ಸೀಲ್‌ ಡೌನ್‌ ಅಥವಾ ರಾತ್ರಿ ಕರ್ಫ್ಯೂ ಬೇಡ ಎಂದರೆ ಜನರೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಮನವಿ ಮಾಡಿದರು.

Donate Janashakthi Media

Leave a Reply

Your email address will not be published. Required fields are marked *