ಕಾವೂರು ಜಾತ್ರೆಯಲ್ಲಿ ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶವಿಲ್ಲ ಸಂಘಪರಿವಾರ

ಮಂಗಳೂರು: ಕಾವೂರು ಮಹಾಲಿಂಗೇಶ್ವರ ಜಾತ್ರೆಯಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶವಿದ್ದು, ಹಿಂದೂಯೇತರ ವ್ಯಾಪಾರಿಗಳು ʻಹರಾಮ್‌ʼ ಎಂಬುವವರಿಗೆ ಅವಕಾಶವಿಲ್ಲವೆಂದು ಸಂಘಪರಿವಾರ ಬ್ಯಾನರ್ ಹಾಕಿದೆ.

ಕಾವೂರು ಜಾತ್ರೆ ಆರಂಭಗೊಂಡಿದ್ದು, ‘ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ. ವಿಗ್ರಹಾರಾಧನೆಯನ್ನು ‘ಹರಾಮ್‌’ ಎಂದು ನಂಬಿರುವ ಯಾರಿಗೂ ಅವಕಾಶವಿಲ್ಲ’ ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳ ಕಾವೂರು ಪ್ರಖಂಡ ಹೆಸರಿನಲ್ಲಿ ಅಳವಡಿಸಲಾಗದೆ.

ಇದನ್ನು ಓದಿ: ವಿವಿ ಪುರಂ ಸುಬ್ರಮಣ್ಯಸ್ವಾಮಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಜರಂಗದಳ ನಿರಾಕರಣೆ: ಸಿಪಿಐ(ಎಂ) ಖಂಡನೆ

ಬ್ಯಾನರ್ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಇದನ್ನು ತೆರವುಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಅಲ್ಲದೆ, ಇದರ ಬಗ್ಗೆ ಪೊಲೀಸರು ನಿರ್ಲಕ್ಷ್ಯ ವಹಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೊಲೀಸ್‌ ಆಯುಕ್ತರಿಗೆ ಸಿಪಿಐ(ಎಂ) ದೂರು

ಇದನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಹಾಗೂ ಈ ವಿಚಾರವಾಗಿ ಬೇಜವಾಬ್ದಾರಿಯುತವಾಗಿ ವರ್ತಿಸಿದ ಪೊಲೀಸ್ ಸಿಬ್ಬಂದಿಯ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ), ಮಂಗಳೂರು ಉತ್ತರ ಸಮಿತಿಯು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

ಇದನ್ನು ಓದಿ: ಭಾವೈಕ್ಯತೆ ಸಾರುವ ಜಾತ್ರೆ : ಮುಸ್ಲಿಮರ ದರ್ಗಾವನ್ನು ಪೂಜಿಸುವ ಹಿಂದೂಗಳು

ಜಾತ್ರೆಯಲ್ಲಿ ವಿವಿಧ ಮತ ಧಾರ್ಮಿಕ ನಂಬಿಕೆಯುಳ್ಳ ವ್ಯಕ್ತಿಗಳು ಭಾಗವಹಿಸುವುದು, ಸಂತೆ ವ್ಯಾಪಾರ ಮಾಡುತ್ತಿರುವುದು ಹಿಂದಿನಿಂದಲೂ ನಡೆದುಬಂದಿದೆ. ಆದರೆ ಜನವರಿ 10ರಂದು ‘ಮುಸ್ಲಿಂ ಧರ್ಮದವರು ಸಂತೆ ವ್ಯಾಪಾರ ಮಾಡುವುದಕ್ಕೆ ಬಹಿಷ್ಕಾರ ಹಾಕಲಾಗಿದೆ’ ಎಂಬ ಜನಾಂಗೀಯ ನಿಂದನೆಯ ಬ್ಯಾನರ್ ಅಳವಡಿಸಲಾಗಿತ್ತು. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ, ಎಸಿಪಿಯವರ ಗಮನಕ್ಕೆ ತಂದು ತೆರವುಗೊಳಿಸಲಾಗಿತ್ತು.

ಆದರೆ ಮತ್ತೀಗ ದ್ವೇಷಕಾರುವ ಹಿಂದುತ್ವವಾದಿ ಸಂಘಟನೆಯವರು ಮತ್ತೊಂದು ರೀತಿಯಲ್ಲಿ ಬ್ಯಾನರ್‌ ಅಳವಡಿಸಿರುವುದನ್ನು ಕೂಡಲೇ ತೆರವುಗೊಳಿಸಬೇಕು ಮತ್ತು ಬ್ಯಾನರ್‌ ಅಳವಡಿಸಿರುವವರ ಮೇಲೆ ಕ್ರಮ ಕೈಗೊಳ್ಳಬೇಕೆಂದು ಸಿಪಿಐ(ಎಂ) ಪಕ್ಷ ಆಗ್ರಹಿಸಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *