ಮಾಸ್ಕ್ ಹಾಕಿಕೊಳ್ಳಿ, ಬೂಸ್ಟರ್ ಡೋಸ್ ತೆಗೆದುಕೊಳ್ಳಿ; ನೀತಿ ಆಯೋಗ ಸದಸ್ಯ ಡಾ.ವಿ.ಕೆ.ಪೌಲ್‌ ಸಲಹೆ

ನವದೆಹಲಿ: ಜಾಗತಿಕ ಮಟ್ಟದಲ್ಲಿ ಕೋವಿಡ್‌-19 ಸಾಂಕ್ರಾಮಿಕ ಪ್ರಕರಣಗಳು ಏರುಗತಿಯಲ್ಲಿ ದಾಖಲಾಗುತ್ತಿದ್ದು, ಭಾರತದಲ್ಲಿಯೂ ಆತಂಕ ಮೂಡಿಸಿದೆ. ಮುನ್ನಚ್ಚರಿಕಾ ಕ್ರಮವಾಗಿ ಮಾಸ್ಕ್‌ ಧರಿಸಬೇಕು ಮತ್ತು ಕೋವಿಡ್‌ ಬೂಸ್ಟರ್‌ ಡೋಸ್‌ ಲಸಿಕೆಯನ್ನು ತೆಗೆದುಕೊಳ್ಳಬೇಕೆಂದು ನೀತಿ ಆಯೋಗ(ಆರೋಗ್ಯ)ದ ಸದಸ್ಯ ಡಾ.ವಿ.ಕೆ.ಪೌಲ್‌ ಸಲಹೆ ನೀಡಿದ್ದಾರೆ.

ಚೀನಾದಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಪರಿಶೀಲನಾ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಡಾ.ವಿ.ಕೆ.ಪೌಲ್‌ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಚ್ಚು ಜನಸಂದಣಿ ಪ್ರದೇಶಗಳಲ್ಲಿ ಜನರು ಮಾಸ್ಕ್‌ ಧರಿಸಿಕೊಳ್ಳಲು ಹಾಗೂ ಕೋವಿಡ್‌ ಬೂಸ್ಟರ್‌ ಡೋಸ್‌ ತೆಗೆದುಕೊಳ್ಳಬೇಕು. ಭಾರತದ ಒಟ್ಟು ಜನಸಂಖ್ಯೆಯಲ್ಲಿ ಕೇವಲ ಶೇ 27-28 ರಷ್ಟು ಜನರು ಮಾತ್ರ ಬೂಸ್ಟರ್‌ ಡೋಸ್‌ ತೆಗೆದುಕೊಂಡಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿ: ಕಡ್ಡಾಯ ಮಾಸ್ಕ್‌ ಧರಿಸಿ-3ನೇ ಲಸಿಕೆ ಪಡೆದುಕೊಳ್ಳಿ; ಆರೋಗ್ಯ ಸಚಿವ ಸುಧಾಕರ್

ಸದ್ಯಕ್ಕೆ ಅಂತರರಾಷ್ಟ್ರೀಯ ವಿಮಾನ ಪ್ರಯಾಣದ ಮಾರ್ಗಸೂಚಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿರುವ ಅವರು, ಮಾಸ್ಕ್‌ ಧರಿಸುವ ವಿಚಾರದಲ್ಲಿ ಕೊಮೊರ್ಬಿಡಿಟಿ ಹೊಂದಿರುವವರು ಅಥವಾ ವಯಸ್ಸಾದವರು ವಿಶೇಷವಾಗಿ ಇದನ್ನು ಅನುಸರಿಸಬೇಕು’ ಎಂದು ಡಾ.ವಿ.ಕೆ.ಪೌಲ್‌ ಹೇಳಿದ್ದಾರೆ.

ಚೀನಾ ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿವೆ ಎಂದು ವರದಿಯಾಗಿದೆ. ಈ ಚಳಿಗಾಲದಲ್ಲಿ ಚೀನಾ ದೇಶದಲ್ಲಿ ಮೂರು ಕೋವಿಡ್‌ ಅಲೆಗಳು ಸಕ್ರಿಯವಾಗಲಿವೆ ಎಂಬುದು ತಜ್ಞರ ಅಭಿಪ್ರಾಯವಾಗಿದೆ. ಕೋವಿಡ್‌ ಸಾಂಕ್ರಾಮಿಕವು ಮೊದಲು ಕಾಣಿಸಿಕೊಂಡಿದ್ದು ಚೀನಾದಲ್ಲಿ. ಆ ನಂತರ, ಜಗತ್ತಿನಾದ್ಯಂತ ಹರಡಿ ದೊಡ್ಡ ದುರಂತವನ್ನೇ ಸೃಷ್ಟಿ ಮಾಡಿತ್ತು. ಭಾರತದಲ್ಲಿಯೂ ಲಕ್ಷಾಂತರ ಜನರು ಕೋವಿಡ್‌ನಿಂದ ಪ್ರಾಣ ಕಳೆದುಕೊಂಡಿದ್ದರು.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

ಜಪಾನ್, ಅಮೇರಿಕಾ, ರಿಪಬ್ಲಿಕ್ ಆಫ್ ಕೊರಿಯಾ, ಬ್ರೆಜಿಲ್ ಮತ್ತು ಚೀನಾದಲ್ಲಿ ಪ್ರಕರಣಗಳ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕ್ರಮ ಅನುಸರಿಸುವಂತೆ ತಿಳಿಸಿದೆ.

Donate Janashakthi Media

Leave a Reply

Your email address will not be published. Required fields are marked *