ಬೆಂಗಳೂರು: ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ-2021 ಪರೀಕ್ಷೆ ಬರೆಯಲು ಆನ್‌ಲೈನ್ ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 16ರವರೆಗೆ ವಿಸ್ತರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅರ್ಜಿ ಸಲ್ಲಿಕೆಯ ಜತೆಗೆ ಶುಲ್ಕ ಪಾವತಿಯನ್ನು ಜುಲೈ 19ರವರೆಗೂ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.
ಇದನ್ನು ಓದಿ: ದೈಹಿಕ ತರಗತಿ ಆರಂಭದ ಸಿದ್ಧತೆಗಳಿಗೆ ಉಪನ್ಯಾಸಕರು ಕೆಲಸಕ್ಕೆ ಮರಳುವಂತೆ ಸೂಚನೆ
ಪೋಷಕರು ಮತ್ತು ವಿದ್ಯಾರ್ಥಿಗಳು ಮನವಿ ಮಾಡಿದ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ವಿಶೇಷ ವರ್ಗದ ಪ್ರಮಾಣ ಪತ್ರಗಳನ್ನು ಸಲ್ಲಿಸಲು ಜುಲೈ 14ರಿಂದ 20ರವರೆಗೆ ಅವಕಾಶ ನೀಡಲಾಗಿದೆ. ಎನ್‌ಸಿಸಿ, ಕ್ರೀಡೆ, ರಕ್ಷಣೆ, ರಕ್ಷಣೆ (ನಿವೃತ್ತ), ಸ್ಕೌಟ್ಸ್ ಅಂಡ್ ಗೈಡ್ಸ್ ವರ್ಗಗಳನ್ನು ಕ್ಲೇಮ್ ಮಾಡುವ ಅಭ್ಯರ್ಥಿಗಳು ನಿಗದಿಪಡಿಸಿರುವ ತಮಗೆ ಹತ್ತಿರವಾದ ಯಾವುದಾದರೂ ಕೇಂದ್ರಕ್ಕೆ ತೆರಳಿ ಪ್ರಮಾಣ ಪತ್ರಗಳನ್ನು ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ವಿವರಗಳಿಗೆ http://kea.kar.nic.in ವೆಬ್‌ತಾಣಕ್ಕೆ ಭೇಟಿ ವಿವರ ಪಡೆಯಬಹುದು ಎಂದು ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.