ಬೆಂಗಳೂರು: ಕನ್ನಡದ ಪ್ರಮುಖ ಲೇಖಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಹಾಗೂ ಪದ್ಮರಾಜ ದಂಡಾವತಿ ಅವರಿಗೆ ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.
ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿ ಹಾಗೂ ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ ಅವರು ಅನುವಾದಿತ ಕೃತಿ ‘ಸೀತಾ: ರಾಮಾಯಣದ ಸಚಿತ್ರ ಮರುಕಥನ’ ಕೃತಿ ಆಯ್ಕೆಯಾಗಿದೆ. ಮುಖ್ಯ ಪ್ರಶಸ್ತಿಗೆ ಒಂದು ಲಕ್ಷ ರೂಪಾಯಿ ಹಾಗೂ ಅನುವಾದ ಪ್ರಶಸ್ತಿಗೆ ಐವತ್ತು ಸಾವಿರ ರೂಪಾಯಿ ಹಾಗೂ ಸನ್ಮಾನಗಳು ಒಳಗೊಂಡಿರುತ್ತವೆ.
ಇದನ್ನು ಓದಿ: ಕಾಲ್ಪನಿಕ ಚರಿತೆಯೂ ಇತಿಹಾಸಕಾರರ ಅನಿಶ್ಚಿತ ಭವಿಷ್ಯವೂ
‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ವಿವಿಧ ಪ್ರಬಂಧಗಳ ಸಂಕಲನವಾಗಿದೆ. ಇದನ್ನು ಗದಗದ ಲಡಾಯಿ ಪ್ರಕಾಶನ ಪ್ರಕಟಪಡಿಸಿದೆ. ದೇವದತ್ತ ಪಟ್ಟನಾಯಕ ಅವರ ‘ಸೀತಾ’ ಕೃತಿಯನ್ನು ಇಂಗ್ಲಿಷನಿಂದ ಕನ್ನಡಕ್ಕೆ ಪದ್ಮರಾಜ ದಂಡಾವತಿ ಅವರು ಅನುವಾದಿಸಿದ್ದಾರೆ. ಇದನ್ನು ಧಾರವಾಡದ ಮನೋಹರ ಗ್ರಂಥಮಾಲೆ ಪ್ರಕಟಿಸಿದೆ.
ಇದನ್ನು ಓದಿ: ಸಾಮಾಜಿಕ ಅಸ್ಪೃಶ್ಯತೆಗಿಂತಲೂ ಧಾರ್ಮಿಕ ಅಸ್ಪೃಶ್ಯತೆ ಬಹುದೊಡ್ಡ ಅಪಾಯಕಾರಿ
ಕೇಂದ್ರ ಸಾಹಿತ್ಯ ಅಕಾಡೆಮಿ ಕನ್ನಡ ವಿಭಾಗದ ಸಂಚಾಲಕ ಡಾ.ಸರಜೂ ಕಾಟ್ಕರ್ ಅವರ ಉಸ್ತುವಾರಿಯಲ್ಲಿ ಪ್ರಶಸ್ತಿ ಆಯ್ಕೆ ಸಮಿತಿಯು ನಡೆಯಿತು. ಅನುವಾದ ಆಯ್ಕೆ ಸಮಿತಿಯಲ್ಲಿ ಜಗದೀಶ್ ಕೊಪ್ಪ, ಕಮಲಾಕರ ಭಟ್ಟ ಹಾಗೂ ಮೋಹನ್ ಕುಂಟಾರ ನಿರ್ವಹಿಸಿದ್ದಾರೆ. ಮುಖ್ಯ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಡಾ. ಸಿ. ನಾಗಣ್ಣ, ಪದ್ಮರಾಜ ದಂಡಾವತಿ ಹಾಗೂ ಚಂದ್ರಶೇಖರ ವಸ್ತ್ರದ ಅವರು ನಿರ್ವಹಿಸಿದರು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ
2023 ಮಾರ್ಚ್ ತಿಂಗಳಲ್ಲಿ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವಿರುತ್ತದೆ. ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಚಂದ್ರಶೇಖರ ಕಂಬಾರ ಅವರು ಅಭಿನಂದಿಸಿದ್ದಾರೆ.