ಬೆಂಗಳೂರು: ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಬೆಂಗಳೂರು ನಗರದ ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕವಿಲ್ಲದಿರುವುದರಿಂದ ರೋಗಿಗಳು ಪದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.
ಶಿವಾಜಿನಗರದ ಲೇಡಿ ಕರ್ಜನ್ ರಸ್ತೆಯ ಬೌರಿಂಗ್ ಆಸ್ಪತ್ರೆ ಕಗ್ಗತ್ತಲಲ್ಲಿ ಮುಳುಗಿದೆ. ಆಸ್ಪತ್ರೆಯಲ್ಲಿ ಕಳೆದ 2 ದಿನಗಳಿಂದ ವಿದ್ಯುತ್ ಸಂಪರ್ಕವಿಲ್ಲ. ರೋಗಿಗಳು ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿಗಳಿಗೆ ಸಮಸ್ಯೆಗಳು ಎದುರಾಗಿದೆ. ಸರ್ಕಾರ, ಆರೋಗ್ಯ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಈ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನು ಓದಿ: ಬಾಣಂತಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಹಣದ ಬೇಡಿಕೆ ಇಟ್ಟ ಸರ್ಕಾರಿ ಆಸ್ಪತ್ರೆ ವೈದ್ಯರು
ವಿದ್ಯುತ್ ಸಂಪರ್ಕ ಕಡಿತದಿಂದ ಬಾಣಂತಿ ತಾಯಿ ಮತ್ತು ಮಗುವನ್ನು ವಾಣಿವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದ್ದು, ಈ ಬಗ್ಗೆ ಆಸ್ಪತ್ರೆ ಸಿಬ್ಬಂದಿಯೊಬ್ಬರು ಮಾತನಾಡಿದ್ದು, ಆಸ್ಪತ್ರೆ ಮುಂಭಾಗ ವಿದ್ಯುತ್ ತಂತಿ ಕಡಿತಗೊಂಡಿದ್ದರಿಂದ ಈ ಸಮಸ್ಯೆ ಎದುರಾಗಿದೆ ಎಂಬ ಮಾಹಿತಿಯಿದೆ.
ಆದರೂ, ಕಳೆದ ಎರಡು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿಗೊಂಡಿದ್ದರೂ ಸರ್ಕಾರ ಇತ್ತ ಗಮನಹರಿಸದಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ.
ಇದನ್ನು ಓದಿ: ಸರ್ಕಾರಿ ಆಸ್ಪತ್ರೆಗಳಿಗೆ ದಾಖಲೆಗಳಷ್ಟೇ ಮುಖ್ಯ-ಮನುಷ್ಯ ಜೀವಕ್ಕೆ ಇಲ್ಲಿ ಬೆಲೆ ಇಲ್ಲ
ಲಕ್ಷ ಲಕ್ಷ ವಿದ್ಯುತ್ ಬಿಲ್ ಬಾಕಿ
ಮಲ್ಲೇಶ್ವರಂನಲ್ಲಿರುವ ಕೆ ಸಿ ಜನರಲ್ ಸರ್ಕಾರಿ ಆಸ್ಪತ್ರೆ ಬರೋಬ್ಬರಿ 48 ಲಕ್ಷ ರೂಪಾಯಿ ಮೊತ್ತದ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆ ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ(ಬೆಸ್ಕಾಂ) ಬಾಕಿ ಉಳಿಸಿಕೊಂಡ ಮೊತ್ತವನ್ನು ಪಾವತಿಸುವಂತೆ ನೋಟಿಸು ಜಾರಿ ಮಾಡಿದೆ. ಅಲ್ಲದೇ ಕಾಲಮಿತಿಯಲ್ಲಿ ವಿದ್ಯುತ್ ಬಾಕಿ ಮೊತ್ತ ಪಾವತಿ ಮಾಡದೆ ಇದ್ದರೆ, ವಿದ್ಯುತ್ ಕಡಿತ ಮಾಡುವುದಾಗಿಯೂ ಎಚ್ಚರಿಕೆ ನೀಡಿದೆ.
ಮತ್ತೊಂದೆಡೆ ಜಯನಗರದ ಆಸ್ಪತ್ರೆಯೂ 24,49,453 ರೂ. ಬಾಕಿ ಉಳಿಸಿಕೊಂಡಿದ್ದು ವಿದ್ಯುತ್ ಬಾಕಿ ಮೊತ್ತ ಪಾವತಿಸದಿದ್ದರೆ ಸ್ಥಗಿತಗೊಳಿಸುಂತೆ ಬೆಸ್ಕಾಂ ಎಚ್ಚರಿಕೆ ನೀಡಿದೆ.
ಪ್ರತಿನಿತ್ಯ ಸಾವಿರಾರು ಮಂದಿ ಆರೋಗ್ಯ ತಪಾಸಣೆಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಲಿದ್ದಾರೆ. ವಿದ್ಯುತ್ ಸಂಪರ್ಕವಿಲ್ಲದಿದ್ದರೆ ದೊಡ್ಡ ಪ್ರಮಾಣದಲ್ಲಿಯೇ ತೊಂದರೆಗಳು ಎದುರಾಗಲಿವೆ. ಇದರಿಂದ ರೋಗಿಗಳು ಪರದಾಡು ಸ್ಥಿತಿ ನಿರ್ಮಾಣವಾಗುತ್ತದೆ, ಆಸ್ಪತ್ರೆಯ ಸಿಬ್ಬಂದಿಗಳಿಗೂ ತೊಂದರೆ. ಸಾರ್ವಜನಿಕ ಆಸ್ಪತ್ರೆಗಳ ನಿರ್ವಹಣೆಯಲ್ಲಿ ಸರ್ಕಾರದ ನಿರ್ಲಕ್ಷ್ಯತನವು ಜನರು ಸಮಸ್ಯೆಗಳು ಎದುರಿಸುವಂತಗೆ ತಂದೊಡ್ಡಿದೆ.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ