ಬೆಂಗಳೂರು: ಕೋವಿಡ್ ರೋಗಿಗಳಿಗೆ ಹಾಸಿಗೆ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮತ್ತು ರಾಜಕಾರಣಿಗಳ ನಡುವಿನ ತಿಕ್ಕಾಟದಿಂದಾಗಿ ಈಗ ಕೋವಿಡ್ ರೋಗಿಗಳು ಪರದಾಡುವ ಪರಿಸ್ಥಿತಿ ಎದುರಾಗಿದೆ.
ಇದನ್ನು ಓದಿ: ಮೇ 10 ರಿಂದ 24ರ ವರೆಗೆ ರಾಜ್ಯದ್ಯಂತ ಲಾಕ್‌ಡೌನ್: ಸಿಎಂ ಯಡಿಯೂರಪ್ಪ ಘೋಷಣೆ
ಸಂಸದ ತೇಜಸ್ವಿ ಸೂರ್ಯ ಹಾಗೂ ಕೆಲವು ಬಿಜೆಪಿ ಶಾಸಕರು ದಿಢೀರ್ ಎಂದು ಬೆಂಗಳೂರು ದಕ್ಷಿಣ ವಲಯದ ಕೋವಿಡ್ ವಾರ್‌ಗೆ ಧಾಳಿ ನಡೆಸಿದರು. ಈ ಪ್ರಕರಣ ಈಗ ಮತ್ತೊಂದು ಸಮಸ್ಯೆಗೆ ಕಾರಣವಾಗಿದ್ದು ವಾರ್ ರೂಂನಲ್ಲಿ ಕಾರ್ಯನಿರ್ವಹಿಸುತ್ತಿರುವ ಶೇ. 55ರಷ್ಟು ಸಿಬ್ಬಂದಿಗಳು ಹಾಜರಾಗುತ್ತಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಸಿಬ್ಬಂದಿಗಳು ಮತ್ತು ವೈದ್ಯರು ಪೊಲೀಸ್ ವಿಚಾರಣೆಗೆ ಹಾಜರಾಗುತ್ತಿರುವುದು ಕೂಡ ಸಿಬ್ಬಂದಿ ಕೊರತೆಗೆ ಕಾರಣವಾಗಿದೆ. ಈ ಮೊದಲು ಕಛೇರಿಯಲ್ಲಿ ಸಿಬ್ಬಂದಿಗಳ ಕೊರತೆ ಇತ್ತು. ಕೋವಿಡ್ ನಿರ್ವಹಣೆಯ ಹಿನ್ನೆಲೆಯಲ್ಲಿ ವಾರ್‌ರೂಂಗೆ ಕರೆಗಳು ಹೆಚ್ಚಾಗಿ ಬರುತ್ತಿವೆ. ತನಿಖೆಗಾಗಿ ಕೆಲವು ಕಂಪ್ಯೂಟರ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನು ಓದಿ: ವಾರ್ ರೂಂ ಸಿಬ್ಬಂದಿ ಮುಂದೆ ಮಂಡಿಯೂರಿದ ಸಂಸದ ತೇಜಸ್ವಿಸೂರ್ಯ
ಕೋವಿಡ್ ಪಾಸಿಟಿವ್ ಆದ ಮಂದಿಗೆ ಆಸ್ಪತ್ರೆಗಳಲ್ಲಿ ಹಾಸಿಗೆ ಸಿಗದಿದ್ದರೆ ಸರ್ಕಾರ, ರಾಜಕಾರಣಿಗಳು ಮತ್ತು ಅಧಿಕಾರಿಗಳನ್ನು ನಿಂದಿಸುತ್ತಾರೆ ಎಂದು ವಾರ್ ರೂಂನ ಅಧಿಕಾರಿ ತಿಳಿಸಿದ್ದಾರೆ. ಅಲ್ಲದೆ, ತಮಗೂ ತೊಂದರೆ ಎದುರಾಗಬಹುದೆಂದು ಹಲವು ಸಿಬ್ಬಂದಿಗಳು ಸಮಪರ್ಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಹೇಳಿದ್ದಾರೆ.
ಹೀಗಾಗಿ ಕೋವಿಡ್ ತುರ್ತು ಸಂದರ್ಭದಲ್ಲಿ ರೋಗಿಗಳಿಗೆ ಆಸ್ಪತ್ರೆ ಹೆಚ್ಚಿನ ಮುಂಜಾಗ್ರತೆಯ ದೃಷ್ಠಿಯಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕಾದ ಕೋವಿಡ್ ವಾರ್‌ರೂಂನಲ್ಲಿ ಸಿಬ್ಬಂದಿಗಳ ಕೊರತೆ ಎದುರಾಗಿದೆ.